
ನವದೆಹಲಿ, ಆಗಸ್ಟ್ 19: ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಇಂದು (ಬುಧವಾರ) ಪ್ರಧಾನಮಂತ್ರಿಯವರ ಉಚಿತ ಆನ್‌ಲೈನ್ ತರಬೇತಿ ಉಪಕ್ರಮದ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದಾರೆ. ದೇಶಾದ್ಯಂತ ಇರುವ ವಿದ್ಯಾರ್ಥಿಗಳಿಗೆ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಯುವಜನತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉನ್ನತ ಮಟ್ಟದ ತರಬೇತಿಯನ್ನು ಉಚಿತವಾಗಿ ತಲುಪಿಸುವ ನಿಟ್ಟಿನಲ್ಲಿ ಈ ಯೋಜನೆಯ ಪ್ರಗತಿಯನ್ನು ಸಚಿವ ಪ್ರಲ್ಹಾದ್ ಜೋಶಿ ಪರಿಶೀಲನೆ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಯುವಜನತೆಗೆ ಉಚಿತ ತರಬೇತಿ ನೀಡುವ ಯೋಜನೆಯನ್ನು ಘೋಷಿಸಿದ್ದರು. ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯು “ದೇಶಾದ್ಯಂತ ಇರುವ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಕಲಿಕಾ ಸಾಮಗ್ರಿ, ನುರಿತ ಮಾರ್ಗದರ್ಶನ ಮತ್ತು ವ್ಯವಸ್ಥಿತ ತರಬೇತಿಯನ್ನು ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ವೇದಿಕೆಯನ್ನು ನಿರ್ಮಿಸುವುದರ ಮೇಲೆ ಗಮನ ಹರಿಸಿದೆ” ಎಂದು ಪ್ರಲ್ಹಾದ್ ಜೋಶಿ ಎಕ್ಸ್ನಲ್ಲಿ ತಿಳಿಸಿದ್ದಾರೆ.
Held a meeting with senior officials of Department of Higher Education to review the implementation of Hon’ble PM Shri @narendramodi ji’s initiative to provide free online coaching to youth preparing for competitive examinations. Focused on building a robust national platform… pic.twitter.com/OY3s7RABAD
— Pralhad Joshi (@JoshiPralhad) August 19, 2026
ಪ್ರತಿಯೊಬ್ಬ ಅರ್ಹ ವಿದ್ಯಾರ್ಥಿಗೂ ಆರ್ಥಿಕ ಅಡಚಣೆಗಳಿಲ್ಲದೆ ಜೆಇಇ (JEE), ನೀಟ್ (NEET) ಮತ್ತು ಇತರ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಲು ಉಚಿತ ಆನ್‌ಲೈನ್ ವೇದಿಕೆಯನ್ನು ಒದಗಿಸುವ ಬಗ್ಗೆ ಕೇಂದ್ರ ಸರ್ಕಾರ ಕಾರ್ಯೋನ್ಮುಖವಾಗಿದೆ.
ಇದನ್ನೂ ಓದಿ: ‘ರಾಹುಲ್ ಗಾಂಧಿಯ ಅಹಂಕಾರದಿಂದ ಇಡೀ ಅಧಿವೇಶನ ಹಾದಿ ತಪ್ಪಿತು’; ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಪ್ರಧಾನಿ ಮೋದಿಯವರ ಘೋಷಣೆಯೇನು?:
ಸ್ವಾತಂತ್ರ್ಯ ದಿನಾಚರಣೆಯ ದಿನ ಕೆಂಪುಕೋಟೆಯಲ್ಲಿ ಭಾಷಣ ಮಾಡಿದ್ದ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಮಹತ್ವದ ಘೋಷಣೆ ಮಾಡಿದ್ದರು. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್ ನೀಡುವುದಾಗಿ ಮೋದಿ ಘೋಷಿಸಿದ್ದರು.
ಇದನ್ನೂ ಓದಿ: PM Modi Speech: ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ಕೋಚಿಂಗ್ ಕ್ಲಾಸ್; ಪ್ರಧಾನಿ ಮೋದಿ ಮಾಡಿದ ಪ್ರಮುಖ ಘೋಷಣೆಗಳಿವು
“ತಮ್ಮ ಮಕ್ಕಳನ್ನು ಖಾಸಗಿ ಕೋಚಿಂಗ್ ಕ್ಲಾಸ್‌ಗೆ ಕಳುಹಿಸದಿದ್ದರೆ, ತಮ್ಮದು ಪ್ರತಿಷ್ಠಿತ ಕುಟುಂಬವಲ್ಲ ಎಂದು ಪ್ರತಿಯೊಬ್ಬ ಪೋಷಕರೂ ಭಾವಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಖಾಸಗಿ ಕೋಚಿಂಗ್ ತರಗತಿಗಳು ಬಡವರ ಮೇಲೆ ಭಾರಿ ಹೊರೆಯಾಗಿವೆ” ಎಂದು ಪ್ರಧಾನಿ ಮೋದಿ ಹೇಳಿದ್ದರು. ಉಚಿತ ಆನ್‌ಲೈನ್ ತರಬೇತಿಯಿಂದ ಪೋಷಕರು ಕೋಚಿಂಗ್‌ಗಾಗಿ ಖರ್ಚು ಮಾಡುವ ಸಾವಿರಾರು ಕೋಟಿ ರೂ.ಗಳನ್ನು ಉಳಿಸಬಹುದು ಮತ್ತು ಮಕ್ಕಳು ಕುಟುಂಬದ ಜೊತೆಯಲ್ಲಿದ್ದುಕೊಂಡೇ ಅಭ್ಯಾಸ ಮಾಡಬಹುದು ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದರು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