AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janaushadhi Kendras: 2024ರ ಮಾರ್ಚ್ ಒಳಗೆ ಜನೌಷಧಿ ಕೇಂದ್ರ 10,000ಕ್ಕೆ ವಿಸ್ತರಿಸಲು ಕೇಂದ್ರ ಚಿಂತನೆ

ಭಾರತೀಯ ಜನೌಷಧ ಕೇಂದ್ರಗಳಲ್ಲಿ ಔಷಧಗಳನ್ನು ಮಾರುಕಟ್ಟೆ ಮಾರಾಟ ದರಕ್ಕಿಂತ ಶೇಕಡಾ 50ರಿಂದ 90ರ ವರೆಗೂ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. 1,759ರಷ್ಟು ಔಷಧಗಳು, 280 ಶಸ್ತ್ರಚಿಕಿತ್ಸೆ ಉಪಕರಣಗಳು ಜನೌಷಧ ಕೇಂದ್ರಗಳಲ್ಲಿ ಲಭ್ಯವಿವೆ.

Janaushadhi Kendras: 2024ರ ಮಾರ್ಚ್ ಒಳಗೆ ಜನೌಷಧಿ ಕೇಂದ್ರ 10,000ಕ್ಕೆ ವಿಸ್ತರಿಸಲು ಕೇಂದ್ರ ಚಿಂತನೆ
ಜನೌಷಧ ಕೇಂದ್ರ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Dec 31, 2022 | 4:29 PM

Share

ನವದೆಹಲಿ: ಪ್ರಧಾನಮಂತ್ರಿ ಭಾರತೀಯ ಜನೌಷಧ ಕೇಂದ್ರಗಳ ಸಂಖ್ಯೆಯನ್ನು (PMBJKs) 2024ರ ಮಾರ್ಚ್ ಒಳಗಾಗಿ 10,000ಕ್ಕೆ ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ. ಗುಣಮಟ್ಟದ ಔಷಧ ಕೈಗೆಟಕುವ ದರದಲ್ಲಿ ಎಲ್ಲರಿಗೂ ಲಭ್ಯವಾಗಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದಾಗಿ ಕಳೆದ 8 ವರ್ಷಗಳಲ್ಲಿ 18,000 ಕೋಟಿ ರೂ. ಉಳಿತಾಯವಾಗಿದೆ. ದೇಶದಾದ್ಯಂತ 743 ಜಿಲ್ಲೆಗಳಲ್ಲಿ 9,000 ಜನೌಷಧ ಕೇಂದ್ರಗಳನ್ನು ತೆರೆಯುವ ಮೂಲಕ ವ್ಯಾಪ್ತಿಯನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಪ್ರಕಟಣೆ ತಿಳಿಸಿದೆ.

ಭಾರತೀಯ ಜನೌಷಧ ಕೇಂದ್ರಗಳಲ್ಲಿ ಔಷಧಗಳನ್ನು ಮಾರುಕಟ್ಟೆ ಮಾರಾಟ ದರಕ್ಕಿಂತ ಶೇಕಡಾ 50ರಿಂದ 90ರ ವರೆಗೂ ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. 1,759ರಷ್ಟು ಔಷಧಗಳು, 280 ಶಸ್ತ್ರಚಿಕಿತ್ಸೆ ಉಪಕರಣಗಳು ಜನೌಷಧ ಕೇಂದ್ರಗಳಲ್ಲಿ ಲಭ್ಯವಿವೆ.

ಇದನ್ನೂ ಓದಿ: Jan Aushadhi Kendra: ಜನೌಷಧಿ ಕೇಂದ್ರ ಸ್ಥಾಪನೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ 2ನೇ ಸ್ಥಾನ

ಫಾರ್ಮಾಸ್ಯುಟಿಕಲ್ಸ್, ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಜನೌಷಧ ಕೇಂದ್ರಗಳನ್ನು ಆರಂಭಿಸಿತ್ತು. 2017ರ ಡಿಸೆಂಬರ್ ವೇಳೆಗೆ 3,000 ಕೇಂದ್ರಗಳನ್ನು ತೆರೆಯಲಾಗಿತ್ತು. 2020ರ ಮಾರ್ಚ್ ವೇಳೆಗೆ 6,000 ಕೇಂದ್ರಗಳನ್ನು ತೆರೆಯಲಾಗಿತ್ತು.

ಕಳೆದ ಹಣಕಾಸು ವರ್ಷದಲ್ಲಿ ಕೇಂದ್ರಗಳ ಸಂಖ್ಯೆಯನ್ನು 8,610ರಿಂದ 9,000ಕ್ಕೆ ಹೆಚ್ಚಿಸಲಾಗಿದೆ. ದೇಶದ 743 ಜಿಲ್ಲೆಗಳಲ್ಲಿ ಕೇಂದ್ರಗಳು ಕಾರ್ಯಾಚರಿಸುತ್ತಿವೆ. ಇವುಗಳನ್ನು ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