ಇಂದು 9 ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಕೇಂದ್ರ ಆರೋಗ್ಯ ಸಚಿವರಿಂದ ಸಭೆ; ಕೊವಿಡ್​ 19 ಪರಿಸ್ಥಿತಿ ಪರಿಶೀಲನೆ

ಇದಕ್ಕೂ ಮೊದಲು ಕೇಂದ್ರ ಆರೋಗ್ಯ ಇಲಾಖೆ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್​, ಗೋವಾ ರಾಜ್ಯಗಳ ಆರೋಗ್ಯ ಇಲಾಖೆ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿತ್ತು.

ಇಂದು 9 ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಕೇಂದ್ರ ಆರೋಗ್ಯ ಸಚಿವರಿಂದ ಸಭೆ; ಕೊವಿಡ್​ 19 ಪರಿಸ್ಥಿತಿ ಪರಿಶೀಲನೆ
ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ
Follow us
TV9 Web
| Updated By: Lakshmi Hegde

Updated on: Jan 25, 2022 | 8:35 AM

ದೆಹಲಿ: ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಅವರು ಇಂದು 9 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸಚಿವರೊಂದಿಗೆ ವರ್ಚ್ಯುವಲ್​ ಆಗಿ ಸಭೆ ನಡೆಸಲಿದ್ದಾರೆ. ಆಯಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿನ ಕೊವಿಡ್​ 19 ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಬೆಳಗ್ಗೆ 10.30ಕ್ಕೆ ವರ್ಚ್ಯುವಲ್​ ಸಭೆ ನಡೆಯಲಿದೆ ಎಂದು ಎಎನ್​ಐ ತಿಳಿಸಿದೆ. ಇಂದು ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಅವರೊಂದಿಗಿನ ಸಭೆಯಲ್ಲಿ ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಪಂಜಾಬ್​, ಹರ್ಯಾಣ, ಉತ್ತರಾಖಂಡ್​, ದೆಹಲಿ, ಲಡಾಖ್​, ಉತ್ತರಪ್ರದೇಶ ಮತ್ತು ಚಂಡಿಗಢ್​ನ ಆರೋಗ್ಯ ಸಚಿವರುಗಳು ಪಾಲ್ಗೊಳ್ಳಲಿದ್ದಾರೆ. 

ಇದಕ್ಕೂ ಮೊದಲು ಕೇಂದ್ರ ಆರೋಗ್ಯ ಇಲಾಖೆ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್​, ಗೋವಾ, ದಾದ್ರಾ ಮತ್ತು ನಗರ ಹವೇಲಿ ಮತ್ತು ದಮನ್ ದಿಯುದ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ, ಅಲ್ಲಿನ ಕೊವಿಡ್​ 19-ಒಮಿಕ್ರಾನ್​ ಪರಿಸ್ಥಿತಿ ಪರಿಶೀಲನೆ ನಡೆಸಿದ್ದರು. ರಾಜ್ಯಗಳಲ್ಲಿರುವ ಆರೋಗ್ಯ ಮೂಲಸೌಕರ್ಯಗಳ ಬಲವರ್ಧನೆಯ ಬಗ್ಗೆ ಪರಿಶೀಲನೆ ನಡೆಸಬೇಕು. ಎಲ್ಲ ಜಿಲ್ಲೆಗಳಲ್ಲೂ ಟೆಲಿಕನ್ಸಲ್ಟೇಶನ್​ ಕೇಂದ್ರಗಳನ್ನು ಸ್ಥಾಪಿಸಬೇಕು. ಹಾಗೇ, ಕೊವಿಡ್​ 19 ವಿರುದ್ಧ ಹೋರಾಡಲು ನಾವು ಸ್ಥಾಪಿಸಿದ ಹೊಸ ಸೌಕರ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಆರೋಗ್ಯ ಸಚಿವ ಮನ್​ಸುಖ್ ಮಾಂಡವಿಯಾ ರಾಜ್ಯಗಳಿಗೆ ಒತ್ತಾಯಿಸಿದ್ದಾರೆ.

ಭಾರತದಲ್ಲಿ ಸೋಮವಾರ  3,06,064 ಹೊಸ ಕೊರೊನಾ ಕೇಸ್​ಗಳು ದಾಖಲಾಗಿವೆ. 439 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ  3,95,43,328ಕ್ಕೆ ಏರಿಕೆಯಾಗಿದೆ. ಮತ್ತು ಮೃತರ ಸಂಖ್ಯೆ 4,89,848ಕ್ಕೆ ತಲುಪಿದೆ. ಭಾರತದಲ್ಲಿ ಕೊವಿಡ್​ 19 ಲಸಿಕೆ ಅಭಿಯಾನವೂ ಕೂಡ ಮೂರು ಹಂತದಲ್ಲಿ ವೇಗವಾಗಿ ನಡೆಯುತ್ತಿದೆ. ಸೋಮವಾರದವರೆಗೆ 162.77  ಕೋಟಿ ಡೋಸ್ ಲಸಿಕೆ ನೀಡಲಾಗಿತ್ತು. ಜನವರಿ 10ರಿಂದ ಇಲ್ಲಿಯವರೆಗೆ 87 ಲಕ್ಷ ಮುನ್ನೆಚ್ಚರಿಕೆ ಡೋಸ್​ ನೀಡಲಾಗಿದೆ. ಇನ್ನೊಂದೆಡೆ ಒಮಿಕ್ರಾನ್​ ರೂಪಾಂತರವೆಂಬುದು ಕೊರೊನಾದ ಕೊನೇ ತಳಿ ಎಂಬುದನ್ನು ಊಹಿಸುವುದು ಅಪಾಯ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ತಿಳಿಸಿದ್ದಾರೆ.

ಇದನ್ನೂ ಓದಿ: ಮುಂಬೈನಲ್ಲಿ ದಾಖಲಾಗುತ್ತಿರುವ ಹೊಸ ಕೊವಿಡ್​ 19 ಕೇಸ್​ಗಳಲ್ಲಿ ಶೇ.89ರಷ್ಟು ಒಮಿಕ್ರಾನ್​ ಪ್ರಕರಣಗಳು; ಸಮೀಕ್ಷೆ ವರದಿ