Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಮೂರು ಕಾರ್ಪೊರೇಷನ್‌ಗಳನ್ನು ವಿಲೀನಗೊಳಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ತಿದ್ದುಪಡಿ ಕಾಯಿದೆಯು ಅಸ್ತಿತ್ವದಲ್ಲಿರುವ ಮೂರು ಕಾರ್ಪೊರೇಷನ್‌ಗಳನ್ನು ಒಳಗೊಳ್ಳುವ ಮೂಲಕ ದೆಹಲಿಯ ಏಕೀಕೃತ ಮುನ್ಸಿಪಲ್ ಕಾರ್ಪೊರೇಷನ್ ಆಗಿ ಮಾಡುತ್ತದೆ.

ದೆಹಲಿಯ ಮೂರು ಕಾರ್ಪೊರೇಷನ್‌ಗಳನ್ನು ವಿಲೀನಗೊಳಿಸುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ದೆಹಲಿ ಕಾರ್ಪೊರೇಷನ್‌
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Mar 22, 2022 | 6:13 PM

ದೆಹಲಿ: ದೆಹಲಿಯ ಮೂರು ಮುನ್ಸಿಪಲ್ ಕಾರ್ಪೊರೇಷನ್‌ಗಳನ್ನು(municipal corporations) ವಿಲೀನಗೊಳಿಸುವ ಗುರಿಯನ್ನು ಹೊಂದಿರುವ ಮಸೂದೆಗೆ ಕೇಂದ್ರ ಸಚಿವ ಸಂಪುಟ (Union Cabinet) ಮಂಗಳವಾರ ತನ್ನ ಒಪ್ಪಿಗೆ ನೀಡಿದೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ತಿದ್ದುಪಡಿ ಕಾಯಿದೆಯು ಅಸ್ತಿತ್ವದಲ್ಲಿರುವ ಮೂರು ಕಾರ್ಪೊರೇಷನ್‌ಗಳನ್ನು ಒಳಗೊಳ್ಳುವ ಮೂಲಕ ದೆಹಲಿಯ ಏಕೀಕೃತ ಮುನ್ಸಿಪಲ್ ಕಾರ್ಪೊರೇಷನ್ (unified Municipal Corporation) ಆಗಿ ಮಾಡುತ್ತದೆ. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯಿದೆ, 2022, ಪ್ರಸ್ತುತ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಅನುಮೋದನೆಯಾಗುವ ಸಾಧ್ಯತೆಯಿದೆ. ಹಿಂದಿನ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಅನ್ನು ಮೂರು ಮುನ್ಸಿಪಲ್ ಕಾರ್ಪೊರೇಶನ್​​ಗಳಾಗಿ  ವಿಭಜಿಸಲಾಯಿತು. 2011 ರಲ್ಲಿ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ತಿದ್ದುಪಡಿ ಕಾಯ್ದೆ, 1911 (ದೆಹಲಿ ಕಾಯಿದೆ, 12 ಆಫ್ 2011) ಪ್ರಕಾರ ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (SDMC), ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (NDMC), ಮತ್ತು ಪೂರ್ವ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (EDMC) ಎಂದು ವಿಭಜಿಸಲಾಗಿದೆ. ಪ್ರತಿ ನಿಗಮದ ಪ್ರಾದೇಶಿಕ ವಿಭಾಗಗಳು ಮತ್ತು ಆದಾಯ-ಉತ್ಪಾದಿಸುವ ಸಾಮರ್ಥ್ಯದ ವಿಷಯದಲ್ಲಿ ನಿಗಮದ ಮೂರು ವಿಭಜನೆಯು ಅಸಮವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಪರಿಣಾಮವಾಗಿ, ಮೂರು ನಿಗಮಗಳಿಗೆ ಲಭ್ಯವಿರುವ ಸಂಪನ್ಮೂಲಗಳಲ್ಲಿ ದೊಡ್ಡ ಅಂತರವಿತ್ತು ಅದೇ ರೀತಿ ಜವಾಬ್ದಾರಿಗಳಿಗೂ. ಕಾಲಾಂತರದಲ್ಲಿ ಅಂತರವು ಹೆಚ್ಚುತ್ತಿದೆ, ಮೂರು ಮುನ್ಸಿಪಲ್ ಕಾರ್ಪೊರೇಷನ್‌ಗಳ ಆರ್ಥಿಕ ತೊಂದರೆಗಳನ್ನು ಹೆಚ್ಚಿಸಿದೆ, ತಮ್ಮ ಉದ್ಯೋಗಿಗಳಿಗೆ ಸಂಬಳ ಮತ್ತು ನಿವೃತ್ತಿ ಪ್ರಯೋಜನಗಳನ್ನು ಸಕಾಲಿಕವಾಗಿ ಪಾವತಿಸಲು ಅಸಮರ್ಥರನ್ನಾಗಿ ಮಾಡುತ್ತದೆ. ಇದರಿಂದಾಗಿ ದೆಹಲಿಯಲ್ಲಿ ನಾಗರಿಕ ಸೇವೆಗಳನ್ನು ನಿರ್ವಹಿಸುವಲ್ಲಿ ಗಂಭೀರ ಅಡಚಣೆಗಳನ್ನು ಉಂಟುಮಾಡುತ್ತದೆ ಎಂದು ಅಧಿಕಾರಿ ಹೇಳಿದ್ದಾರೆ.

