One Rank One Pension: ಮೋದಿ ಮಹತ್ವಾಕಾಂಕ್ಷಿ ಯೋಜನೆ ಒನ್‌ ರ‍್ಯಾಂಕ್ ಒನ್‌ ಪೆನ್ಶನ್ ಜಾರಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

OROP: ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಒನ್‌ ರ‍್ಯಾಂಕ್ ಒನ್‌ ಪೆನ್ಶನ್ ಜಾರಿಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

One Rank One Pension: ಮೋದಿ ಮಹತ್ವಾಕಾಂಕ್ಷಿ ಯೋಜನೆ ಒನ್‌ ರ‍್ಯಾಂಕ್ ಒನ್‌ ಪೆನ್ಶನ್ ಜಾರಿಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ನರೇಂದ್ರ ಮೋದಿ
Updated By: Digi Tech Desk

Updated on: Dec 23, 2022 | 11:19 PM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಸರ್ಕಾರ 2014ರಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ನಿವೃತ್ತ ಸೈನಿಕರಿಗೆ ಒನ್ ರ‍್ಯಾಂಕ್ ಒನ್ ಪೆನ್ಶನ್‌ (One Rank One Pension) (ಒಆರ್‌ಒಪಿ) ಯೋಜನೆ ಘೋಷಿಸಿತ್ತು. ಅದನ್ನು ಇದೀಗ  ಜಾರಿಗೆ ತರಲು ಕೇಂದ್ರ ಸಚಿವ ಸಂಪುಟ (Union Cabinet) ಒಪ್ಪಿಗೆ ಸೂಚಿಸಿದೆ. ಇದರಿಂದ 25 ಲಕ್ಷಕ್ಕೂ ಹೆಚ್ಚು ಯೋಧರಿಗೆ ಅನುಕೂಲವಾಗಲಿದೆ.

ಇದನ್ನೂ ಓದಿ: ಬಡವರಿಗೆ ಮೋದಿ ಸರ್ಕಾರದಿಂದ ಹೊಸ ವರ್ಷದ ಉಡುಗೊರೆ, ಉಚಿತ ಆಹಾರ ಧಾನ್ಯ ವಿತರಣೆಗೆ ತೀರ್ಮಾನ

ಇಂದು(ಡಿಸೆಂಬರ್ 23) ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಒನ್ ರ‍್ಯಾಂಕ್ ಒನ್ ಪೆನ್ಶನ್‌ ಯೋಜನೆ ಜಾರಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಜುಲೈ 1, 2019 ರಿಂದ ಜಾರಿಗೆ ಬರುವಂತೆ ಯೋಜನೆ ಪರಿಷ್ಕರಣೆ. ಯೋಜನೆ ಪರಿಷ್ಕರಣೆಯಿಂದ 8,450 ಕೋಟಿ ರೂ.ಹೆಚ್ಚವರಿ ವೆಚ್ಚವಾಗಲಿದೆ.

ಒನ್ ರ್ಯಾಂಕ್ ಒನ್ ಪೆನ್ಷನ್ ಯೋಜನೆ​ ಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಯೋಜನೆ ಜಾರಿಗೆಯಿಂದ 25 ಲಕ್ಷಕ್ಕೂ ಹೆಚ್ಚು ಯೋಧರ ಕುಟುಂಬಗಳಿಗೆ ಸೌಲಭ್ಯ ಸಿಗಲಿದೆ. ಒಆರ್‌ಒಪಿ ಯೋಜನೆಯಡಿ ವಿವಿಧ ಸಮಯಗಳಲ್ಲಿ ನಿವೃತ್ತರಾದ ಒಂದೇ ಶ್ರೇಣಿಯ ಸೈನಿಕರು ಸಮಾನ ಪಿಂಚಣಿ ಪಡೆಯುತ್ತಾರೆ. ಅವರು ಯಾವುದೇ ಸಮಯದಲ್ಲಿ ನಿವೃತ್ತರಾಗಿದ್ದರೂ ಪಿಂಚಣಿ ಮೊತ್ತದಲ್ಲಿ ಏಕರೂಪತೆ ಇರುತ್ತದೆ ಎಂದು ವಿತ್ತ ಇಲಾಖೆ ರಾಜ್ಯ ಸಚಿವ ಅನುರಾಗ್​ ಠಾಕೂರ್​ ಹೇಳಿದರು.

ಇದನ್ನೂ ಓದಿ: OPS vs NPS: ಹಳೆ ಪಿಂಚಣಿ ಪರ ಕೂಗೆದ್ದಿರುವುದೇಕೆ? ಒಪಿಎಸ್, ಎನ್​ಪಿಎಸ್​ ವ್ಯತ್ಯಾಸದ ಬಗ್ಗೆ ಇಲ್ಲಿದೆ ಸಮಗ್ರ ಮಾಹಿತಿ

ನವೆಂಬರ್ 7, 2015ರಲ್ಲಿ ಕೇಂದ್ರ ಸರ್ಕಾರ ರಕ್ಷಣಾ ಪಡೆಗೆ OROP ಯೋಜನೆ ಪರಿಚಯಿಸಿತು. ಆದರೆ ಈ ಯೋಜನೆಯಲ್ಲಿ ಲೋಪಗಳಿವೆ. ಇದರಿಂದ ಮಾಜಿ ಯೋಧರಿಗೆ ಸಂಕಷ್ಟ ಎದುರಾಗಲಿದೆ ಎಂದು ಎಕ್ಸ್ ಸರ್ವೀಸ್‌ಮೆನ್ ಮೂವ್‌ಮೆಂಟ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಸುದೀರ್ಘ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಇದೀಗ ಕೇಂದ್ರದ OROP ಯೋಜನೆನ್ನು ಎತ್ತಿ ಹಿಡಿದಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:28 pm, Fri, 23 December 22