ಬಿಸಿಲಿನ ಆಘಾತಕ್ಕೊಳಗಾದ ರೋಗಿಗಳಿಗೆ ಆಸ್ಪತ್ರೆಯಲ್ಲಿ ಆದ್ಯತೆ ಮೇರೆಗೆ ಚಿಕಿತ್ಸೆ ನೀಡುವಂತೆ ಕೇಂದ್ರ ನಿರ್ದೇಶನ

ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ತಮ್ಮ ಮಾರ್ಗಸೂಚಿಗಳಲ್ಲಿ ವಿಶೇಷವಾಗಿ ಮಧ್ಯಾಹ್ನ ಮತ್ತು 3 ಗಂಟೆಯ ನಡುವೆ ಬಿಸಿಲಿನಲ್ಲಿ ಹೋಗದಂತೆ ಜನರಿಗೆ ಸಲಹೆ ನೀಡಿದೆ. ಬಾಯಾರಿಕೆ ಇಲ್ಲದಿದ್ದರೂ ಜನರು ಸಾಧ್ಯವಾದಷ್ಟು ಹೆಚ್ಚಾಗಿ ನೀರು ಕುಡಿಯಬೇಕು ಮತ್ತು ಪ್ರಯಾಣಿಸುವಾಗ ನೀರನ್ನು ತಮ್ಮೊಂದಿಗೆ ಕೊಂಡೊಯ್ಯಬೇಕು ಎಂದು ಸೂಚಿಸಿದೆ.

ಬಿಸಿಲಿನ ಆಘಾತಕ್ಕೊಳಗಾದ ರೋಗಿಗಳಿಗೆ ಆಸ್ಪತ್ರೆಯಲ್ಲಿ ಆದ್ಯತೆ ಮೇರೆಗೆ ಚಿಕಿತ್ಸೆ ನೀಡುವಂತೆ ಕೇಂದ್ರ ನಿರ್ದೇಶನ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on: Jun 19, 2024 | 7:18 PM

ದೆಹಲಿ ಜೂನ್ 19: ಉತ್ತರ ಭಾರತದ ಹಲವು ಭಾಗಗಳಲ್ಲಿ ಬಿಸಿಗಾಳಿ (Heat Wave) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಡೆಸುವ ಆಸ್ಪತ್ರೆಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಬಿಸಿಲಿನ ಆಘಾತಕ್ಕೊಳಗಾಗಿರುವ (Heat Stroke) ರೋಗಿಗಳಿಗೆ ಆದ್ಯತೆಯ ಮೇರೆಗೆ ಚಿಕಿತ್ಸೆ ನೀಡುವಂತೆ ನಿರ್ದೇಶನ ನೀಡಿದೆ. ಆರೋಗ್ಯ ಸಚಿವ ಜೆಪಿ ನಡ್ಡಾ (JP Nadda) ಅವರು ಕೇಂದ್ರದಿಂದ ನಡೆಸಲ್ಪಡುವ ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿ ಮತ್ತು ಸನ್ನದ್ಧತೆಯನ್ನು ಪರಿಶೀಲಿಸಿದ್ದು, ಇದಕ್ಕಾಗಿ ವಿಶೇಷ ಘಟಕಗಳನ್ನು ಪ್ರಾರಂಭಿಸುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದರಿಂದಾಗಿ ರೋಗಿಗಳಿಗೆ ಉತ್ತಮವಾದ ಆರೈಕೆಯನ್ನು ನೀಡಲಾಗುತ್ತದೆ. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜನರು ಬಿಸಿಲಿನ ಹೊಡೆತಗಳು ಮತ್ತು ಇತರ ಶಾಖ-ಸಂಬಂಧಿತ ಸಮಸ್ಯೆಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ದೆಹಲಿ-ಎನ್‌ಸಿಆರ್‌ನಲ್ಲಿ ತೀವ್ರತರವಾದ ಶಾಖದ ಅಲೆಗಳು ಕಳೆದ ಮೂರು ದಿನಗಳಲ್ಲಿ 10 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿವೆ. ಕನಿಷ್ಠ 12 ಜನರು ಲೈಫ್  ಸಪೋರ್ಟ್ ನಲ್ಲಿದ್ದಾರೆ.. ಈ ಹಿನ್ನಲೆಯಲ್ಲಿ  ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ನಿರ್ದೇಶನ ನೀಡಿದ್ದಾರೆ

