Puducherry: ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಸರ್ಕಾರ ಶಿಫಾರಸು

Presidents rule in Puducherry: ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಶಿಫಾರಸು ಮಾಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.

Puducherry: ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಸರ್ಕಾರ ಶಿಫಾರಸು
ರಾಷ್ಟ್ರಪತಿ ರಾಮ್​ನಾಥ್ ಕೋವಿಂದ್
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 24, 2021 | 5:32 PM

ನವದೆಹಲಿ: ಪುದುಚೇರಿಯಲ್ಲಿ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾದ ಬಳಿಕ ಬಿಜೆಪಿ ಮತ್ತು ಮೈತ್ರಿಪಕ್ಷಗಳು ಸರ್ಕಾರ ರಚನೆ ಮಾಡಲು ಮುಂದಾಗದಿರುವ ಕಾರಣ ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಸರ್ಕಾರ ಶಿಫಾರಸು ಮಾಡಿದೆ. ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಶಿಫಾರಸು ಮಾಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.

ಪುದುಚೇರಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಿದ ನಂತರ ಯಾರೊಬ್ಬರೂ ಸರ್ಕಾರ ರಚನೆಗೆ ಮುಂದಾಗಿಲ್ಲ. ಹಾಗಾಗಿ 14ನೇ ವಿಧಾನಸಭೆಯನ್ನು ವಜಾಗೊಳಿಸಲು ಲೆಫ್ಟಿನೆಂಟ್ ಗವರ್ನರ್ ಶಿಫಾರಸು ಮಾಡಿದ್ದಾರೆ. ಈಗ ನಮ್ಮ ಸಮ್ಮತಿಯನ್ನು ರಾಷ್ಟ್ರಪತಿಯವರಿಗೆ ಕಳುಹಿಸಲಾಗುವುದು. ಅವರ ಸಮ್ಮತಿ ಲಭಿಸಿದ ನಂತರ ವಿಧಾನಸಭೆ ವಿಸರ್ಜಿಸಲಾಗುವುದು ಎಂದು ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಸೋಮವಾರ ಬಹುಮತ ಸಾಬೀತುಪಡಿಸಲು ವಿಫಲಗೊಂಡ ನಾರಾಯಣಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಕಳೆದ ಕೆಲವು ವಾರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಮೈತ್ರಿಕೂಟ ಸರ್ಕಾರದ 6 ಶಾಸಕರು (ಡಿಎಂಕೆಯ ಒಬ್ಬರು) ರಾಜೀನಾಮೆ ನೀಡಿದ್ದರಿಂದ ಪುದುಚೇರಿಯಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿತ್ತು. ಕಳೆದ ವರ್ಷ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಓರ್ವ ಶಾಸಕನನ್ನು ಕಾಂಗ್ರೆಸ್ ಅನರ್ಹಗೊಳಿಸಿತ್ತು. ಹೀಗಾಗಿ ಒಟ್ಟು 33 ಸದಸ್ಯ ಬಲದ ವಿಧಾನಸಭೆಯಲ್ಲಿ ಸದಸ್ಯರ ಸಂಖ್ಯೆ 26ಕ್ಕೆ ಕುಸಿದಿತ್ತು. ಆಡಳಿತಾರೂಢ ಕಾಂಗ್ರೆಸ್ ಮೈತ್ರಿಕೂಟದಲ್ಲಿ 12 ಸದಸ್ಯರಷ್ಟೇ ಉಳಿದರು. ಈ ಪೈಕಿ 9 ಮಂದಿ ಕಾಂಗ್ರೆಸ್, ಡಿಎಂಕೆಯ ಇಬ್ಬರು ಮತ್ತು ಒಬ್ಬ ಸ್ವತಂತ್ರ ಶಾಸಕನ ಬೆಂಬಲ ಕಾಂಗ್ರೆಸ್ ಪಕ್ಷಕ್ಕಿತ್ತು. ಅದೇ ವೇಳೆ ವಿಪಕ್ಷಕ್ಕೆ 14 ಸದಸ್ಯರ ಬೆಂಬಲ ಇತ್ತು. ಈ ಪೈಕಿ ಮಾಜಿ ಮುಖ್ಯಮಂತ್ರಿ ಎನ್.ಎನ್.ರಂಗಸ್ವಾಮಿ ನೇತೃತ್ವದ ಆಲ್ ಇಂಡಿಯಾ ಎನ್​ಆರ್ ಕಾಂಗ್ರೆಸ್ (AINRC) ಪಕ್ಷದ 7 ಸದಸ್ಯರು, ಎಐಎಡಿಎಂಕೆ 4 ಮತ್ತು ಬಿಜೆಪಿಯ ಮೂವರು ನಾಮನಿರ್ದೇಶಿತ ಶಾಸಕರು ವಿಪಕ್ಷದಲ್ಲಿದ್ದಾರೆ.

