ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ

ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ಇಷ್ಟು ದಿನಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಇದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಧ್ಯೆ ವಾಗ್ಯುದ್ಧ ನಡೆಯುತ್ತಲೇ ಇತ್ತು. ಇದೀಗ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ.

ಕೇಂದ್ರದಿಂದ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ
ನರೇಂದ್ರ ಮೋದಿ
Follow us
H P
| Updated By: ವಿವೇಕ ಬಿರಾದಾರ

Updated on:Apr 27, 2024 | 11:47 AM

ನವದೆಹಲಿ/ಬೆಂಗಳೂರು, ಏಪ್ರಿಲ್​ 27: ಕೇಂದ್ರ ಸರ್ಕಾರ (Union Government) ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ (Karnataka Drought Relief Fund) ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂ. ಪರಿಹಾರ ನೀಡಿದೆ. ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು. ಬೇಡಿಕೆ ಇಟ್ಟು ಇಷ್ಟು ದಿನಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರ  ಸುಪ್ರೀಂಕೋರ್ಟ್​ ಮೊರೆ ಹೋಗಿತ್ತು. ಬಳಿಕ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಸುಪ್ರೀಂಕೋರ್ಟ್​ನಲ್ಲಿ ಸೋಮವಾರದೊಳಗೆ ಒಪ್ಪಿಕೊಂಡಿತ್ತು. ಅದರಂತೆ ಇದೀಗ ಕೇಂದ್ರ ಸರ್ಕರ ಬರ ಪರಿಹಾರ ಘೋಷಣೆ ಮಾಡಿದೆ.

ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿ ಏನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಂದಾಯ ಸಚಿವ ಕೃಷ್ಣಭೈರೇಗೌಡ 2023ರ ಡಿಸೆಂಬರ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟ ಆಗಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದ್ದರು.

ಹೀಗಾಗಿ ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಇದರಲ್ಲಿ 4663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ ನೀಡುವಂತೆ ಕೋರಿದ್ದರು. 566 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ: ಬರ ಪರಿಹಾರದಿಂದ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಕೊಟ್ಟ ಸಿದ್ದರಾಮಯ್ಯ: ವಿಜಯೇಂದ್ರ ಗಂಭೀರ ಆರೋಪ

ಜೊತೆಗೆ ಎನ್‌.ಡಿ.ಆರ್‌.ಎಫ್. ನಿಂದ 4663 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಿದ್ದರು. ರೈತರಿಗೆ ಇನ್‌ಪುಟ್‌ ಸಬ್ಸಿಡಿ ನೀಡಲು 2015-16 ರ ಕೃಷಿ ಗಣತಿಯನ್ನು ಪರಿಗಣಿಸಲಾಗುತ್ತಿದ್ದು, ಇದು 8 ವರ್ಷ ಹಳೆಯ ಮಾಹಿತಿಯಾಗಿದೆ. ಅಲ್ಲದೆ ರಾಜ್ಯದಲ್ಲಿ ರೈತರ ದತ್ತಾಂಶವನ್ನು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಿಸಲಾಗಿದ್ದು ಪಿಎಂ-ಕಿಸಾನ್‌ ಯೋಜನೆಗೆ ಇದನ್ನು ಪರಿಗಣಿಸಲಾಗುತ್ತಿದೆ. ಇದರನ್ವಯ ರಾಜ್ಯದಲ್ಲಿ 83 ಲಕ್ಷ ಜನ ಸಣ್ಣ ಮತ್ತು ಅತಿ ಸಣ್ಣ ರೈತರಿದ್ದು, ಪರಿಹಾರ ವಿತರಣೆಗೆ ಈ ದತ್ತಾಂಶವನ್ನು ಪರಿಗಣಿಸುವಂತೆ ಮನವಿ ಮಾಡಿದ್ದರು. ಜೊತೆಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಬರಪೀಡಿತ ತಾಲೂಕುಗಳಲ್ಲಿ ಉದ್ಯೋಗದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸುವಂತೆ ಆಗ್ರಹಿಸಿದ್ದರು.

ದೆಹಲಿಯಲ್ಲಿ ರಾಜ್ಯ ಸರ್ಜಾರದ ಪ್ರತಿಭಟನೆ

ಕರ್ನಾಟಕ ಸರ್ಕಾರ ವರದಿ ಸಲ್ಲಿಸಿದ ಬಳಿಕ ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಬಂದು ಅಧ್ಯಯನ ಮಾಡಿತು. ಬಳಿಕ ಕೇಂದ್ರ ಬರ ಅಧ್ಯಯನ ತಂಡ ಕೂಡ ವರದಿ ಸಿದ್ದಪಡಿಸಿ, ಸರ್ಕಾರದ ಮುಂದೆ ಇಟ್ಟಿತು. ಆದರೂ ಕೂಡ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡಿತು. ನಂತರ ರಾಜ್ಯ ಸರ್ಕಾರ ನವ ದೆಹಲಿಯಲ್ಲಿ ಕೇಂದ್ರ ವಿರುದ್ಧ ಪ್ರತಿಭಟನೆ ಮಾಡಿತು. ಇದಾದ ನಂತರ ಮುಖ್ಯಮಂತ್ರಿ ಆದಿಯಾಗಿ ಕಾಂಗ್ರೆಸ್​ ನಾಯಕರು ಕೇಂದ್ರದ ವಿರುದ್ಧ ವಾಗ್ದಾಳಿ ಮಾಡಿದರು.

ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ರಾಜ್ಯ ಸರ್ಕಾರ 

ಕರ್ನಾಟಕಕ್ಕೆ ಬರ ಪರಿಹಾರ ನಿಧಿ ಬಂದಿಲ್ಲ, ಹೀಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಕಾಂಗ್ರೆಸ್​ ಸರ್ಕಾರ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಸುಪ್ರೀಂಕೋರ್ಟ್​ನ ನ್ಯಾ.ಬಿ.ಆರ್.ಗವಾಯಿ ನೇತೃತ್ವದ ದ್ವಿಸದಸ್ಯ ಪೀಠ ಇಂದು (ಏ.22) ರಂದು ಅರ್ಜಿ ವಿಚಾರಣೆ ನಡೆಸಿತ್ತು. ಈ ವೇಳೆ ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ ಅಟಾರ್ನಿ ಜನರಲ್​​​​ ವೆಂಕಟರಮಣಿ “ಸೋಮವಾರ (ಏ.29)ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಹೇಳಿತ್ತು. ಅದರಂತೆ ಕೇಂದ್ರ ಸರ್ಕಾರ ಇದೀಗ ಬರ ಪರಿಹಾರ ಬಿಡುಗಡೆ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:57 am, Sat, 27 April 24

ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ
ಪರ್ತ್​ ಟೆಸ್ಟ್​ನಲ್ಲಿ ಸುಲಭ ಕ್ಯಾಚ್ ಕೈಚೆಲ್ಲಿದ ಕೊಹ್ಲಿ; ನೀವೇ ನೋಡಿ