AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾನೂನು ಹಿಂತೆಗೆದುಕೊಳ್ಳುವ ಮಸೂದೆಗಳನ್ನು ಕೇಂದ್ರ ಬುಧವಾರ ಅನುಮೋದಿಸುವ ಸಾಧ್ಯತೆ: ವರದಿ

ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 29 ರಂದು ಪ್ರಾರಂಭವಾಗಲಿದೆ. ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ಕಳೆದ ವರ್ಷ ನವೆಂಬರ್‌ನಿಂದ ದೆಹಲಿಯ ಗಡಿಯಲ್ಲಿನ ಮೂರು ಸ್ಥಳಗಳಲ್ಲಿ ಧರಣಿ ನಿರತ ರೈತರು ಕುಳಿತಿದ್ದಾರೆ.

ಕೃಷಿ ಕಾನೂನು ಹಿಂತೆಗೆದುಕೊಳ್ಳುವ ಮಸೂದೆಗಳನ್ನು ಕೇಂದ್ರ ಬುಧವಾರ ಅನುಮೋದಿಸುವ ಸಾಧ್ಯತೆ: ವರದಿ
ರೈತರ ಪ್ರತಿಭಟನೆ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 21, 2021 | 9:58 PM

Share

ದೆಹಲಿ: ಮೂರು ಕೃಷಿ ಕಾನೂನುಗಳನ್ನು (Farm Laws) ಹಿಂತೆಗೆದುಕೊಳ್ಳುವ ಮಸೂದೆಗಳನ್ನು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದಿಸುವ ಸಾಧ್ಯತೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.ಈ ಮಸೂದೆಗಳನ್ನು ಸಂಸತ್ತಿನ ಮುಂಬರುವ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಮೂಲಗಳು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ. ಗುರುಪುರಬ್ ಸಂದರ್ಭದಲ್ಲಿ, ರಾಷ್ಟ್ರದ ಹಿತದೃಷ್ಟಿಯಿಂದ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಸರ್ಕಾರದ ಉದ್ದೇಶವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಶುಕ್ರವಾರ ಘೋಷಿಸಿದ್ದರು. ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 29 ರಂದು ಪ್ರಾರಂಭವಾಗಲಿದೆ. ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ಕಳೆದ ವರ್ಷ ನವೆಂಬರ್‌ನಿಂದ ದೆಹಲಿಯ ಗಡಿಯಲ್ಲಿನ ಮೂರು ಸ್ಥಳಗಳಲ್ಲಿ ಧರಣಿ ನಿರತ ರೈತರು ಕುಳಿತಿದ್ದಾರೆ. ಸಂಸತ್ತಿನ ಕಾನೂನನ್ನು ರದ್ದುಪಡಿಸುವವರೆಗೆ ಅವರು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. ಪ್ರಧಾನಿಯವರ ಘೋಷಣೆಯ ನಂತರ ಸಂಸತ್ತಿನಲ್ಲಿ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲು ಸರ್ಕಾರ ಈಗ ಮಸೂದೆಗಳನ್ನು ತರಲಿದೆ.

ರೈತರ ಆರು ಬೇಡಿಕೆಗಳ ಕುರಿತು ಮಾತುಕತೆಗೆ ಒತ್ತಾಯಿಸಿ ಪ್ರಧಾನಿಗೆ ಪತ್ರ ಬರೆದ ಎಸ್‌ಕೆಎಂ ರೈತ ಮುಖಂಡರು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ಎಂಎಸ್‌ಪಿ ಖಾತರಿ ಕಾನೂನನ್ನು ಒಳಗೊಂಡಿರುವ ತಮ್ಮ ಆರು ಬೇಡಿಕೆಗಳ ಬಗ್ಗೆ ಸರ್ಕಾರ ಚರ್ಚೆ ನಡೆಸಿದರೆ ಮಾತ್ರ ಪ್ರತಿಭಟನೆಯನ್ನು ಕೊನೆಗೊಳಿಸುವುದಾಗಿ ಹೇಳಿದ್ದಾರೆ.