ದೆಹಲಿಯ ಸರ್ಕಾರಿ ಸ್ವಾಮ್ಯದ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ, ಮೇ 27 ರಿಂದ ಬಿಸಿಲಿನಿಂದಾಗಿ ಕಾಯಿಲೆಗೊಳಗಾದ 45 ರೋಗಿಗಳನ್ನು ದಾಖಲಿಸಲಾಗಿದೆ. ಮೇ 27 ರಿಂದ ಆಸ್ಪತ್ರೆಯು ಇಂತಹ ಸಮಸ್ಯೆಗಳಿಂದ ಒಂಬತ್ತು ಸಾವುಗಳನ್ನು ವರದಿ ಮಾಡಿದೆ ಮತ್ತು ಈ ಪೈಕಿ ಏಳು ಸಾವುಗಳು ಕಳೆದ ಎರಡು ದಿನಗಳ ಅವಧಿಯಲ್ಲಿ ಸಂಭವಿಸಿವೆ. ಎರ ದೆಹಲಿಯ ಇತರ ಆಸ್ಪತ್ರೆಗಳಲ್ಲಿಯೂ ಇದೇ ರೀತಿ ಬಿಸಿಲಿನ ಆಘಾತಕ್ಕೊಳಗಾದ ವಿವಿಧ ರೋಗಿಗಳು ದಾಖಲಾಗಿದ್ದಾರೆ.

ರಾಜ್ಯ ನಡೆಸುವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ಅಜಯ್ ಶುಕ್ಲಾ ಅವರು ಹೀಟ್‌ಸ್ಟ್ರೋಕ್ ಪ್ರಕರಣಗಳಲ್ಲಿ ಮರಣ ಪ್ರಮಾಣವು ಸುಮಾರು 60-70ರಷ್ಟು ಹೆಚ್ಚಾಗಿದೆ ಎಂದು ಎಚ್ಚರಿಸಿದ್ದಾರೆ. ರೋಗಿಯನ್ನು ತಡವಾಗಿ ಆಸ್ಪತ್ರೆಗೆ ಕರೆತಂದರೆ, ಒಂದರ ನಂತರ ಒಂದು ಅಂಗವು ವಿಫಲಗೊಳ್ಳಲು ಪ್ರಾರಂಭಿಸುತ್ತದೆ. ಜನರಿಹೆ ಅರಿವಿನ ಕೊರತೆ ಇದೆ. ಈ ರೋಗಿಗಳಲ್ಲಿ ಬಹಳಷ್ಟು ಮಂದಿ ವಲಸೆ ಕಾರ್ಮಿಕರು. ಅಲ್ಲದೆ, ಹೀಟ್ ಸ್ಟ್ರೋಕ್ ಸುಲಭವಾಗಿ ತಪ್ಪಿಸಿಕೊಳ್ಳಬಹುದು ಅಥವಾ ರೋಗಲಕ್ಷಣಗಳನ್ನು ತಪ್ಪಾಗಿ ಗ್ರಹಿಸಬಹುದು. ಬೇರೆ ಯಾವುದೋ ರೋಗಿಗಳು ಮೂರ್ಛೆ ಹೋದಾಗ ಮಾತ್ರ ಅವರ ಸಂಬಂಧಿಕರು ಆಸ್ಪತ್ರೆಗೆ ಸೇರಿಸುವ ಅಗತ್ಯವಿದೆ ಎಂದು ಭಾವಿಸುತ್ತಾರೆ.

