AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Cabinet Expansion: ನಾಳೆಯಲ್ಲ, ನಾಡಿದ್ದು ಜುಲೈ 8ಕ್ಕೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ

PM Modi Cabinet: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ಸರ್ಕಾರಕ್ಕೆ ನೂತನ ಸಚಿವರು ಸೇರ್ಪಡೆಗೊಳ್ಳಲಿದ್ದಾರೆ. ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ‌ ಇಬ್ಬರಿಗೆ‌ ಸಚಿವ ಸ್ಥಾನ‌‌ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Union Cabinet Expansion: ನಾಳೆಯಲ್ಲ, ನಾಡಿದ್ದು ಜುಲೈ 8ಕ್ಕೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ
ಪ್ರಧಾನಿ ನರೇಂದ್ರ ಮೋದಿ ಲೆಕ್ಕಾಚಾರವೇನು?
TV9 Web
| Updated By: guruganesh bhat|

Updated on:Jul 06, 2021 | 3:02 PM

Share

ದೆಹಲಿ: ಜುಲೈ 8ರಂದು ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಂದು ಬೆಳಗ್ಗೆ 10.30ಕ್ಕೆ ಕೇಂದ್ರ ಸಂಪುಟ ವಿಸ್ತರಣೆಯಾಗಲಿದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ಸರ್ಕಾರಕ್ಕೆ ನೂತನ ಸಚಿವರು ಸೇರ್ಪಡೆಗೊಳ್ಳಲಿದ್ದಾರೆ. ಕೇಂದ್ರ ಸಂಪುಟದಲ್ಲಿ ಕರ್ನಾಟಕದಿಂದ‌ ಇಬ್ಬರಿಗೆ‌ ಸಚಿವ ಸ್ಥಾನ‌‌ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕೇಂದ್ರ ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಚಿತ್ರದುರ್ಗ ಕ್ಷೇತ್ರದ ಸಂಸದ ನಾರಾಯಣಸ್ವಾಮಿಗೆ ಕೇಂದ್ರ ಸಚಿವ ಸ್ಥಾನ ಸಿಗುವ ಸಾಧ್ಯತೆ ಇದೆ. ವರಿಷ್ಠರು ಬುಲಾವ್ ನೀಡಿದ ಹಿನ್ನೆಲೆ ಮಧ್ಯಾಹ್ನ ದೆಹಲಿಗೆ ತೆರಳಲು ನಾರಾಯಣಸ್ವಾಮಿ ಸಿದ್ಧತೆ ಮಾಡಿಕೊಂಡಿದ್ದಾರೆ. ಪತ್ನಿ ವಿಜಯ ಮತ್ತು ಪುತ್ರಿ ಶೀತಲ್ ಸೇರಿ ಕುಟುಂಬ ಸಮೇತ ದೆಹಲಿಗೆ ತೆರಳಲಿದ್ದಾರೆ.

ಮೊದಲ ಬಾರಿಗೆ ಸಂಸದರಾಗಿರುವ ಎಡಗೈ ಸಮುದಾಯದ ನಾಯಕ ನಾರಾಯಣಸ್ವಾಮಿಗೆ ಮೋದಿ ಸಂಪುಟದಲ್ಲಿ ಸ್ಥಾನ ಸಿಗುತ್ತಾ? ಎಂದು ನೋಡಬೇಕಿದೆ. ನಾರಾಯಣಸ್ವಾಮಿಗೆ ಜಾತಿ ಲೆಕ್ಕಾಚಾರದ ಆಧಾರದ ಮೇಲೆ ಸಚಿವ ಸ್ಥಾನ ಒಲಿಯುವ ಸಾಧ್ಯತೆ ಇದೆ. ಪರಿಶಿಷ್ಟ ಜಾತಿ ಎಡಗೈ ಸಮೂದಾಯಕ್ಕೆ ಸೇರಿರುವುದರಿಂದ ಸಚಿವ ಸ್ಥಾನ ಗಿಟ್ಟಿಸಿಕೊಳ್ಳು ಅವಕಾಶ ಇದೆ.

ಇನ್ನು ಜೆಡಿಯು ಪಕ್ಷದ ಲಾಲನ್ ಸಿಂಗ್, ಮಹಾರಾಷ್ಟ್ರದ ನಾರಾಯಣ್ ರಾಣೆ, ಅಸ್ಸಾಂ ಸರ್ಬಾನಂದ ಸೋನವಾಲ್ ಕೂಡ ಇಂದು ಮಧ್ಯಾಹ್ನ ದೆಹಲಿಗೆ ಆಗಮಿಸಲಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾಗೆ ಸಂಪುಟದಲ್ಲಿ ಸ್ಥಾನ ಬಹುತೇಕ ಖಚಿತವಾಗಿದೆ. ಹೀಗಾಗಿ ಜ್ಯೋತಿರಾದಿತ್ಯ ಮಧ್ಯಪ್ರದೇಶ ಇಂದೋರ್ನಿಂದ ದೆಹಲಿಗೆ ಆಗಮಿಸಿದ್ದಾರೆ.

ಇನ್ನು ದಿವಂಗತ ರಾಮವಿಲಾಸ್ ಪಾಸ್ವಾನ್ ಸೋದರ ಪಶುಪತಿ ಪಾರಸ್ ಕುರ್ತಾ ಖರೀದಿ ಮಾಡುತ್ತಿದ್ದಾರೆ. ಕೇಂದ್ರದ ಕ್ಯಾಬಿನೆಟ್ನಲ್ಲಿ ಎಲ್ಜೆಪಿ ಪಕ್ಷದ ಕೋಟಾದಲ್ಲಿ ಪಶುಪತಿ‌ಪಾರಸ್ಗೆ ಸ್ಥಾನ ಸಿಗುವ ಸಾಧ್ಯತೆ ಇದೆ. ಬಿಹಾರದ ಜೆಡಿಯು ಪಕ್ಷದ ಸಿ.ಪಿ.ಸಿಂಗ್ ಕೂಡ ದೆಹಲಿಗೆ ಆಗಮಿಸಲಿದ್ದಾರೆ. ಜೆಡಿಯು ಕೋಟಾದಲ್ಲಿ ಸಿ.ಪಿ.ಸಿಂಗ್ಗೆ ಸಚಿವ ಸ್ಥಾನ ಸಾಧ್ಯತೆ‌ ಇದೆ. ಇಂದು ಸಂಜೆ 5 ಗಂಟೆಗೆ ಮೋದಿ ಕರೆದಿದ್ದ ಸಚಿವರ ಸಭೆ ರದ್ದಾಗಿದೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವವರಿಗೆ ದೆಹಲಿಗೆ ಬರುವಂತೆ ಸೂಚನೆ ಹಿನ್ನೆಲೆಯಲ್ಲಿ ಎಲ್ಲರೂ ಆಗಮಿಸಲಿದ್ದಾರೆ.

ಇದನ್ನೂ ಓದಿ: 

ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ; ಕೊವಿಡ್ ಸಂಕಷ್ಟ ಹಿನ್ನೆಲೆಯಲ್ಲಿ ಈ ನಿರ್ಧಾರ: ಲಕ್ಷ್ಮಣ ಸವದಿ ಸ್ಪಷ್ಟನೆ

Syama Prasad Mookerjee ಶ್ಯಾಮ ಪ್ರಸಾದ್ ಮುಖರ್ಜಿ 120 ನೇ ಜನ್ಮ ದಿನಾಚರಣೆ: ಗೌರವ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ

(Union Cabinet expansion to be held on July 8 morning says source)

Published On - 2:50 pm, Tue, 6 July 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