ದೆಹಲಿ ಜುಲೈ 01: ಹೊಸ ಕ್ರಿಮಿನಲ್ ಕಾನೂನುಗಳು (new criminal laws) ಸಂತ್ರಸ್ತರ ಪರ ಮತ್ತು ನ್ಯಾಯ ಆಧಾರಿತವಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸೋಮವಾರ ಹೇಳಿದ್ದಾರೆ. ಸಂಸತ್ತಿನ ಗ್ರಂಥಾಲಯದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶಕ್ಕೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ದೇಶ ಸ್ವಾತಂತ್ರ್ಯ ಪಡೆದು ಸರಿಸುಮಾರು 77 ವರ್ಷಗಳ ನಂತರ, ಅಪರಾಧ ನ್ಯಾಯ ವ್ಯವಸ್ಥೆಯು ಈಗ ಸಂಪೂರ್ಣವಾಗಿ ‘ಸ್ವದೇಶಿ’ ಆಗಿದ್ದು, ಭಾರತೀಯ ಮೌಲ್ಯಗಳ ಮೇಲೆ ಕಾರ್ಯನಿರ್ವಹಿಸುತ್ತಿದೆ. 75 ವರ್ಷಗಳ ನಂತರ ವಸಾಹತುಶಾಹಿ ಕಾನೂನುಗಳನ್ನು ಭಾರತೀಯ ಸಂಸತ್ತು ಜಾರಿಗೆ ತಂದ ಹೊಸ ಕಾನೂನುಗಳೊಂದಿಗೆ ಜುಲೈ 1 ರ ಸೋಮವಾರದಿಂದ ಜಾರಿಗೆ ಬಂದಿದೆ ಎಂದು ಅವರು ಒತ್ತಿ ಹೇಳಿದರು.
“ದಂಡ” ಬದಲಿಗೆ, ಅದು ಈಗ “ನ್ಯಾಯ” ಆಗಿದೆ. ವಿಳಂಬದ ಬದಲಿಗೆ, ತ್ವರಿತ ವಿಚಾರಣೆ ಮತ್ತು ತ್ವರಿತ ನ್ಯಾಯ ಇರುತ್ತದೆ, ಮೊದಲು, ಪೊಲೀಸರ ಹಕ್ಕುಗಳನ್ನು ಮಾತ್ರ ರಕ್ಷಿಸಲಾಗಿದೆ ಆದರೆ ಈಗ, ಸಂತ್ರಸ್ತರು ಮತ್ತು ದೂರುದಾರರ ಹಕ್ಕುಗಳನ್ನು ಸಹ ರಕ್ಷಿಸಲಾಗುತ್ತದೆ. ” ಎಂದು ಶಾ ಹೇಳಿದ್ದಾರೆ.
Addressing the media on the new criminal laws. #AzaadBharatKeKanoon https://t.co/pz11zXUuUL
— Amit Shah (@AmitShah) July 1, 2024
ಹೊಸ ದೃಷ್ಟಿಕೋನವನ್ನು ಪ್ರತಿಬಿಂಬಿಸುವ ಮೂರು ಹೊಸ ಕಾನೂನುಗಳು ಮಧ್ಯರಾತ್ರಿಯಿಂದ ಜಾರಿಗೆ ಬಂದಿವೆ. “ಈಗ, ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲಿಗೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಇರುತ್ತದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಬದಲಿಗೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಇರುತ್ತದೆ. ಭಾರತೀಯ ಸಾಕ್ಷ್ಯ ಕಾಯಿದೆ ಬದಲಿಗೆ ಭಾರತೀಯ ಸಾಕ್ಷಿ ಅಧಿನಿಯಮ್ (ಬಿಎಸ್ಎ) ಇರುತ್ತದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಅಪರಾಧಗಳ ಕುರಿತು ಮಾತನಾಡಿದ ಶಾ, ಹೊಸ ಕಾನೂನು ಸಂತ್ರಸ್ತರ ಹೇಳಿಕೆಯನ್ನು ಅವರ ಮನೆಯಲ್ಲಿ ದಾಖಲಿಸಲು ಅವಕಾಶ ಒದಗಿಸುತ್ತದೆ, ಸಾಮಾಜಿಕ ನಿಂದೆಯಿಂದ ಅವಳನ್ನು ರಕ್ಷಿಸುವ ಆನ್‌ಲೈನ್ ಎಫ್‌ಐಆರ್ ಸೌಲಭ್ಯದ ಬಗ್ಗೆಯೂ ಸಚಿವರು ಮಾತನಾಡಿದ್ದಾರೆ.
ಇದನ್ನೂ ಓದಿ: Arvind Kejriwal: ಸಿಬಿಐ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್
ಗುಂಪು ಹತ್ಯೆ ಪ್ರಕರಣಕ್ಕೆ ಕಾನೂನಿನಲ್ಲಿ ಅವಕಾಶವಿರಲಿಲ್ಲ. ಅದನ್ನು ಈಗ ವ್ಯಾಖ್ಯಾನಿಸಲಾಗಿದೆ. ಇದು ಬಹುಕಾಲದ ಬೇಡಿಕೆಯಾಗಿತ್ತು. ಅಲ್ಲದೆ ದೇಶದ್ರೋಹದ ಸೆಕ್ಷನ್ ಅನ್ನು ಸಂಪೂರ್ಣವಾಗಿ ತೆಗೆದು ಹಾಕಿ ದೇಶ ವಿರೋಧಿ ಚಟುವಟಿಕೆಗಳಿಗೆ ಹೊಸ ಸೆಕ್ಷನ್ ತಂದಿದ್ದೇವೆ. ಈ ಹಿಂದೆ ಸರ್ಕಾರದ ವಿರುದ್ಧ ಹೇಳಿಕೆ ನೀಡುವುದು ಅಪರಾಧ. ಈಗ, ಭಾರತದ ಏಕತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರುವ ಪ್ರಯತ್ನಗಳ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನು ಇದೆ ”ಎಂದು ಅವರು ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:15 pm, Mon, 1 July 24