ದೆಹಲಿಯ ಜನರಿಗೆ ಹೆಚ್ಚಿನ ಪಾರದರ್ಶಕತೆ, ಸುಧಾರಿತ ಆಡಳಿತ ಮತ್ತು ನಾಗರಿಕ ಸೇವೆಗಳ ಹೆಚ್ಚು ಪರಿಣಾಮಕಾರಿ ವಿತರಣೆ ಖಚಿತಪಡಿಸಿಕೊಳ್ಳಲು 1957 ರ ಪ್ರಧಾನ ಕಾಯಿದೆಯಲ್ಲಿ ಇನ್ನೂ ಕೆಲವು ತಿದ್ದುಪಡಿಗಳನ್ನು ತೆರವುಗೊಳಿಸಲಾಗಿದೆ ಎಂದು ಮೇಲೆ ಉಲ್ಲೇಖಿಸಿದ ಅಧಿಕಾರಿಗಳು ತಿಳಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ, ದೆಹಲಿ ರಾಜ್ಯ ಚುನಾವಣಾ ಆಯೋಗವು ಮೂರು ಮುನ್ಸಿಪಲ್ ಕಾರ್ಪೊರೇಶನ್‌ಗಳ ಏಕೀಕರಣಕ್ಕಾಗಿ ಕೇಂದ್ರದ ಸಂವಹನದ ನಂತರ ಚುನಾವಣೆಗಳನ್ನು ನಡೆಸಬಹುದೇ ಎಂಬುದರ ಕುರಿತು ಕಾನೂನು ಸಲಹೆಯನ್ನು ಕೇಳಿತು.

ಆಯೋಗವು ಸಂವಹನವನ್ನು ಸ್ವೀಕರಿಸಿದ ನಂತರ, ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್, ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಪೂರ್ವ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆಯ ದಿನಾಂಕಗಳ ಘೋಷಣೆಯನ್ನು ಮುಂದೂಡಿತ್ತು.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಎಂಸಿಡಿ ಚುನಾವಣೆ ನಡೆಯಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದು ಚುನಾವಣೆಯನ್ನು ಮುಂದೂಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ‘ಹಿಂಸಾಚಾರ ಸಂಸ್ಕೃತಿ ಮತ್ತು ಅಧರ್ಮದ ಹಿಡಿತದಲ್ಲಿದೆ’ ಎಂದ ರಾಜ್ಯಪಾಲ

Published On - 6:09 pm, Tue, 22 March 22

‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ
ಕರ್ನಾಟಕದಷ್ಟು ಸುಂದರ ಸ್ಥಳ ಮತ್ತು ಜನ ಬೇರೆಲ್ಲೂ ಇಲ್ಲ: ಮೋನಿಕ ಸತ್ಯ