ಮೂರು “ಕಪ್ಪು” ಕಾನೂನುಗಳನ್ನು ಹಿಂತೆಗೆದುಕೊಳ್ಳುವ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ರೈತ ಸಂಘಗಳ ಒಕ್ಕೂಟದ ಸಂಯುಕ್ತ ಕಿಸಾನ್ ಮೋರ್ಚಾ, ಸುಮಾರು ಒಂದು ವರ್ಷದಿಂದ ಆಂದೋಲನ ನಡೆಸುತ್ತಿರುವವರು ಶಾಸನವನ್ನು ರದ್ದುಗೊಳಿಸುವುದರ ಜೊತೆಗೆ ಹಲವಾರು ಬೇಡಿಕೆಗಳನ್ನು ಎತ್ತಿದ್ದಾರೆ ಎಂದು ಹೇಳಿದರು.

ಪ್ರಧಾನಿಯವರೇ, ಈಗ ನಾವು ಮನೆಗೆ ಹಿಂತಿರುಗಿ ಎಂದು ರೈತರಲ್ಲಿ ಮನವಿ ಮಾಡಿದ್ದೀರಿ. ನಾವು ಬೀದಿಗಳಲ್ಲಿ ಕುಳಿತುಕೊಳ್ಳಲು ಇಷ್ಟಪಡುವುದಿಲ್ಲ ಎಂದು ನಿಮಗೆ ಭರವಸೆ ನೀಡಲು ನಾವು ಬಯಸುತ್ತೇವೆ. ನೀವು ಈ ಇತರ ಸಮಸ್ಯೆಗಳನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಿದ ನಂತರ, ನಾವು ನಮ್ಮ ಮನೆಗಳು, ಕುಟುಂಬಗಳು ಮತ್ತು ಕೃಷಿಗೆ ಮರಳಬೇಕೆಂದು ನಾವು ಬಯಸುತ್ತೇವೆ. ನಿಮಗೂ ಅದೇ ಬೇಕಾದರೆ, ಮೇಲಿನ ಆರು ವಿಷಯಗಳ ಬಗ್ಗೆ ಸರ್ಕಾರವು ತಕ್ಷಣವೇ ಸಂಯುಕ್ತ ಕಿಸಾನ್ ಮೋರ್ಚಾದೊಂದಿಗೆ ಮಾತುಕತೆಯನ್ನು ಪುನರಾರಂಭಿಸಬೇಕು ಎಂದು ರೈತ ಸಂಘಟನೆ ಹೇಳಿದೆ. ಮಾತುಕತೆ ನಡೆಯುವವರೆಗೆ, ಎಸ್‌ಕೆಎಂ ಯೋಜಿಸಿದಂತೆ ಚಳವಳಿಯನ್ನು ಮುಂದುವರಿಸುತ್ತದೆ ಎಂದು ಅದು ಹೇಳಿದೆ.

ಪತ್ರದಲ್ಲಿರುವ 6  ಬೇಡಿಕೆಗಳು ಮೊದಲ ಬೇಡಿಕೆಯಲ್ಲಿ, ಸರ್ಕಾರವು ಎಲ್ಲಾ ರೈತರಿಗೆ C2+50% ಸೂತ್ರದ ಆಧಾರದ ಮೇಲೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ಕಾನೂನುಬದ್ಧಗೊಳಿಸಬೇಕು. “ನಿಮ್ಮ ಅಧ್ಯಕ್ಷತೆಯಲ್ಲಿ ರಚಿಸಲಾದ ಸಮಿತಿಯು 2011 ರಲ್ಲಿ ಆಗಿನ ಪ್ರಧಾನಿಗೆ ಈ ಶಿಫಾರಸನ್ನು ಮಾಡಿತ್ತು ಮತ್ತು ನಿಮ್ಮ ಸರ್ಕಾರವು ಸಂಸತ್ತಿನಲ್ಲಿ ಈ ಬಗ್ಗೆ ಘೋಷಿಸಿತ್ತು” ಎಂದು ಅದು ಹೇಳಿದೆ.