ಪುದುಚೇರಿಯಲ್ಲಿನ ರಾಜಕೀಯ ಬೆಳವಣಿಗೆ ಜನವರಿ 25: ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಎ.ನಮಸ್ಸಿವಾಯಂ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶಾಸಕ ಇ. ತೀಪೈದನ್ ಕೂಡಾ ರಾಜೀನಾಮೆ. ಮರುದಿನ ಇವರಿಬ್ಬರೂ ಬಿಜೆಪಿ ಸೇರಿದ್ದರು.

ಫೆಬ್ರವರಿ 15: ಆರೋಗ್ಯ ಸಚಿವ ಮಲ್ಲಾಡಿ ಕೃಷ್ಣರಾವ್ ರಾಜೀನಾಮೆ. ರಾವ್ ಅವರ ರಾಜೀನಾಮೆಯಿಂದ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರ ಸಂಖ್ಯೆ 11ಕ್ಕೆ ಇಳಿದಿತ್ತು. ಕಳೆದ ವರ್ಷ ಜುಲೈ ತಿಂಗಳಲ್ಲಿ ಇನ್ನೊಬ್ಬ ಶಾಸಕ ಎನ್. ಧನವೇಲು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಅನರ್ಹಗೊಂಡಿದ್ದರು.

ಫೆಬ್ರವರಿ 16: ಶಾಸಕ ಎ.ಜಾನ್ ಕುಮಾರ್ ರಾಜೀನಾಮೆ. ಮರುದಿನವೇ ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ಕಿರಣ್ ಬೇಡಿ ಪದಚ್ಯುತಿ. ತೆಲಂಗಾಣ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ.

ಫೆಬ್ರವರಿ 17: ಎನ್.ರಂಗಸ್ವಾಮಿ ನೇತೃತ್ವದ ವಿಪಕ್ಷಗಳು ಆಡಳಿತಾರೂಢ ಪಕ್ಷ ಬಹುಮತ ಸಾಬೀತುಪಡಿಸಬೇಕು ಎಂದು ಲೆಫ್ಟಿನೆಂಟ್ ಗವರ್ನರ್ ಗೆ ಮನವಿ ಸಲ್ಲಿಕೆ. ಆಡಳಿತಾರೂಢ ಪಕ್ಷವು ಅಲ್ಪಮತಕ್ಕೆ ಕುಸಿದಿದ್ದು ಎರಡೂ ಪಕ್ಷಗಳು ಈಗ 14 ಸದಸ್ಯರನ್ನು ಹೊಂದಿದ್ದಾರೆ.

ಫೆಬ್ರವರಿ 18: ತಮಿಳಿಸೈ ಸೌಂದರರಾಜನ್ ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಆಗಿ ಅಧಿಕಾರ ಸ್ವೀಕಾರ. ಫೆಬ್ರವರಿ 22, ಸಂಜೆ 5ರಂದು ಬಹುಮತ ಸಾಬೀತುಪಡಿಸುವಂತೆ ಆಡಳಿತ ಪಕ್ಷಕ್ಕೆ ಆದೇಶ. ಸೋಮವಾರ ವಿಶೇಷ ಅಧಿವೇಶನ ನಡೆಸುವ ಬಗ್ಗೆ ಶಾಸನ ಸಭೆ ಕಾರ್ಯದರ್ಶಿ ಹೇಳಿಕೆ.

ಫೆಬ್ರವರಿ 21: ಕಾಂಗ್ರೆಸ್ ಪಕ್ಷದ ಕೆ. ಲಕ್ಷ್ಮಿನಾರಾಯಣನ್ ಮತ್ತು ಡಿಎಂಕೆ ಪಕ್ಷದ ವೆಂಕಟೇಶನ್ ರಾಜೀನಾಮೆ. ನಾರಾಯಣ ಸ್ವಾಮಿ ಅವರಿಂದ ಎರಡನೇ ಬಾರಿ ಶಾಸಕರ ಭೇಟಿ.

ಫೆಬ್ರವರಿ 22: ಬಹುಮತ ಸಾಬೀತು ಪಡಿಸಲು ಸರ್ಕಾರ ವಿಫಲ, ನಾರಾಯಣಸ್ವಾಮಿ ಸರ್ಕಾರ ಪತನ

ಫೆಬ್ರವರಿ 24: ರಾಷ್ಟ್ರಪತಿ ಆಡಳಿತಕ್ಕೆ ಕೇಂದ್ರ ಸರ್ಕಾರ ಶಿಫಾರಸ್ಸು

 ಇದನ್ನೂ ಓದಿ: Puducherry Politics | ಪುದುಚೇರಿಯ ಕ್ಷಿಪ್ರ ರಾಜಕೀಯ ಬೆಳವಣಿಗೆಯ ಹಿಂದಿದೆ ಬಿಜೆಪಿ ಮಹತ್ವಾಕಾಂಕ್ಷೆ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್