PM Poshan scheme ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪಿಎಂ ಪೋಷಣ್ ಯೋಜನೆ ಎಂದು ಮರುನಾಮಕರಣ ಮಾಡಿದ ಕೇಂದ್ರ; ಯೋಜನೆಯಲ್ಲಿ ವಿಶೇಷ ಏನಿದೆ?

MyGovIndia ದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿರುವ ಇನ್ಫೋಗ್ರಾಫಿಕ್ ಪ್ರಕಾರ ಈ ಯೋಜನೆಯು 11.20 ಲಕ್ಷ ಶಾಲೆಗಳಲ್ಲಿ 11.80 ಕೋಟಿ ಮಕ್ಕಳನ್ನು ಒಳಗೊಳ್ಳುವ ಗುರಿಯನ್ನು ಹೊಂದಿದೆ. ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಂದರಿಂದ...

PM Poshan scheme ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಪಿಎಂ ಪೋಷಣ್ ಯೋಜನೆ ಎಂದು ಮರುನಾಮಕರಣ ಮಾಡಿದ ಕೇಂದ್ರ; ಯೋಜನೆಯಲ್ಲಿ ವಿಶೇಷ ಏನಿದೆ?
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 29, 2021 | 8:36 PM

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಶಾಲೆಗೆ ಹೋಗುವ ಮಕ್ಕಳಲ್ಲಿ ಅಪೌಷ್ಟಿಕತೆಯನ್ನು ಪರಿಹರಿಸುವ ಸಲುವಾಗಿ ‘ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ’ (Pradhan Mantri Poshan Shakti Nirman) ಯೋಜನೆಗೆ ಅನುಮೋದನೆ ನೀಡಿದೆ. ಈಗಿರುವ ಮಿಡ್-ಡೇ ಮೀಲ್ ಸ್ಕೀಮ್ (Mid-Day Meal scheme) ವಿದ್ಯಾರ್ಥಿಗಳಿಗೆ ಬಿಸಿ ಊಟವನ್ನು ಒದಗಿಸುತ್ತದೆ. ಇದನ್ನು ಪಿಎಂ ಪೋಷಣ್ ಶಕ್ತಿ ನಿರ್ಮಾಣ ರಾಷ್ಟ್ರೀಯ ಯೋಜನೆ ಎಂದು ಮರುನಾಮಕರಣ ಮಾಡಲಾಗುವುದು. 2021-22 ರಿಂದ 2025-26 ರವರೆಗೆ ಐದು ವರ್ಷಗಳವರೆಗೆ ಈ ಯೋಜನೆಯನ್ನು ಮುಂದುವರಿಸಲು ಒಟ್ಟು 1.3 ಲಕ್ಷ ಕೋಟಿಗೂ ಹೆಚ್ಚಿನ ಬಜೆಟ್ ಅನ್ನು ನಿಗದಿಪಡಿಸಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರವು 54061.73 ಕೋಟಿ ರೂ., ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು 31,733.17 ಕೋಟಿ ರೂ. ಆಹಾರ ಧಾನ್ಯಗಳ ಮೇಲೆ ಕೇಂದ್ರವು ಸುಮಾರು 45,000 ಕೋಟಿ ರೂಪಾಯಿಗಳ ಹೆಚ್ಚುವರಿ ವೆಚ್ಚವನ್ನು ಭರಿಸುತ್ತದೆ ಎಂದು ಸರ್ಕಾರವು ಹೇಳಿಕೆಯಲ್ಲಿ ತಿಳಿಸಿದೆ.

MyGovIndia ದ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿರುವ ಇನ್ಫೋಗ್ರಾಫಿಕ್ ಪ್ರಕಾರ ಈ ಯೋಜನೆಯು 11.20 ಲಕ್ಷ ಶಾಲೆಗಳಲ್ಲಿ 11.80 ಕೋಟಿ ಮಕ್ಕಳನ್ನು ಒಳಗೊಳ್ಳುವ ಗುರಿಯನ್ನು ಹೊಂದಿದೆ. ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ಒಂದರಿಂದ ಎಂಟನೇ ತರಗತಿಯ ಎಲ್ಲಾ ಶಾಲೆಗೆ ಹೋಗುವ ವಿದ್ಯಾರ್ಥಿಗಳು ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಟ್ವಿಟರ್‌ನಲ್ಲಿ ಈ ಯೋಜನೆಯನ್ನು ಜಾರಿಗೊಳಿಸುವಲ್ಲಿ ರೈತ ಉತ್ಪಾದಕರ ಸಂಘಟನೆಗಳು (ಎಫ್‌ಪಿಒ) ಮತ್ತು ಮಹಿಳಾ ಸ್ವಸಹಾಯ ಗುಂಪುಗಳ ಭಾಗವಹಿಸುವಿಕೆಯನ್ನು ಪ್ರೋತ್ಸಾಹಿಸುತ್ತಾರೆ ಎಂದು ಹೇಳಿದ್ದಾರೆ.

ಇನ್ನೆರಡು “ವಿಶೇಷ ಗಮನದ ಪ್ರದೇಶಗಳನ್ನು” ಹೈಲೈಟ್ ಮಾಡಿದ ಸಚಿವರು ಇನ್ಫೋಗ್ರಾಫಿಕ್ ಅನ್ನು ಹಂಚಿಕೊಂಡಿದ್ದು ಈ ಯೋಜನೆಯು “ಮಹತ್ವಾಕಾಂಕ್ಷೆಯ ಮತ್ತು ಬುಡಕಟ್ಟು ಜಿಲ್ಲೆಗಳು ಮತ್ತು ರಕ್ತಹೀನತೆ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ಪೂರಕ ಪೌಷ್ಟಿಕಾಂಶವನ್ನು ಒದಗಿಸುತ್ತದೆ” ಎಂದಿದ್ದಾರೆ.

” #Vocal4Local ಗೆ ಅನುಗುಣವಾಗಿ ಸಾಂಪ್ರದಾಯಿಕ ಪಾಕಪದ್ಧತಿ ಮತ್ತು ಸಂಸ್ಕೃತಿಯನ್ನು ಉತ್ತೇಜಿಸಲು ಎಲ್ಲಾ ಹಂತಗಳಲ್ಲಿ ಅಡುಗೆ ಸ್ಪರ್ಧೆಗಳನ್ನು ಪ್ರೋತ್ಸಾಹಿಸಲಾಗುವುದು” ಎಂದು ಪ್ರಕಟಣೆಯಲ್ಲಿ ಹೇಳಿದೆ.

ಇದನ್ನೂ ಓದಿ: ಮೋದಿ ಮೊದಲ ಬಾರಿಗೆ ಪ್ರಧಾನಿಯಾಗಿದ್ದಾಗ ನಡೆದ ಗಲಾಟೆ; ಶಾಸಕ ಯತ್ನಾಳ್ ಸೇರಿ ಎಲ್ಲ 134 ಜನರು ಖುಲಾಸೆ

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