ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ

ಜಂಟಿ ಸಂಸದೀಯ ಸಮಿತಿಯ ಶಿಫಾರಸುಗಳ ಪ್ರಕಾರ ಹೊಸ ಮಸೂದೆಯನ್ನು ತರಲು ಕೇಂದ್ರವು ಈಗ ಸಮಗ್ರ ಕಾನೂನು ಚೌಕಟ್ಟಿನ ಮೇಲೆ ಕಾರ್ಯನಿರ್ವಹಿಸುತ್ತಿದೆ

ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ ಹಿಂಪಡೆದ ಕೇಂದ್ರ ಸರ್ಕಾರ
ಅಶ್ವಿನಿ ವೈಷ್ಣವ್
TV9kannada Web Team

| Edited By: Rashmi Kallakatta

Aug 03, 2022 | 7:35 PM

ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಗೆ (Personal Data Protection Bill) ಜಂಟಿ ಸಂಸದೀಯ ಸಮಿತಿ (joint parliamentary committee) 81 ತಿದ್ದುಪಡಿಗಳನ್ನು ಸೂಚಿಸಿದ ನಂತರ ಕೇಂದ್ರ ಸರ್ಕಾರ ಬುಧವಾರ ಅದನ್ನು ಹಿಂಪಡೆದಿದೆ. ಜಂಟಿ ಸಂಸದೀಯ ಸಮಿತಿಯ ಶಿಫಾರಸುಗಳ ಪ್ರಕಾರ ಹೊಸ ಮಸೂದೆಯನ್ನು ತರಲು ಕೇಂದ್ರವು ಈಗ ಸಮಗ್ರ ಕಾನೂನು ಚೌಕಟ್ಟಿನ ಮೇಲೆ ಕಾರ್ಯನಿರ್ವಹಿಸುತ್ತಿದೆ. ಸಾಮಾಜಿಕ ಮಾಧ್ಯಮ ಕಂಪನಿಗಳು ಮತ್ತು ಡೇಟಾ ಕಾರ್ಯಕರ್ತರು ಸೇರಿದಂತೆ ಎಲ್ಲಾ ಪಾಲುದಾರರೊಂದಿಗೆ ಮತ್ತೊಮ್ಮೆ ಸಮಾಲೋಚನೆ ನಡೆಸಲಾಗುವುದು. ಜೆಸಿಪಿಯ ವರದಿಯನ್ನು ಪರಿಗಣಿಸಿ, ಸಮಗ್ರ ಕಾನೂನು ಚೌಕಟ್ಟಿನ ಮೇಲೆ ಕಾರ್ಯ ನಿರ್ವಹಿಸಲಾಗುವುದು. ಆದ್ದರಿಂದ ಈ ಹೊತ್ತಲ್ಲಿ ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆ, 2019 ಅನ್ನು ಹಿಂತೆಗೆದುಕೊಳ್ಳಲು ಮತ್ತು ಸಮಗ್ರ ಕಾನೂನು ಚೌಕಟ್ಟಿಗೆ ಹೊಂದಿಕೊಳ್ಳುವ ಹೊಸ ಮಸೂದೆಯನ್ನು ಪ್ರಸ್ತುತಪಡಿಸಲು ಪ್ರಸ್ತಾಪಿಸಲಾಗಿದೆ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw)ಲೋಕಸಭೆಯಲ್ಲಿ ತಿಳಿಸಿದ್ದಾರೆ.

ಮುಂದಿನ ಸಂಸತ್ ಅಧಿವೇಶನದಲ್ಲಿ ಹೊಸ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ.

ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಯನ್ನು ಹಿಂತೆಗೆದುಕೊಳ್ಳುವ ಕೇಂದ್ರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ನಾವು ಮೊದಲಿನಿಂದಲೂ ಮಸೂದೆಯನ್ನು ತಿರಸ್ಕರಿಸುತ್ತಾ ಬಂದಿದ್ದೇವೆ. ಇದು ಸಂಸತ್ತಿನಲ್ಲಿ ಚರ್ಚೆಯಾಗಿದ್ದರೆ ಉತ್ತಮ ಕಾನೂನು ಹೊರಹೊಮ್ಮುತ್ತಿತ್ತು ಎಂದು ಹೇಳಿದ್ದಾರೆ.

ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಯನ್ನು ಹಿಂತೆಗೆದುಕೊಳ್ಳುವ ಕೇಂದ್ರದ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ನಾವು ಮೊದಲಿನಿಂದಲೂ ಮಸೂದೆಯನ್ನು ತಿರಸ್ಕರಿಸುತ್ತಾ ಬಂದಿದ್ದೇವೆ. ಇದು ಸಂಸತ್ತಿನಲ್ಲಿ ಚರ್ಚೆಯಾಗಿದ್ದರೆ ಉತ್ತಮ ಕಾನೂನು ಹೊರಹೊಮ್ಮುತ್ತಿತ್ತು ಎಂದು ಅವರು ಹೇಳಿದರು. ವೈಯಕ್ತಿಕ ಡೇಟಾ ಸಂರಕ್ಷಣಾ ಮಸೂದೆಯನ್ನು ಮೊದಲು 2018 ರಲ್ಲಿ ನ್ಯಾಯಮೂರ್ತಿ ಬಿಎನ್ ಶ್ರೀಕೃಷ್ಣ ನೇತೃತ್ವದ ಪರಿಣಿತ ಸಮಿತಿಯು ರಚಿಸಿತು. ಕೇಂದ್ರವು 2019 ರಲ್ಲಿ ಮಸೂದೆಯ ಕರಡನ್ನು ಲೋಕಸಭೆಯಲ್ಲಿ ಮಂಡಿಸಲಾಯಿತು. ಅದನ್ನು ಅದೇ ವರ್ಷ ಡಿಸೆಂಬರ್‌ನಲ್ಲಿ ಜಂಟಿ ಸಂಸದೀಯ ಸಮಿತಿಯ ಮುಂದಿಡಲಾಯಿತು. ಸಮಿತಿಯ ವರದಿಗೆ ತಿದ್ದುಪಡಿ ಸೂಚಿಸಿದ ನಂತರ ಡಿಸೆಂಬರ್ 2021 ರಲ್ಲಿ ಸಂಸತ್ತಿನಲ್ಲಿ ಮಂಡಿಸಲಾಯಿತು.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada