ಭಾರತ್ ಜೋಡೋ ಯಾತ್ರೆ ನಿಲ್ಲಿಸಿ ಎಂದ ಕೇಂದ್ರ ಸಚಿವರ ವಿರುದ್ಧ ಗುಡುಗಿದ ಕಾಂಗ್ರೆಸ್; ಇವರ ಮನಸ್ಥಿತಿಗೆ ಏನನ್ನಬೇಕು ಎಂದು ಪ್ರತಿಕ್ರಿಯಿಸಿದ ಮನ್ಸುಖ್ ಮಾಂಡವಿಯ

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದವರಲ್ಲಿ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದೆ ಎಂದು ಮೂವರು ರಾಜಸ್ಥಾನ ಸಂಸದರು ತಮಗೆ ಪತ್ರ ಬರೆದಿದ್ದಾರೆ.ಈ ಯಾತ್ರೆಯಲ್ಲಿ ಭಾಗವಹಿಸಿದ ನಂತರ ಹಿಮಾಚಲ ಪ್ರದೇಶ ಮುಖ್ಯಮಂತ್ರಿಗೂ ಕೋವಿಡ್ ದೃಢಪಟ್ಟಿದೆ ಎಂದಿದ್ದಾರೆ ಮಾಂಡವಿಯ.

ಭಾರತ್ ಜೋಡೋ ಯಾತ್ರೆ ನಿಲ್ಲಿಸಿ ಎಂದ ಕೇಂದ್ರ ಸಚಿವರ ವಿರುದ್ಧ ಗುಡುಗಿದ ಕಾಂಗ್ರೆಸ್; ಇವರ ಮನಸ್ಥಿತಿಗೆ ಏನನ್ನಬೇಕು ಎಂದು ಪ್ರತಿಕ್ರಿಯಿಸಿದ ಮನ್ಸುಖ್ ಮಾಂಡವಿಯ
ಮನ್ಸುಖ್ ಮಾಂಡವಿಯ
Edited By:

Updated on: Dec 21, 2022 | 6:04 PM

ಭಾರತ್ ಜೋಡೋ ಯಾತ್ರೆಯ (Mansukh Mandaviya) ವೇಳೆ ಕೋವಿಡ್-19 (Covid-19) ನಿಯಮಾವಳಿ ಪಾಲಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ (Mansukh Mandaviya) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ, ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷವನ್ನು ಮಾತ್ರ ಟಾರ್ಗೆಟ್ ಮಾಡುತ್ತಿದೆ. ಸಾರ್ವಜನಿಕವಾಗಿ ಜನರು ಸೇರುವುದಕ್ಕೆ ಯಾವುದೇ ನಿರ್ಬಂಧ ಇಲ್ಲದೇ ಇರುವ ಹೊತ್ತಲ್ಲಿ ಕೇಂದ್ರ ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ಹೇಳಿದ್ದಾರೆ. ರಾಜಸ್ಥಾನದಲ್ಲಿ ಕೋವಿಡ್ -19 ಹರಡಬಾರದು ಎಂದು ಖಚಿತಪಡಿಸಿಕೊಳ್ಳಲು, ನಾನು ತಜ್ಞರ ಅಭಿಪ್ರಾಯಗಳನ್ನು ತೆಗೆದುಕೊಂಡೆ. ಭಾರತ್ ಜೋಡೋ ಯಾತ್ರೆಯಲ್ಲಿ ಕೋವಿಡ್ -19 ಪ್ರೋಟೋಕಾಲ್ ಅನ್ನು ಅನುಸರಿಸಬೇಕು ಎಂದು ರಾಹುಲ್ ಗಾಂಧಿಗೆ ಪತ್ರ ಬರೆದಿದ್ದೇನೆ ಎಂದು ಮಾಂಡವಿಯಾ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದವರಲ್ಲಿ ಕೋವಿಡ್-19 ಪಾಸಿಟಿವ್ ಪತ್ತೆಯಾಗಿದೆ ಎಂದು ಮೂವರು ರಾಜಸ್ಥಾನ ಸಂಸದರು ತಮಗೆ ಪತ್ರ ಬರೆದಿದ್ದಾರೆ.ಈ ಯಾತ್ರೆಯಲ್ಲಿ ಭಾಗವಹಿಸಿದ ನಂತರ ಹಿಮಾಚಲ ಪ್ರದೇಶ ಮುಖ್ಯಮಂತ್ರಿಗೂ ಕೋವಿಡ್ ದೃಢಪಟ್ಟಿದೆ ಎಂದಿದ್ದಾರೆ ಮಾಂಡವಿಯ.

