NEP ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಧರ್ಮೇಂದ್ರ ಪ್ರಧಾನ್ ಟೀಕೆ
ಕರ್ನಾಟಕ ಸರ್ಕಾರದ ನಿರ್ಧಾರ ಬಗ್ಗೆ ಅಸಮಧಾನ ವ್ಯಕ್ತ ಪಡಿಸಿದ ಧರ್ಮೇಂದ್ರ ಪ್ರಧಾನ್ "ನಮ್ಮ ಶಿಕ್ಷಣ ವ್ಯವಸ್ಥೆಗೆ ವಿಕಸನದ ಅಗತ್ಯವಿದೆ, ಹಿಂಚಲನೆ ಅಲ್ಲಲ್ಲ. NEP ಎಲ್ಲರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುವ ವರ್ಷಗಳ ಸಮಾಲೋಚನೆಯ ಫಲಿತಾಂಶವಾಗಿದೆ. ಕಾಂಗ್ರೆಸ್ ಪಕ್ಷ ಸುಧಾರಣೆ-ವಿರೋಧಿ, ಭಾರತೀಯ ಭಾಷಾ ವಿರೋಧಿ ಮತ್ತು ಕರ್ನಾಟಕ ವಿರೋಧಿ ಎಂಬುದನ್ನು ಈ ಕ್ರಮ ಪ್ರತಿಬಿಂಬಿಸುತ್ತಿದೆ ಎಂದು ಹೇಳಿದ್ದಾರೆ.
ದೆಹಲಿ ಆಗಸ್ಟ್ 18: ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ಕೈಬಿಡುವ ಕರ್ನಾಟಕ ಸರ್ಕಾರದ (Karnataka) ನಿರ್ಧಾರವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan)ಟೀಕಿಸಿದ್ದು, ಇದು”ರಾಜಕೀಯ ಪ್ರೇರಿತ” ಎಂದು ಹೇಳಿದ್ದಾರೆ. ಶಿಕ್ಷಣವು ರಾಜಕೀಯ ಸಾಧನವಾಗಿರದೆ ಪ್ರಗತಿಯ ದಾರಿದೀಪವಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ್ ಒತ್ತಿ ಹೇಳಿದ್ದಾರೆ. ಕರ್ನಾಟಕ ಸರ್ಕಾರದ ನಿರ್ಧಾರ ಬಗ್ಗೆ ಅಸಮಧಾನ ವ್ಯಕ್ತ ಪಡಿಸಿದ ಅವರು “ನಮ್ಮ ಶಿಕ್ಷಣ ವ್ಯವಸ್ಥೆಗೆ ವಿಕಸನದ ಅಗತ್ಯವಿದೆ, ಹಿಂಚಲನೆ ಅಲ್ಲಲ್ಲ. NEP ಎಲ್ಲರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುವ ವರ್ಷಗಳ ಸಮಾಲೋಚನೆಯ ಫಲಿತಾಂಶವಾಗಿದೆ. ಕಾಂಗ್ರೆಸ್ ಪಕ್ಷ ಸುಧಾರಣೆ-ವಿರೋಧಿ, ಭಾರತೀಯ ಭಾಷಾ ವಿರೋಧಿ ಮತ್ತು ಕರ್ನಾಟಕ ವಿರೋಧಿ ಎಂಬುದನ್ನು ಈ ಕ್ರಮ ಪ್ರತಿಬಿಂಬಿಸುತ್ತಿದೆ ಎಂದು ಹೇಳಿದ್ದಾರೆ.
