ಗುಂಪು ಹತ್ಯೆಗೆ ಮರಣದಂಡನೆ: ಲೋಕಸಭೆಯಲ್ಲಿ ಅಪರಾಧ ಕಾನೂನು ತಿದ್ದುಪಡಿ ಮಸೂದೆ ಮಂಡಿಸಿದ ಅಮಿತ್ ಶಾ

Indian Criminal Laws: 1860 ರ ಭಾರತೀಯ ದಂಡ ಸಂಹಿತೆಯನ್ನು ಭಾರತೀಯ ನ್ಯಾಯ ಸಂಹಿತಾ ಎಂದು ಬದಲಾಯಿಸಲಾಗುತ್ತದೆ. ಭಾರತೀಯ ಕ್ರಿಮಿನಲ್ ಪ್ರೊಸೀಜರ್ ಕೋಡ್ ನ್ನು ನಾಗರೀಕ ಸುರಕ್ಷಾ ಸಂಹಿತಾ ಎಂದು ಬದಲಿಸಲಾಗಿದ್ದು, ಭಾರತೀಯ ಸಾಕ್ಷ್ಯವು ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಬದಲಿಸುತ್ತದೆ. ಈ ಮೂರನ್ನೂ ಸ್ಥಾಯಿ ಸಮಿತಿ ಪರಿಶೀಲನೆಗೆ ಕಳುಹಿಸಲಾಗಿದೆ.

ಗುಂಪು ಹತ್ಯೆಗೆ ಮರಣದಂಡನೆ: ಲೋಕಸಭೆಯಲ್ಲಿ ಅಪರಾಧ ಕಾನೂನು ತಿದ್ದುಪಡಿ ಮಸೂದೆ ಮಂಡಿಸಿದ ಅಮಿತ್ ಶಾ
ಅಮಿತ್ ಶಾ
Follow us
ರಶ್ಮಿ ಕಲ್ಲಕಟ್ಟ
|

Updated on:Aug 11, 2023 | 3:29 PM

ದೆಹಲಿ ಆಗಸ್ಟ್ 11 : ವಸಾಹತುಶಾಹಿ ಯುಗದ ಭಾರತೀಯ ಕ್ರಿಮಿನಲ್ ಕಾನೂನುಗಳ (criminal justice system) ತಿದ್ದುಪಡಿಗಾಗಿ ಸರ್ಕಾರ ಇಂದು ( ಶುಕ್ರವಾರ) ಮೂರು ಮಸೂದೆಗಳನ್ನು ಮಂಡಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಬ್ರಿಟೀಷ್ ವಸಾಹತುಶಾಹಿ ಕಾಲದಲ್ಲಿದ್ದ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು ಇಂಡಿಯನ್ ಎವಿಡೆನ್ಸ್ ಆಕ್ಟ್-ಕಾನೂನುಗಳಿಗೆ ಪರ್ಯಾಯವಾಗಿ ಮೂರು ಮಸೂದೆಗಳನ್ನು ಲೋಕಸಭೆಯಲ್ಲಿ (Lok Sabha) ಮಂಡಿಸಿದ್ದಾರೆ. 1860 ರ ಭಾರತೀಯ ದಂಡ ಸಂಹಿತೆಯನ್ನು ಭಾರತೀಯ ನ್ಯಾಯ ಸಂಹಿತಾ ಎಂದು ಬದಲಾಯಿಸಲಾಗುತ್ತದೆ. ಭಾರತೀಯ ಕ್ರಿಮಿನಲ್ ಪ್ರೊಸೀಜರ್ ಕೋಡ್​​ನ್ನು ನಾಗರೀಕ ಸುರಕ್ಷಾ ಸಂಹಿತಾ ಎಂದು ಬದಲಿಸಲಾಗಿದ್ದು, ಭಾರತೀಯ ಸಾಕ್ಷ್ಯವು ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಬದಲಿಸುತ್ತದೆ. ಈ ಮೂರನ್ನೂ ಸ್ಥಾಯಿ ಸಮಿತಿ ಪರಿಶೀಲನೆಗೆ ಕಳುಹಿಸಲಾಗಿದೆ.

ವಿಯೋಜನೆ, ಸಶಸ್ತ್ರ ದಂಗೆ, ವಿಧ್ವಂಸಕ ಚಟುವಟಿಕೆಗಳು, ಪ್ರತ್ಯೇಕತಾವಾದಿ ಚಟುವಟಿಕೆಗಳು ಅಥವಾ ಸಾರ್ವಭೌಮತ್ವ ಅಥವಾ ಭಾರತದ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕಾರ್ಯಗಳ ಮೇಲೆ ಹೊಸ ಅಪರಾಧವನ್ನು ಪರಿಷ್ಕೃತ ಕಾನೂನುಗಳಲ್ಲಿ ಸೇರಿಸಲಾಗಿದೆ.

