AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಆನ್​ಲೈನ್ ತರಬೇತಿಯ ಜಾರಿ ಬಗ್ಗೆ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಸಭೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉಚಿತ ಆನ್‌ಲೈನ್ ತರಬೇತಿ ಜಾರಿ ಪರಿಶೀಲಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುತ್ತಿರುವ ಯುವಜನತೆಗೆ ಉಚಿತ ಆನ್‌ಲೈನ್ ತರಬೇತಿ ನೀಡುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿಯಾನದ ಅನುಷ್ಠಾನದ ಕುರಿತು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಇಂದು (ಬುಧವಾರ) ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದರು.

ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಆನ್​ಲೈನ್ ತರಬೇತಿಯ ಜಾರಿ ಬಗ್ಗೆ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಸಭೆ
Pralhad Joshi Hold Meeting With Higher Education Department OfficialsImage Credit source: x
ಸುಷ್ಮಾ ಚಕ್ರೆ
|

Updated on:Aug 19, 2026 | 9:26 PM

Share

ನವದೆಹಲಿ, ಆಗಸ್ಟ್ 19: ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಇಂದು (ಬುಧವಾರ) ಪ್ರಧಾನಮಂತ್ರಿಯವರ ಉಚಿತ ಆನ್‌ಲೈನ್ ತರಬೇತಿ ಉಪಕ್ರಮದ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದಾರೆ. ದೇಶಾದ್ಯಂತ ಇರುವ ವಿದ್ಯಾರ್ಥಿಗಳಿಗೆ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಯುವಜನತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉನ್ನತ ಮಟ್ಟದ ತರಬೇತಿಯನ್ನು ಉಚಿತವಾಗಿ ತಲುಪಿಸುವ ನಿಟ್ಟಿನಲ್ಲಿ ಈ ಯೋಜನೆಯ ಪ್ರಗತಿಯನ್ನು ಸಚಿವ ಪ್ರಲ್ಹಾದ್ ಜೋಶಿ ಪರಿಶೀಲನೆ ಮಾಡಿದರು.

ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಯುವಜನತೆಗೆ ಉಚಿತ ತರಬೇತಿ ನೀಡುವ ಯೋಜನೆಯನ್ನು ಘೋಷಿಸಿದ್ದರು. ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯು “ದೇಶಾದ್ಯಂತ ಇರುವ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಕಲಿಕಾ ಸಾಮಗ್ರಿ, ನುರಿತ ಮಾರ್ಗದರ್ಶನ ಮತ್ತು ವ್ಯವಸ್ಥಿತ ತರಬೇತಿಯನ್ನು ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ವೇದಿಕೆಯನ್ನು ನಿರ್ಮಿಸುವುದರ ಮೇಲೆ ಗಮನ ಹರಿಸಿದೆ” ಎಂದು ಪ್ರಲ್ಹಾದ್ ಜೋಶಿ ಎಕ್ಸ್​​ನಲ್ಲಿ ತಿಳಿಸಿದ್ದಾರೆ.

ಪ್ರತಿಯೊಬ್ಬ ಅರ್ಹ ವಿದ್ಯಾರ್ಥಿಗೂ ಆರ್ಥಿಕ ಅಡಚಣೆಗಳಿಲ್ಲದೆ ಜೆಇಇ (JEE), ನೀಟ್ (NEET) ಮತ್ತು ಇತರ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಲು ಉಚಿತ ಆನ್‌ಲೈನ್ ವೇದಿಕೆಯನ್ನು ಒದಗಿಸುವ ಬಗ್ಗೆ ಕೇಂದ್ರ ಸರ್ಕಾರ ಕಾರ್ಯೋನ್ಮುಖವಾಗಿದೆ.

ಇದನ್ನೂ ಓದಿ: ‘ರಾಹುಲ್ ಗಾಂಧಿಯ ಅಹಂಕಾರದಿಂದ ಇಡೀ ಅಧಿವೇಶನ ಹಾದಿ ತಪ್ಪಿತು’; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

ಪ್ರಧಾನಿ ಮೋದಿಯವರ ಘೋಷಣೆಯೇನು?:

ಸ್ವಾತಂತ್ರ್ಯ ದಿನಾಚರಣೆಯ ದಿನ ಕೆಂಪುಕೋಟೆಯಲ್ಲಿ ಭಾಷಣ ಮಾಡಿದ್ದ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಮಹತ್ವದ ಘೋಷಣೆ ಮಾಡಿದ್ದರು. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್ ನೀಡುವುದಾಗಿ ಮೋದಿ ಘೋಷಿಸಿದ್ದರು.

ಇದನ್ನೂ ಓದಿ: PM Modi Speech: ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಕೋಚಿಂಗ್ ಕ್ಲಾಸ್; ಪ್ರಧಾನಿ ಮೋದಿ ಮಾಡಿದ ಪ್ರಮುಖ ಘೋಷಣೆಗಳಿವು

“ತಮ್ಮ ಮಕ್ಕಳನ್ನು ಖಾಸಗಿ ಕೋಚಿಂಗ್ ಕ್ಲಾಸ್‌ಗೆ ಕಳುಹಿಸದಿದ್ದರೆ, ತಮ್ಮದು ಪ್ರತಿಷ್ಠಿತ ಕುಟುಂಬವಲ್ಲ ಎಂದು ಪ್ರತಿಯೊಬ್ಬ ಪೋಷಕರೂ ಭಾವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಖಾಸಗಿ ಕೋಚಿಂಗ್ ತರಗತಿಗಳು ಬಡವರ ಮೇಲೆ ಭಾರಿ ಹೊರೆಯಾಗಿವೆ” ಎಂದು ಪ್ರಧಾನಿ ಮೋದಿ ಹೇಳಿದ್ದರು. ಉಚಿತ ಆನ್‌ಲೈನ್ ತರಬೇತಿಯಿಂದ ಪೋಷಕರು ಕೋಚಿಂಗ್‌ಗಾಗಿ ಖರ್ಚು ಮಾಡುವ ಸಾವಿರಾರು ಕೋಟಿ ರೂ.ಗಳನ್ನು ಉಳಿಸಬಹುದು ಮತ್ತು ಮಕ್ಕಳು ಕುಟುಂಬದ ಜೊತೆಯಲ್ಲಿದ್ದುಕೊಂಡೇ ಅಭ್ಯಾಸ ಮಾಡಬಹುದು ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Wed, 19 August 26

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