ಎರಡನೇ ಬೇಡಿಕೆಯಲ್ಲಿ, ರೈತರು ಪ್ರಸ್ತಾಪಿಸಿದ “ವಿದ್ಯುತ್ ತಿದ್ದುಪಡಿ ಮಸೂದೆ, 2020/2021” ಕರಡನ್ನು ಹಿಂಪಡೆಯುವಂತೆ ಸರ್ಕಾರವನ್ನು ಕೋರಿದ್ದಾರೆ. “ಮಾತುಕತೆಯಲ್ಲಿ, ಸರ್ಕಾರವು ಅದನ್ನು ಹಿಂಪಡೆಯುವುದಾಗಿ ಭರವಸೆ ನೀಡಿತ್ತು, ಆದರೆ ನಂತರ, ಭರವಸೆಯನ್ನು ಉಲ್ಲಂಘಿಸಿದ್ದು, ಅದನ್ನು ಸಂಸತ್ತಿನ ಕಾರ್ಯಸೂಚಿಯಲ್ಲಿ ಸೇರಿಸಲಾಗಿದೆ” ಎಂದು ಎಸ್‌ಕೆಎಂ ಹೇಳಿದೆ.

ಬೆಳೆ ತ್ಯಾಜ್ಯ ಸುಡುವ ರೈತರ ಮೇಲಿನ ದಂಡದ ನಿಬಂಧನೆಗಳನ್ನು ತೆಗೆದುಹಾಕುವಂತೆ ಮೋರ್ಚಾ ತನ್ನ ಪತ್ರದಲ್ಲಿ ಸರ್ಕಾರವನ್ನು ಕೇಳಿದೆ. ಆಂದೋಲನದಲ್ಲಿ ತಮ್ಮ ಪಾತ್ರಕ್ಕಾಗಿ ದೆಹಲಿ, ಹರಿಯಾಣ, ಚಂಡೀಗಢ ಮತ್ತು ಉತ್ತರಪ್ರದೇಶದಂತಹ ರಾಜ್ಯಗಳ ಸಾವಿರಾರು ರೈತರ ವಿರುದ್ಧ ದಾಖಲಿಸಲಾದ ಪ್ರಕರಣಗಳನ್ನು ಹಿಂಪಡೆಯುವಂತೆ ಎಸ್‌ಕೆಎಂ ಸರ್ಕಾರವನ್ನು ಒತ್ತಾಯಿಸಿದೆ.

ಎಂಟು ಜನರ ಸಾವಿಗೆ ಕಾರಣವಾದ ಲಖಿಂಪುರ ಖೇರಿ ಹಿಂಸಾಚಾರದ ಬಗ್ಗೆ ತನ್ನ ಬೇಡಿಕೆಯನ್ನು ಪುನರುಚ್ಚರಿಸಿದ ಸಂಯುಕ್ತ ಕಿಸಾನ್ ಮೋರ್ಚಾ, ಸರ್ಕಾರವು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸಬೇಕು ಮತ್ತು ಘಟನೆಯಲ್ಲಿ ಅವರ ಪಾತ್ರಕ್ಕಾಗಿ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಹೇಳಿದರು.

ಚಳವಳಿಯಲ್ಲಿ ಪ್ರಾಣ ಕಳೆದುಕೊಂಡ ಸುಮಾರು 700 ರೈತರ ಕುಟುಂಬಗಳಿಗೆ ಪರಿಹಾರ ಮತ್ತು ಬೆಂಬಲಕ್ಕಾಗಿ ಎಸ್‌ಕೆಎಂ ಸರ್ಕಾರವನ್ನು ಕೇಳಿದೆ. ಪ್ರತ್ಯೇಕವಾಗಿ ಈ ರೈತರ ಸ್ಮರಣಾರ್ಥ ಹುತಾತ್ಮರ ಸ್ಮಾರಕ ನಿರ್ಮಿಸಿ, ಸಿಂಗು ಗಡಿಯಲ್ಲಿ ಭೂಮಿ ಮಂಜೂರು ಮಾಡಬೇಕು ಎಂದು ರೈತ ಸಂಘಟನೆ ಒತ್ತಾಯಿಸಿದೆ.

ಇದನ್ನೂ ಓದಿ: ಕೃಷಿ ಕಾಯ್ದೆ ಹಿಂಪಡೆಯುವ ಹಿಂದೆ ರಾಜಕೀಯ ನಡೆ ಇದೆ, ಬಿಜೆಪಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು