AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಸಂಭ್ರಮಕ್ಕೂ ಮುನ್ನ ಕೊವಿಡ್ ಎಚ್ಚರಿಕೆಯ ಸಂದೇಶ ರವಾನಿಸಿದ ಕೇಂದ್ರ ಗೃಹ ಕಾರ್ಯದರ್ಶಿ

ತುಸು ಎಚ್ಚರ ತಪ್ಪಿದರೂ ಕೊವಿಡ್ ಪಾಸಿಟಿವ್ ಪ್ರಮಾಣ ಹೆಚ್ಚಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ.

ದಸರಾ ಸಂಭ್ರಮಕ್ಕೂ ಮುನ್ನ ಕೊವಿಡ್ ಎಚ್ಚರಿಕೆಯ ಸಂದೇಶ ರವಾನಿಸಿದ ಕೇಂದ್ರ ಗೃಹ ಕಾರ್ಯದರ್ಶಿ
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Sep 28, 2021 | 6:55 PM

Share

ದೆಹಲಿ: ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲ ಅವರು ದೇಶದ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಆಡಳಿತಾಧಿಕಾರಿಗಳಿಗೆ ಹಬ್ಬದ ಸಂದರ್ಭದಲ್ಲಿ ಸುರಕ್ಷಿತ ನಡವಳಿಕೆಗಳನ್ನು ಪಾಲಿಸುವಂತೆ ಸೂಚಿಸಿ ಮಂಗಳವಾರ ಪತ್ರ ಬರೆದಿದ್ದಾರೆ. ಎಲ್ಲ ಜಿಲ್ಲಾ ಮತ್ತು ಇತರ ಸ್ಥಳೀಯ ಆಡಳಿತಾಧಿಕಾರಿಗಳು ಆರೋಗ್ಯ ಇಲಾಖೆಯ ಸೂಚನೆಯಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಮುಂಬರುವ ಹಬ್ಬಸಾಲಿನಲ್ಲಿ ದೊಡ್ಡಮಟ್ಟದಲ್ಲಿ ಜನಸಂದಣಿ ಸೇರದಂತೆ ತಡೆಯಬೇಕು. ಎಚ್ಚರಿಕೆಯಿಂದ ವರ್ತಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು. ತುಸು ಎಚ್ಚರ ತಪ್ಪಿದರೂ ಕೊವಿಡ್ ಪಾಸಿಟಿವ್ ಪ್ರಮಾಣ ಹೆಚ್ಚಾಗಬಹುದು ಎಂದು ಅವರು ಎಚ್ಚರಿಸಿದ್ದಾರೆ.

ಕೊವಿಡ್-19 ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸುರಕ್ಷಿತ ರೀತಿಯಲ್ಲಿ ಹಬ್ಬವನ್ನು ಆಚರಿಸಬೇಕು ಎಂದು ಸಲಹೆ ಮಾಡಿದ್ದಾರೆ. ಕೊವಿಡ್ ಪ್ರಮಾಣವು ಈಚಿನ ದಿನಗಳಲ್ಲಿ ಕಡಿಮೆಯಾಗಿದೆ. ಆದರೆ ಸ್ಥಳೀಯವಾಗಿ ಇಂದಿಗೂ ಅಲ್ಲಲ್ಲಿ ಪ್ರಕರಣಗಳು ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿವೆ. ಎಲ್ಲ ಜಿಲ್ಲೆಗಳಲ್ಲಿಯೂ ಕೊವಿಡ್ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪಾಸಿಟಿವಿಟಿ ಪ್ರಮಾಣ, ಆಸ್ಪತ್ರೆಗಳ ಸ್ಥಿತಿಗತಿ ಮತ್ತು ಐಸಿಯು ಬೆಡ್​ ಲಭ್ಯತೆಯ ಮೇಲೆ ನಿಗಾ ಇರಿಸಬೇಕು ಎಂದು ಹೇಳಿದ್ದಾರೆ.

ಪರೀಕ್ಷೆಯ ಪ್ರಮಾಣ ಹೆಚ್ಚಿಸುವುದು, ಸೋಂಕಿತರನ್ನು ಪತ್ತೆ ಮಾಡುವುದು ಮತ್ತು ಲಸಿಕೆ ಹಾಕುವ ಪ್ರಮಾಣ ಜಾಸ್ತಿ ಮಾಡುವ ಬಗ್ಗೆ ಗಮನ ನೀಡಬೇಕು. ಲಸಿಕೆ ಪಡೆಯಲು ಅರ್ಹರಾದ ವಯೋಮಾನಗಳ ಗುಂಪುಗಳನ್ನು ಗುರುತಿಸಿ ಆದ್ಯತೆ ಮೇಲೆ ಎರಡೂ ಡೋಸ್ ಲಸಿಕೆ ಕೊಡಬೇಕು ಎಂದು ಸಲಹೆ ಮಾಡಿದ್ದಾರೆ.

ದೇಶದಲ್ಲಿ ಹೊಸದಾಗಿ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗುವ ಪ್ರಮಾಣ 20,000ಕ್ಕೂ (18,000) ಕಡಿಮೆ ಆಗಿದೆ. ದೇಶದಲ್ಲಿ ಈವರೆಗೆ 33,69,7,581 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 2,92,206 ಮಂದಿಯಲ್ಲಿ ಇಂದಿಗೂ ಸೋಂಕು ಸಕ್ರಿಯವಾಗಿದೆ. ಸೋಂಕಿತರ ಸಂಖ್ಯೆಯು 201 ದಿನಗಳಲ್ಲಿಯೇ ಕನಿಷ್ಠಮಟ್ಟಕ್ಕೆ ಹಾಗೂ ಸಕ್ರಿಯ ಪ್ರಕರಣಗಳು 192 ದಿನಗಳಲ್ಲಿ ಕನಿಷ್ಠಮಟ್ಟ ತಲುಪಿವೆ.

(Union Health Secretary Writes to all State Secretaries to take Caution on Festive season to curtail Covid)

ಇದನ್ನೂ ಓದಿ: SM Krishna: ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ ಕೃಷ್ಣ ಆಯ್ಕೆ

ಇದನ್ನೂ ಓದಿ: Mysore Dasara 2021: ಕೊರೊನಾದಿಂದ ಜಟ್ಟಿ‌ ಕಾಳಗಕ್ಕೆ ಬ್ರೇಕ್: ಅರಮನೆಯ ಪಾರಂಪರಿಕ ದಸರಾ ಕಾರ್ಯಕ್ರಮ ಲಿಸ್ಟ್​ ಇಲ್ಲಿದೆ

Published On - 6:47 pm, Tue, 28 September 21

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