ರಾಜಕೀಯ ವಿಚಾರಗಳಿಗಿಂತ ವಿದ್ಯಾರ್ಥಿಗಳು ಮತ್ತು ಅವರ ಕಲ್ಯಾಣಕ್ಕೆ ಆದ್ಯತೆ ನೀಡುವ ಮಹತ್ವವನ್ನು ಪ್ರಧಾನ್ ಒತ್ತಿ ಹೇಳಿದರು. ಅವರು ಕ್ಷುಲ್ಲಕ ರಾಜಕೀಯವನ್ನು ಬಿಟ್ಟು, ಪ್ರಗತಿ ಮತ್ತು ಒಳಗೊಳ್ಳುವಿಕೆಯನ್ನು ಮೌಲ್ಯೀಕರಿಸುವ ನಾಯಕತ್ವಕ್ಕಾಗಿ ಅವರು ಒತ್ತಾಯಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ಎನ್‌ಇಪಿ ರದ್ದುಗೊಳಿಸುವ ನಿರ್ಧಾರವನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಹಿಂದೆ ಪ್ರಕಟಿಸಿದ್ದರು. ಸಂವಿಧಾನಕ್ಕೆ ಅನುಗುಣವಾಗಿ ಶಿಕ್ಷಣವನ್ನು ಒದಗಿಸುವ ತಮ್ಮ ಸರ್ಕಾರದ ಉದ್ದೇಶವನ್ನು ಒತ್ತಿ ಹೇಳಿದ ಸಿದ್ದರಾಮಯ್ಯ, ಬಿಜೆಪಿಯ “ಮನುವಾದ” (ಕೆಲವು ಜಾತಿ ಆಧಾರಿತ ಸಿದ್ಧಾಂತಗಳ ಉಲ್ಲೇಖ)ವನ್ನು ಕೈಬಿಡಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಎನ್‌ಇಪಿ ಅಳವಡಿಕೆ ಪ್ರಾರಂಭವಾದಾಗ, ಅದನ್ನು ನಿಲ್ಲಿಸುವ ನಿರ್ಧಾರವನ್ನು ನಾವು ಕೈಗೊಂಡಿದ್ದೇವೆ ಚುನಾವಣಾ ಫಲಿತಾಂಶ ಪ್ರಕಟಗೊಂಡು ಸರ್ಕಾರ ರಚನೆಯಾಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭಗೊಂಡಿದ್ದು, ವಿದ್ಯಾರ್ಥಿಗಳಿಗೆ ವರ್ಷದ ಮಧ್ಯದಲ್ಲಿ ಅಡ್ಡಿಯಾಗುವುದನ್ನು ತಪ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಎನ್‌ಇಪಿ ಅನುಷ್ಠಾನಕ್ಕೆ ಕರ್ನಾಟಕದ ವಿದ್ಯಾರ್ಥಿಗಳು, ಪೋಷಕರು, ಉಪನ್ಯಾಸಕರು ಮತ್ತು ಶಿಕ್ಷಕರಿಂದ ವಿರೋಧ ವ್ಯಕ್ತವಾಗಿತ್ತು. ಬಿಜೆಪಿ ಇತರ ರಾಜ್ಯಗಳಿಗಿಂತ ಎನ್‌ಇಪಿ ಅಳವಡಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಹಿತಾಸಕ್ತಿಗಳನ್ನು ಬಲಿಕೊಡುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಕರ್ನಾಟಕವು ಉನ್ನತ ಶಿಕ್ಷಣದಲ್ಲಿ ಎನ್ ಇಪಿ ಅನ್ನು ಜಾರಿಗೆ ತಂದ ಮೊದಲ ರಾಜ್ಯವಾಗಿದೆ. ಆಗ ಅದನ್ನು ಟೀಕಿಸಿದ್ದ ಕಾಂಗ್ರೆಸ್, ಇದು ಆರ್ಎಸ್ಎಸ್ನ “ನಾಗ್ಪುರ ಶಿಕ್ಷಣ ನೀತಿ”ಎಂದಿದ್ದಾರೆ.
ಇದನ್ನೂ ಓದಿ:2024-25ನೇ ಶೈಕ್ಷಣಿಕ ವರ್ಷದಿಂದ ಕರ್ನಾಟದಲ್ಲಿ ಎನ್ಇಪಿ ಇರಲ್ಲ; ಸಿಎಂ ಸಿದ್ದರಾಮಯ್ಯ ಘೋಷಣೆ
ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನ್ಇಪಿ ರದ್ದು ಮಾಡುವುದಾಗಿ ಹೇಳಿತ್ತು. ಇತ್ತೀಚಿನ ಬಜೆಟ್ ಘೋಷಣೆಯ ಸಮಯದಲ್ಲಿ ಸಿಎಂ ಎನ್ಇಪಿ ಬದಲಿಗೆ ರಾಜ್ಯ ಶಿಕ್ಷಣ ನೀತಿಯನ್ನು ತರುವುದಾಗಿ ಹೇಳಿದ್ದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