ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಸಾವರ್ಕರ್ ಇದ್ದ ಜೈಲಿಗೆ ಭೇಟಿ ಗೌರವ ನಮನ ಸಲ್ಲಿಸಿದ ಅಮಿತ್ ಶಾ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಸಾವರ್ಕರ್ ಇದ್ದ ಜೈಲಿಗೆ ಭೇಟಿ ಗೌರವ ನಮನ ಸಲ್ಲಿಸಿದ ಅಮಿತ್ ಶಾ
ಅಮಿತ್ ಶಾ

Amit Shah ಮೂರು ದಿನಗಳ ಭೇಟಿಗಾಗಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ತಲುಪಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಲವಾರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

TV9kannada Web Team

| Edited By: Rashmi Kallakatta

Oct 15, 2021 | 5:06 PM

ದೆಹಲಿ: ಮೂರು ದಿನಗಳ ಭೇಟಿಗಾಗಿ ಶುಕ್ರವಾರ ಮಧ್ಯಾಹ್ನ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ (Andaman and Nicobar islands) ತಲುಪಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅಂಡಮಾನ್​​ನಲ್ಲಿ ಸಾವರ್ಕರ್ ಇದ್ದ ಸೆಲ್ಯುಲರ್ ಜೈಲಿಗೆ ಭೇಟಿ ನೀಡಿ ಸಾವರ್ಕರ್‌ಗೆ ಗೌರವ ನಮನ ಸಲ್ಲಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡಿರುವ ಶಾ ದ್ವೀಪಸಮೂಹದಲ್ಲಿನ ವಿವಿಧ ಅಭಿವೃದ್ಧಿ ಉಪಕ್ರಮಗಳ ಬಗ್ಗೆ ಗಮನಹರಿಸಲಿದ್ದಾರೆ. ಅವರು ಸಾವರ್ಕರ್ ಇದ್ದ ಜೈಲಿಗೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದ ನಂತರ ಅವರು ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಶಹೀದ್ ದ್ವೀಪ್ ಪರಿಸರ ಪ್ರವಾಸೋದ್ಯಮ ಯೋಜನೆ ಮತ್ತು ಸ್ವರಾಜ್ ದ್ವಿಪ್ ವಾಟರ್ ಏರೋಡ್ರೋಮ್ ಸೇರಿದಂತೆ ವಿವಿಧ ಅಭಿವೃದ್ಧಿ ಉಪಕ್ರಮಗಳ ವೈಮಾನಿಕ ಸಮೀಕ್ಷೆಯನ್ನು ಸಹ ಶಾ ಕೈಗೊಳ್ಳಲಿದ್ದಾರೆ. ಆನಂತರ ನೇತಾಜಿ ಸುಭಾಷ್ ಚಂದ್ರ ಬೋಸ್ ದ್ವೀಪಕ್ಕೆ ಭೇಟಿ ನೀಡಲಿದ್ದಾರೆ.

ಕೇಂದ್ರ ಸಚಿವರು ಭಾನುವಾರ ಅಂಡಮಾನ್ ಆಂಡ್ ನಿಕೋಬಾರ್ ಪೋಲಿಸ್ ಆಯೋಜಿಸುವ ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Global Hunger Index ಜಾಗತಿಕ ಹಸಿವು ಸೂಚ್ಯಂಕದಲ್ಲಿ 101ನೇ ಸ್ಥಾನಕ್ಕೆ ಕುಸಿದ ಭಾರತ: ಮೋದಿಗೆ ಅಭಿನಂದನೆ ಎಂದು ಟ್ವೀಟ್ ಮಾಡಿದ ಕಪಿಲ್ ಸಿಬಲ್

Follow us on

Related Stories

Most Read Stories

Click on your DTH Provider to Add TV9 Kannada