ಹೀಟ್ ಸ್ಟ್ರೋಕ್ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಡಾ.ಶುಕ್ಲಾ ಹೇಳಿದ್ದಾರೆ. “ನಾವು ಜನರಿಗೆ ತಿಳುವಳಿಕೆ ನೀಡಬೇಕಾಗಿದೆ, ಒಬ್ಬ ವ್ಯಕ್ತಿಯು ಬಿಸಿಲಿನ ಆಘಾತದಿಂದ ಬಳಲುತ್ತಿದ್ದಾನೆ ಎಂದು ನೀವು ಅನುಮಾನಿಸಿದರೆ ಆಸ್ಪತ್ರೆಗೆ ಧಾವಿಸುವ ಬದಲು, ನೀವು ಅಲ್ಲಿಯೇ ಕೂಲಿಂಗ್ ಪ್ರಾರಂಭಿಸಬೇಕು. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸುವಾಗ ನೀರು, ಐಸ್ ಬಳಸಿ. ಆಂಬ್ಯುಲೆನ್ಸ್‌ಗಳನ್ನು ಸಹ ಸುಸಜ್ಜಿತಗೊಳಿಸಲಾಗಿದೆ.

ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ತಮ್ಮ ಮಾರ್ಗಸೂಚಿಗಳಲ್ಲಿ ವಿಶೇಷವಾಗಿ ಮಧ್ಯಾಹ್ನ ಮತ್ತು 3 ಗಂಟೆಯ ನಡುವೆ ಬಿಸಿಲಿನಲ್ಲಿ ಹೋಗದಂತೆ ಜನರಿಗೆ ಸಲಹೆ ನೀಡಿದೆ. ಬಾಯಾರಿಕೆ ಇಲ್ಲದಿದ್ದರೂ ಜನರು ಸಾಧ್ಯವಾದಷ್ಟು ಹೆಚ್ಚಾಗಿ ನೀರು ಕುಡಿಯಬೇಕು ಮತ್ತು ಪ್ರಯಾಣಿಸುವಾಗ ನೀರನ್ನು ತಮ್ಮೊಂದಿಗೆ ಕೊಂಡೊಯ್ಯಬೇಕು ಎಂದು ಸೂಚಿಸಿದೆ. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಟೀ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತ್ಯಜಿಸಬೇಕು ಒಆರ್‌ಎಸ್ ಮತ್ತು ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಗಂಜಿ ತಿಳಿ, ನಿಂಬೆ ನೀರು ಮತ್ತು ಮಜ್ಜಿಗೆಯನ್ನು ಸೇವಿಸಬೇಕು ಎಂದು ಅದು ಹೇಳಿದೆ.  ಜನರು ತಿಳಿ ಬಣ್ಣದ ಸಡಿಲವಾದ, ಗಾಳಿಯಾಡುವಂಥಾ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಹೊರಗಡೆ ಹೋಗುವಾಗ ಕನ್ನಡಕ ಮತ್ತು ಛತ್ರಿ ಬಳಸಬೇಕು ಎಂದು ಪ್ರಾಧಿಕಾರ ಹೇಳಿದೆ. ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡುವಂತೆಯೂ ಸಲಹೆ ನೀಡಿದೆ.

ದೆಹಲಿಯ ನಿವಾಸಿಗಳು ಸುಮಾರು ಒಂದು ತಿಂಗಳಿನಿಂದ ನಿರಂತರವಾಗಿ ಶಾಖದ ಅಲೆಯಲ್ಲಿ ತತ್ತರಿಸಿದ್ದಾರೆ. ನಗರದಲ್ಲಿನ ಕನಿಷ್ಠ ತಾಪಮಾನವು 35 ಡಿಗ್ರಿ ಸೆಲ್ಶಿಯಸ್ ಅನ್ನು ದಾಟಿದೆ. ಇಲ್ಲಿ ಗರಿಷ್ಠ ತಾಪಮಾನವು 45 ಡಿಗ್ರಿ ಆಗಿದೆ. ನಲ್ಲಿ ನೀರು ದಿನವಿಡೀ ಬಿಸಿಯಾಗಿರುತ್ತದೆ ಮತ್ತು ಹವಾನಿಯಂತ್ರಣಗಳು ಕೂಲಿಂಗ್ ನೀಡದ ಪರಿಸ್ಥಿತಿಯಲ್ಲಿದೆ.