ದೇಶದ್ರೋಹ ಕಾನೂನನ್ನು “ಹಿಂಪಡೆಯಲಾಗಿದೆ” ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಉದ್ದೇಶಿತ ಕಾನೂನಿನಲ್ಲಿ “ದೇಶದ್ರೋಹ” ಎಂಬ ಪದವಿಲ್ಲ. ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳಿಗಾಗಿರುವ ಕಾನೂನನ್ನು ಸೆಕ್ಷನ್ 150 ಎಂದು ಬದಲಾಯಿಸಲಾಗಿದೆ.

ವಿಯೋಜನೆ, ಸಶಸ್ತ್ರ ದಂಗೆ, ವಿಧ್ವಂಸಕ ಚಟುವಟಿಕೆಗಳು, ಪ್ರತ್ಯೇಕತಾವಾದಿ ಚಟುವಟಿಕೆಗಳು ಅಥವಾ ಸಾರ್ವಭೌಮತ್ವ ಅಥವಾ ಭಾರತದ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕಾರ್ಯಗಳ ಮೇಲೆ ಹೊಸ ಅಪರಾಧವನ್ನು ಪರಿಷ್ಕೃತ ಕಾನೂನುಗಳಲ್ಲಿ ಸೇರಿಸಲಾಗಿದೆ.

ಯಾರೇ ಆಗಲಿ ಉದ್ದೇಶಪೂರ್ವಕ ಅಥವಾ ಗೊತ್ತಿದ್ದು ಪದಗಳಿಂದ, ಮಾತನಾಡುವ ಅಥವಾ ಬರೆಯುವ ಮೂಲಕ, ಅಥವಾ ಚಿಹ್ನೆಗಳ ಮೂಲಕ, ಅಥವಾ ಕಾಣಿಸುವಂಕತೆ, ಅಥವಾ ಎಲೆಕ್ಟ್ರಾನಿಕ್ ಸಂವಹನದಿಂದ ಅಥವಾ ಹಣಕಾಸಿನ ವಿಧಾನಗಳ ಮೂಲಕ, ಅಥವಾ ಇತರ ರೀತಿಯಲ್ಲಿ, ಪ್ರಚೋದಿಸುವ ಅಥವಾ ಪ್ರಯತ್ನಿಸುವ, ಪ್ರತ್ಯೇಕತೆ ಅಥವಾ ಸಶಸ್ತ್ರ ದಂಗೆ ಅಥವಾ ವಿಧ್ವಂಸಕ ಚಟುವಟಿಕೆಗಳು, ಅಥವಾ ಪ್ರತ್ಯೇಕತಾವಾದಿ ಚಟುವಟಿಕೆಗಳ ಭಾವನೆಗಳನ್ನು ಉತ್ತೇಜಿಸುವುದು ಅಥವಾ ಭಾರತದ ಸಾರ್ವಭೌಮತೆ ಅಥವಾ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡಿದೆರೆ ಅಥವಾ ಅಂತಹ ಯಾವುದೇ ಕೃತ್ಯದಲ್ಲಿ ತೊಡಗಿದರೆ ಅಥವಾ ಮಾಡಿದರೆ ಅವರಿಗೆ ಜೀವಾವಧಿ ಶಿಕ್ಷೆ ಅಥವಾ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆ ಮತ್ತು ದಂಡಕ್ಕೆ ಗುರಿಯಾಗಬಹುದು ಎಂದು ಈ ಕಾನೂನು ಹೇಳುತ್ತದೆ.

ಗುಂಪು ಹತ್ಯೆ ಪ್ರಕರಣಗಳಲ್ಲಿ ಮರಣದಂಡನೆಯನ್ನು ಕೇಂದ್ರವು ಪರಿಚಯಿಸಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಇತರ ಪ್ರಸ್ತಾವಿತ ಶಿಕ್ಷೆಗಳಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆ, ಮತ್ತು ಅಪ್ರಾಪ್ತ ವಯಸ್ಸಿನ ಅತ್ಯಾಚಾರಕ್ಕಾಗಿ ಮರಣದಂಡನೆ ವಿಧಿಸಲಾಗುವುದು.

