ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುತ್ತೇನೆ, ಜನರು ಶಾಂತಿ ಕಾಪಾಡಬೇಕು: ಅಮಿತ್ ಶಾ

|

Updated on: May 25, 2023 | 5:37 PM

ಮಣಿಪುರದಲ್ಲಿ ಹೊಸ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿದ್ದರಿಂದ ಒಬ್ಬ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಮಣಿಪುರದಲ್ಲಿ ಈ ತಿಂಗಳು ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 70 ಜನರು ಸಾವಿಗೀಡಾಗಿದ್ದು ಹತ್ತಾರು ಜನರು ನಿರಾಶ್ರಿತರಾಗಿದ್ದಾರೆ.

ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡುತ್ತೇನೆ, ಜನರು ಶಾಂತಿ ಕಾಪಾಡಬೇಕು: ಅಮಿತ್ ಶಾ
ಅಮಿತ್ ಶಾ
Follow us on

ಗುವಾಹಟಿ: ಮಣಿಪುರದಲ್ಲಿ (Manipur) ಶಾಂತಿ ನೆಲೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಗುರುವಾರ ಮನವಿ ಮಾಡಿದ್ದು, ಶೀಘ್ರದಲ್ಲೇ ಈಶಾನ್ಯ ರಾಜ್ಯಕ್ಕೆ ಭೇಟಿ ನೀಡಿ ಹಿಂಸಾಚಾರದಲ್ಲಿ ಭಾಗಿಯಾಗಿರುವ ಎರಡೂ ಸಮುದಾಯಗಳ ಜನರೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ನ್ಯಾಯಾಲಯದ ತೀರ್ಪಿನ ನಂತರ ಮಣಿಪುರದಲ್ಲಿ ಘರ್ಷಣೆಗಳು ನಡೆದಿವೆ. ನಾನು ಎರಡೂ ಗುಂಪುಗಳಿಗೆ ಮನವಿ ಮಾಡುತ್ತೇನೆ, ಅವರು ಶಾಂತಿಯನ್ನು ಕಾಪಾಡಬೇಕು. ಎಲ್ಲರಿಗೂ ನ್ಯಾಯ ಸಿಗುತ್ತದೆ. ಕೆಲವು ದಿನಗಳ ನಂತರ ನಾನೇ ಮಣಿಪುರಕ್ಕೆ ಹೋಗುತ್ತೇನೆ. ಮೂರು ದಿನಗಳ ಕಾಲ ಅಲ್ಲಿಯೇ ಇರುತ್ತೇನೆ. ಶಾಂತಿ ಸ್ಥಾಪನೆಗಾಗಿ ಮಣಿಪುರದ ಜನರೊಂದಿಗೆ ಮಾತನಾಡುತ್ತೇನೆ ಎಂದು ಅವರು ಗುವಾಹಟಿಯಲ್ಲಿ (Guwahati) ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿದರು.

ಮಣಿಪುರದಲ್ಲಿ ಹೊಸ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿದ್ದರಿಂದ ಒಬ್ಬ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಮಣಿಪುರದಲ್ಲಿ ಈ ತಿಂಗಳು ನಡೆದ ಜನಾಂಗೀಯ ಹಿಂಸಾಚಾರದಲ್ಲಿ ಕನಿಷ್ಠ 70 ಜನರು ಸಾವಿಗೀಡಾಗಿದ್ದು ಹತ್ತಾರು ಜನರು ನಿರಾಶ್ರಿತರಾಗಿದ್ದಾರೆ. ರಾಜ್ಯಾದ್ಯಂತ ಸುಮಾರು 2,000 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ.


ಬಹುಸಂಖ್ಯಾತ ಮೈತಿ ಸಮುದಾಯಕ್ಕೆ ಸರ್ಕಾರಿ ಉದ್ಯೋಗಗಳ ಖಾತರಿಯ ಕೋಟಾಗಳು ಮತ್ತು ಇತರ ಸವಲತ್ತುಗಳನ್ನು ನೀಡುವ ಬಗ್ಗೆ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕುಕಿ ಬುಡಕಟ್ಟು ಸಮುದಾಯ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು,.

ಹಿಂಸಾಚಾರದ ಹಿನ್ನಲೆಯಲ್ಲಿ ಇಲ್ಲಿ ಸೇನೆ ನಿಯೋಜಿಸಿ ಕರ್ಫ್ಯೂಗಳನ್ನು ವಿಧಿಸಲಾಗಿದೆ. ಹಲವಾರು ವಾರಗಳವರೆಗೆ ಇಂಟರ್ನೆಟ್ ಅನ್ನು ಕಡಿತಗೊಳಿಸಲಾಗಿದೆ.

ಶಂಕಿತ ಉಗ್ರರು ಜನರ ಗುಂಪಿನ ಮೇಲೆ ಗುಂಡು ಹಾರಿಸಿ ಒಬ್ಬ ವ್ಯಕ್ತಿ ಗಂಭೀರ ಗಾಯಗೊಂಡ ನಂತರ ಬಿಷ್ಣುಪುರ್ ಜಿಲ್ಲೆಯಲ್ಲಿ ಬುಧವಾರ ಅನಿರ್ದಿಷ್ಟಾವಧಿ ಕರ್ಫ್ಯೂ ಹೇರಲಾಗಿದೆ.

ಇದನ್ನೂ ಓದಿ: New Parliament Building: ರವಿವಾರ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿರುವ ಹೊಸ ಸಂಸತ್ ಭವನ ಹೇಗಿದೆ ಗೊತ್ತಾ?

ಉಗ್ರರ ಗುಂಡಿನ ದಾಳಿಯಲ್ಲಿ ಪರಿಹಾರ ಶಿಬಿರದಲ್ಲಿ ವಾಸಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಗಾಯಗೊಂಡರು ಮತ್ತು ಅವರಲ್ಲಿ ಒಬ್ಬರು ನಂತರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು ಹೆಸರು ಹೇಳಲು ಇಚ್ಛಿಸದ ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಎಎಫ್ ಬಿಗೆ ತಿಳಿಸಿದ್ದಾರೆ,.

ಗುಂಡಿನ ದಾಳಿಗೆ ಮುನ್ನ ಶಂಕಿತ ಉಗ್ರಗಾಮಿಗಳು ಹಿಂಸಾಚಾರದ ಸಂದರ್ಭದಲ್ಲಿ ಸ್ಥಳಾಂತರಗೊಂಡವರಿಗಾಗಿ ಸ್ಥಾಪಿಸಲಾದ ಪರಿಹಾರ ಶಿಬಿರದ ಸಮೀಪ ಜನವಾಸವಿಲ್ಲದ ಮನೆಗಳಿಗೆ ಬೆಂಕಿ ಹಚ್ಚಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