ಮುಂದಿನ 24 ಗಂಟೆಗಳ ಕಾಲ ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ಶಾಖದ ಅಲೆಗಳು ಮುಂದುವರಿಯುವ ಸಾಧ್ಯತೆಯಿದೆ ಮತ್ತು ಅದರ ನಂತರ ಕಡಿಮೆಯಾಗುತ್ತದೆ ಎಂದು ಹವಾಮಾನ ಕಚೇರಿ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ.

ರಾತ್ರಿಯೂ ಸೆಖೆ ಕಡಿಮೆ ಆಗದೇ ಇರುವುದಕ್ಕೆ ದೆಹಲಿ ಮೂಲದ ಥಿಂಕ್‌ಟ್ಯಾಂಕ್ ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್‌ಮೆಂಟ್‌ನ (CSE) ರಜನೀಶ್ ಸರೀನ್ ವಿವರಣೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ಸಲ್ಲಿಸಿದ ದಾಖಲೆಯೇ ನಕಲಿ; ಎನ್​​ಟಿಎ ವಿರುದ್ಧ ದೂರು ನೀಡಿದ್ದ ನೀಟ್ ಆಕಾಂಕ್ಷಿಯ ಅರ್ಜಿ ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್

ದೆಹಲಿಯಂತಹ ದೊಡ್ಡ ನಗರಗಳಲ್ಲಿ ನಿರ್ಮಾಣ ಮತ್ತು ಕಾಂಕ್ರೀಟ್ ಕಟ್ಟಡಗಳು ಗಮನಾರ್ಹವಾಗಿ ಹೆಚ್ಚಾಗಿದೆ. ಕಾಂಕ್ರೀಟ್ ಕಟ್ಟಡಗಳು ಹಗಲಿನಲ್ಲಿ ಶಾಖವನ್ನು ಹೀರಿಕೊಳ್ಳುತ್ತವೆ ಮತ್ತು ರಾತ್ರಿಯಲ್ಲಿ ಅದನ್ನು ಬಿಡುಗಡೆ ಮಾಡುತ್ತವೆ. ಇದಕ್ಕಾಗಿಯೇ ದೊಡ್ಡ ನಗರಗಳಲ್ಲಿ ಕನಿಷ್ಠ ತಾಪಮಾನವು ಏರುತ್ತಿದೆ ಎಂದು ಸಿಎಸ್‌ಇಯಲ್ಲಿ ಸುಸ್ಥಿರ ಆವಾಸ ಕಾರ್ಯಕ್ರಮದ ಕಾರ್ಯಕ್ರಮ ನಿರ್ದೇಶಕ ಸರೀನ್ ಹೇಳಿದರು.

ಈ ಹಿಂದೆ ಹಗಲಿನ ತಾಪಮಾನ ಹೆಚ್ಚಿದ್ದರೂ ರಾತ್ರಿ ವೇಳೆ ಜನರಿಗೆ ಕೊಂಚ ನೆಮ್ಮದಿ ಸಿಗಲಿದೆ ಎಂದರು. “ಆದರೆ ಇತ್ತೀಚಿನ ದಿನಗಳಲ್ಲಿ, ಹೀಟ್ ಐಲ್ಯಾಂಡ್ ಎಫೆಕ್ಟ್‌ನಿಂದ ಎಸಿಗಳು ಸ್ಫೋಟಗೊಳ್ಳುತ್ತಿವೆ. ದೆಹಲಿಯಲ್ಲಿ ನಿರ್ಮಾಣವು ಹೆಚ್ಚುತ್ತಿದೆ. ಹಸಿರು ಪ್ರದೇಶವು ಕಡಿಮೆಯಾಗುತ್ತಿದೆ. ಎತ್ತರದ ಕಟ್ಟಡಗಳ ನಿರ್ಮಾಣವು ಗಾಳಿಯ ಚಲನೆಯ ಮೇಲೆ ಪರಿಣಾಮ ಬೀರುತ್ತಿದೆ” ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್