ಹೊಸ ಮಸೂದೆಯು ಮಹಿಳೆಯರು ಮತ್ತು ಮಕ್ಕಳ ಮೇಲಿನ ಅಪರಾಧಗಳು, ಕೊಲೆಗಳು ಮತ್ತು “ರಾಜ್ಯದ ವಿರುದ್ಧದ ಅಪರಾಧಗಳ” ಕಾನೂನುಗಳಿಗೆ ಆದ್ಯತೆ ನೀಡುತ್ತದೆ. ಮೊದಲ ಬಾರಿಗೆ, ಸಣ್ಣ ಅಪರಾಧಗಳಿಗೆ ಶಿಕ್ಷೆಗಳಲ್ಲಿ ಸಮಾಜ ಸೇವೆಯನ್ನೂ ಸೇರಿಸಲಾಗಿದೆ. ಅಲ್ಲದೆ, ಅಪರಾಧಗಳನ್ನು ಲಿಂಗ ತಟಸ್ಥಗೊಳಿಸಲಾಗಿದೆ. ಸಂಘಟಿತ ಅಪರಾಧಗಳು ಮತ್ತು ಭಯೋತ್ಪಾದಕ ಚಟುವಟಿಕೆಗಳ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸಲು, ಭಯೋತ್ಪಾದಕ ಕೃತ್ಯಗಳು ಮತ್ತು ಸಂಘಟಿತ ಅಪರಾಧಗಳ ಹೊಸ ಅಪರಾಧಗಳನ್ನು ತಡೆಗಟ್ಟುವ ಶಿಕ್ಷೆಗಳೊಂದಿಗೆ ಸೇರಿಸಲಾಗಿದೆ. ವಿವಿಧ ಅಪರಾಧಗಳಿಗೆ ದಂಡ ಮತ್ತು ಶಿಕ್ಷೆಯನ್ನೂ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಸಂಸದ ಸ್ಥಾನ ಮರುಸ್ಥಾಪನೆ ಬಳಿಕ ಮೊದಲ ಬಾರಿಗೆ ವಯನಾಡಿಗೆ ಭೇಟಿ ನೀಡಲಿದ್ದಾರೆ ರಾಹುಲ್ ಗಾಂಧಿ

ಇದು ಬ್ರಿಟಿಷರ ಕಾಲದ ಕಾನೂನುಗಳನ್ನು ಪರಿಷ್ಕರಿಸಲು ಪ್ರಯತ್ನಿಸುತ್ತಿದೆ ಎಂದು ಅಮಿತ್ ಶಾ ಸಂಸತ್ ನಲ್ಲಿ ಹೇಳಿದ್ದಾರೆ. ಕೆಲವೊಂದು ಕಾನೂನುಗಳನ್ನು ರದ್ದು ಮಾಡಲಾಗುವುದು. ಆ ಕಾನೂನುಗಳು ಈ ಹಿಂದೆ ಬ್ರಿಟಿಷ್ ಆಡಳಿತವನ್ನು ರಕ್ಷಿಸುವುದು ಮತ್ತು ಬಲಪಡಿಸುವುದು ಆಗಿತ್ತು, ಶಿಕ್ಷೆ ವಿಧಿಸುವುದು ಮತ್ತು ನ್ಯಾಯವನ್ನು ನೀಡುವುದು ಆಗಿರಲಿಲ್ಲ. ಅವುಗಳನ್ನು ಬದಲಾಯಿಸುವ ಮೂಲಕ, ಹೊಸ ಮೂರು ಕಾನೂನುಗಳು ಭಾರತೀಯ ಪ್ರಜೆಯ ಹಕ್ಕುಗಳು ರಕ್ಷಿಸುವ ಉದ್ದೇಶ ಹೊಂದಿರುತ್ತದೆ ಎಂದು ಅಮಿತ್ ಶಾ ಲೋಕಸಭೆಯಲ್ಲಿ ಹೇಳಿದ್ದಾರೆ.

“ಶಿಕ್ಷಿಸುವುದೇ ಗುರಿಯಾಗಿರುವುದಿಲ್ಲ, ಅದು ನ್ಯಾಯವನ್ನು ಒದಗಿಸುವುದು. ಅಪರಾಧವನ್ನು ನಿಲ್ಲಿಸುವ ಭಾವನೆಯನ್ನು ಸೃಷ್ಟಿಸಲು ಶಿಕ್ಷೆಯನ್ನು ನೀಡಲಾಗುವುದು” ಎಂದು ಅವರು ಹೇಳಿದರು. ಹೊಸ ಮಸೂದೆಗಳಲ್ಲಿ ಮರಣದಂಡನೆ ಶಿಕ್ಷೆಯನ್ನು ಉಳಿಸಿಕೊಳ್ಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Fri, 11 August 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್