ಕೋವಿಡ್-19 ದೇಶದಲ್ಲಿ ಹರಡದಂತೆ ನೋಡಿಕೊಳ್ಳುವುದು ನನ್ನ ಕರ್ತವ್ಯ. ಒಬ್ಬ ಸಚಿವ ಅವರನ್ನು ಹೇಗೆ ಪ್ರಶ್ನಿಸುವುದು ಎಂದು ಯಾರಾದರೂ ಭಾವಿಸಿದರೆ, ಅವರ ಮನಸ್ಥಿತಿಗೆ ನಾವು ಏನು  ಹೇಳುವುದು? ಈ ಬಗ್ಗೆ ನನ್ನನ್ನು ಪ್ರಶ್ನಿಸುವುದು ನನ್ನ ಕರ್ತವ್ಯಕ್ಕೆ ಅಡ್ಡಿಪಡಿಸಿದಂತೆ’ ಎಂದು ಆರೋಗ್ಯ ಸಚಿವರು ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಆರೋಗ್ಯ ಸಚಿವರು ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲೇನಿದೆ?

ಭಾರತ್ ಜೋಡೋ ಯಾತ್ರೆ ವೇಳೆ ಮಾಸ್ಕ್, ಸ್ಯಾನಿಟೈಜರ್ ಸೇರಿದಂತೆ ಕೋವಿಡ್-19 ನಿಯಮಾವಳಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಕೋವಿಡ್ ಲಸಿಕೆ ಪಡೆದವರು ಮಾತ್ರ ಯಾತ್ರೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಮಾಂಡವಿಯ ತಮ್ಮ ಪತ್ರದಲ್ಲಿ ಬರೆದಿದ್ದಾರೆ. ಕೋವಿಡ್ ನಿಯಮಾವಳಿಯನ್ನು ನೀವು ಪಾಲಿಸಬೇಕು. ಅದೇ ವೇಳೆ ಸಾರ್ವಜನಿಕರ ಆರೋಗ್ಯದ ಕಾಳಜಿ, ದೇಶವನ್ನು ಕೋವಿಡ್ ಸಾಂಕ್ರಾಮಿಕದಿಂದ ಪಾರು ಮಾಡುವುದಕ್ಕಾಗಿ ಮತ್ತು ದೇಶದ ಹಿತಕ್ಕಾಗಿ ನೀವು ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಬೇಕು ಎಂದು ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ಮಾಂಡವಿಯ ಹೇಳಿದ್ದಾರೆ.

ಇದನ್ನೂ ಓದಿ:ಖರ್ಗೆ ಹೇಳಿಕೆ ಖಂಡಿಸುವ ಭರದಲ್ಲಿ ಕಾಂಗ್ರೆಸ್​​ ನಾಯಕರನ್ನು ಸೋನಿಯಾ ಗಾಂಧಿಯ ದರ್ಬಾರ್​​ನ ನಾಯಿ ಎಂದ ಬಿಜೆಪಿ ಶಾಸಕ

ಗುಜರಾತಿನಲ್ಲಿ ಮತಯಾಚನೆ ಮಾಡುವಾಗ ಪ್ರಧಾನಿ ನರೇಂದ್ರ ಮೋದಿಯವರು ಮಾಸ್ಕ್ ಧರಿಸಿದ್ದರೆ?

ಕೇಂದ್ರ ಸಚಿವರ ಪತ್ರಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ಮಾಂಡವಿಯ ಅವರು ಸಾರ್ವಜನಿಕರ ಆರೋಗ್ಯ ಬಗ್ಗೆ ಕಾಳಜಿ ಹೊಂದಿದ್ದರೆ, ಇತ್ತೀಚೆಗೆ ಮುಕ್ತಾಯವಾದ ಗುಜರಾತ್ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಿದ ಬಿಜೆಪಿ ನಾಯಕರು ಯಾಕೆ ಈ ನಿಯಮಾವಳಿ ಪಾಲಿಸಿಲ್ಲ ಎಂದು ಪ್ರಶ್ನಿಸಿರುವುದಾಗಿ ಎಎನ್ಐ ವರದಿ ಮಾಡಿದೆ. ಯಾತ್ರೆ ಬಗ್ಗೆ ದಿಗಿಲುಗೊಂಡಿರುವ ಬಿಜೆಪಿ ಭಯದಿಂದ ಈ ರೀತಿ ವರ್ತಿಸುತ್ತಿದೆ. ಗುಜರಾತಿನಲ್ಲಿ ಮತಯಾಚನೆ ಮಾಡುವಾಗ ಪ್ರಧಾನಿ ನರೇಂದ್ರ ಮೋದಿಯವರು ಮಾಸ್ಕ್ ಧರಿಸಿದ್ದರೇ ಎಂದು ಪ್ರಶ್ನಿಸಿದ್ದಾರೆ.


ಸರ್ಕಾರ ಆ ಪ್ರೋಟೋಕಾಲ್ ಅನ್ನು ತಂದರೆ, ನಾವು ಅದನ್ನು ಅನುಸರಿಸುತ್ತೇವೆ. ಸಂಸತ್ ನಡೆಯುತ್ತಿದೆ, ಆದರೆ ನಾವು ಯಾವುದೇ ಕೋವಿಡ್-ಸಂಬಂಧಿತ ಪ್ರೋಟೋಕಾಲ್‌ಗಳನ್ನು ಅಲ್ಲಿ ನೋಡಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವರ ಪತ್ರದ ಕುರಿತು ಕಾಂಗ್ರೆಸ್ ನಾಯಕ ಭೂಪಿಂದರ್ ಹೂಡಾ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:02 pm, Wed, 21 December 22