ಆಯುಷ್ಮಾನ್ ಭಾರತ್ ಬಾಕಿ ಪಾವತಿಸಲು ಪಂಜಾಬ್‌ ಸರ್ಕಾರ ವಿಫಲ; ಆಪ್ ವಿರುದ್ಧ ಕೇಂದ್ರ ಸರ್ಕಾರ ಟೀಕೆ

|

Updated on: Sep 20, 2024 | 10:19 PM

ಪಂಜಾಬ್‌ನಲ್ಲಿ ಆಯುಷ್ಮಾನ್ ಭಾರತ್ ಬಾಕಿ ಪಾವತಿಸಲು ವಿಫಲವಾಗಿರುವ ಭಗವಂತ್ ಮಾನ್ ಸರ್ಕಾರವನ್ನು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ತರಾಟೆಗೆ ತೆಗೆದುಕೊಂಡಿದ್ದಾರೆ. ಅನೇಕ ಕುಟುಂಬಗಳು ಅದರಲ್ಲೂ ವಿಶೇಷವಾಗಿ ಕಷ್ಟಪಟ್ಟು ದುಡಿಯುವ ರೈತರು ಈ ಯೋಜನೆಯನ್ನು ಅವಲಂಬಿಸಿದ್ದಾರೆ. ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡಲೇ 600 ಕೋಟಿ ಬಾಕಿ ಹಣವನ್ನು ಪಾವತಿಸಬೇಕು ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಬಾಕಿ ಪಾವತಿಸಲು ಪಂಜಾಬ್‌ ಸರ್ಕಾರ ವಿಫಲ; ಆಪ್ ವಿರುದ್ಧ ಕೇಂದ್ರ ಸರ್ಕಾರ ಟೀಕೆ
ಜೆ.ಪಿ ನಡ್ಡಾ
Follow us on

ನವದೆಹಲಿ: ಪಂಜಾಬ್‌ನಲ್ಲಿನ ಆಮ್ ಆದ್ಮಿ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯನ್ನು ಸರಿಯಾಗಿ ಜಾರಿಗೆ ತರುತ್ತಿಲ್ಲ. ಆಸ್ಪತ್ರೆಗಳ ಬಾಕಿ ಹಣವನ್ನು ಶೀಘ್ರದಲ್ಲೇ ಪಾವತಿಸಿ ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಅವರಿಗೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ತರಾಟೆ ತೆಗೆದುಕೊಂಡಿದ್ದಾರೆ. ಬಡವರ ಆರೋಗ್ಯ ಸೌಲಭ್ಯಕ್ಕಾಗಿ ಆಯುಷ್ಮಾನ್ ಭಾರತ್ ಯೋಜನೆ ಆರಂಭಿಸಲಾಗಿದೆ. ಆದರೆ ಪಂಜಾಬ್‌ನ ಆಸ್ಪತ್ರೆಗಳಲ್ಲಿ 600 ಕೋಟಿ ರೂ. ಬಾಕಿ ಇದೆ ಎಂದು ಕೇಂದ್ರ ಸಚಿವ ಜೆಪಿ ನಡ್ಡಾ ಹೇಳಿದ್ದಾರೆ. ಇದರಿಂದ ಇಲ್ಲಿನ ಹಲವು ಆರೋಗ್ಯ ವಿಮಾ ಯೋಜನೆಗಳಲ್ಲಿ ನಗದು ರಹಿತ ಚಿಕಿತ್ಸೆ ಸ್ಥಗಿತಗೊಂಡಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಸ್ಪತ್ರೆಗಳ ಬಾಕಿಯನ್ನು ಆದಷ್ಟು ಬೇಗ ಪಾವತಿಸುವಂತೆ ಪಂಜಾಬ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಪಂಜಾಬ್‌ನಲ್ಲಿ ಆಯುಷ್ಮಾನ್ ಭಾರತ್‌ನ ಬಾಕಿಯನ್ನು ಪಾವತಿಸಲು ಎಎಪಿ ಸರ್ಕಾರ ವಿಫಲವಾಗಿದೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಜೆಪಿ ನಡ್ಡಾ ರಾಜ್ಯ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಉತ್ತಮ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯ ಕಲ್ಪಿಸಲು ಆಯುಷ್ಮಾನ್ ಭಾರತ್ ಯೋಜನೆ ಆರಂಭಿಸಲಾಗಿದೆ ಎಂದಿದ್ದಾರೆ.


ಇದನ್ನೂ ಓದಿ: ವಿದೇಶದಲ್ಲಿ ಭಾರತವನ್ನು ಕಾಂಗ್ರೆಸ್ ಅವಮಾನಿಸಿದೆ; ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ


ಆಸ್ಪತ್ರೆಗಳ ಬಾಕಿ ಹಣವನ್ನು ಆದಷ್ಟು ಬೇಗ ಪಾವತಿಸುವಂತೆ ಸಿಎಂ ಭಗವಂತ್ ಮಾನ್ ಅವರನ್ನು ಒತ್ತಾಯಿಸುತ್ತೇನೆ ಎಂದು ಜೆಪಿ ನಡ್ಡಾ ಹೇಳಿದ್ದಾರೆ. ಬಾಕಿ ಪಾವತಿಸುವುದರಿಂದ ಸಾಮಾನ್ಯ ಬಡಜನರು ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ. ವಾಸ್ತವವಾಗಿ, ಪಂಜಾಬ್‌ನ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ ಅಸೋಸಿಯೇಷನ್ ​​ಹಲವಾರು ಆರೋಗ್ಯ ವಿಮಾ ಯೋಜನೆಗಳ ಅಡಿಯಲ್ಲಿ ನಗದುರಹಿತ ಚಿಕಿತ್ಸೆಯನ್ನು ನಿಲ್ಲಿಸಿದೆ. ಆಯುಷ್ಮಾನ್ ಭಾರತ್ ಯೋಜನೆ ಕೂಡ ಈ ಯೋಜನೆಗಳಲ್ಲಿ ಸೇರಿದೆ ಎಂದು ಕೇಂದ್ರ ಸಚಿವ ಜೆ.ಪಿ ನಡ್ಡಾ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 10:15 pm, Fri, 20 September 24