Dalit Convention: ಉತ್ತರ ಪ್ರದೇಶದಲ್ಲಿ ದಲಿತ ಸಮಾವೇಶವನ್ನುದ್ದೇಶಿ ಮಾತನಾಡಲಿದ್ದಾರೆ ಅಮಿತ್ ಶಾ

ಡಾ.ಭೀಮರಾವ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಗೆ (ಏಪ್ರಿಲ್ 14) ಮುಂಚಿತವಾಗಿ ದಲಿತ ಸಮುದಾಯವನ್ನು ಓಲೈಸಲು ಬಿಜೆಪಿಯು ಪಕ್ಷದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಗುರುವಾರ ‘ಸಾಮಾಜಿಕ ನ್ಯಾಯ ಸಪ್ತಾಹ’ವನ್ನು ಪ್ರಾರಂಭಿಸಿತು

Dalit Convention: ಉತ್ತರ ಪ್ರದೇಶದಲ್ಲಿ ದಲಿತ ಸಮಾವೇಶವನ್ನುದ್ದೇಶಿ ಮಾತನಾಡಲಿದ್ದಾರೆ ಅಮಿತ್ ಶಾ
ಅಮಿತ್ ಶಾ
Follow us
ರಶ್ಮಿ ಕಲ್ಲಕಟ್ಟ
|

Updated on: Apr 07, 2023 | 7:00 AM

ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು(ಏಪ್ರಿಲ್ 7) ಉತ್ತರ ಪ್ರದೇಶದ(Uttar Pradesh) ಕೌಶಾಂಬಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಕೌಶಂಬಿ ಉತ್ಸವದ ಅಂಗವಾಗಿ ದಲಿತ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೌಶಾಂಬಿ ಉತ್ಸವವನ್ನು ಏಪ್ರಿಲ್ 7 ರಿಂದ ಏಪ್ರಿಲ್ 9 ರವರೆಗೆ ಸಂಸದ ವಿನೋದ್ ಸೋನ್ಕರ್ ಆಯೋಜಿಸಿದ್ದಾರೆ. ಉತ್ಸವದ ಉದ್ಘಾಟನೆ, ಕ್ರೀಡಾಕೂಟದ ಸಮಾರೋಪ ಹಾಗೂ ದಲಿತರ ಸಮಾವೇಶದಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಅದೇ ವೇಳೆ ರಾಜ್ಯದ ಹಲವು ಕಾರ್ಯಕ್ರಮಗಳಲ್ಲಿ ಶಾ ಭಾಗಿಯಾಗಲಿದ್ದಾರೆ. ಪಕ್ಷದ ಮೂಲಗಳ ಪ್ರಕಾರ, ದಲಿತ ಸಮಾವೇಶದ ಮೂಲಕ ಬಿಜೆಪಿ ರಾಜ್ಯದಲ್ಲಿ ಬಹುಜನ ಸಮಾಜ ಪಕ್ಷ (BSP) ಮತ್ತು ಸಮಾಜವಾದಿ ಪಕ್ಷದ (SP) ಮತದಾರರನ್ನು ಸೆಳೆಯಲು ಸಿದ್ಧತೆ ನಡೆಸಿದೆ.

ಡಾ.ಭೀಮರಾವ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಗೆ (ಏಪ್ರಿಲ್ 14) ಮುಂಚಿತವಾಗಿ ದಲಿತ ಸಮುದಾಯವನ್ನು ಓಲೈಸಲು ಬಿಜೆಪಿಯು ಪಕ್ಷದ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಗುರುವಾರ ‘ಸಾಮಾಜಿಕ ನ್ಯಾಯ ಸಪ್ತಾಹ’ವನ್ನು ಪ್ರಾರಂಭಿಸಿತು. 2024 ರ ಲೋಕಸಭಾ ಚುನಾವಣೆಯಲ್ಲಿ ದಲಿತ ಮತಗಳ ಮೇಲೆ ಕಣ್ಣಿಟ್ಟು ಬಿಜೆಪಿ ಈ ಹೆಜ್ಜೆಯಿಟ್ಟಿದೆ.

ಸಾಮಾಜಿಕ ನ್ಯಾಯ ಸಪ್ತಾಹದಡಿ ಬಿಜೆಪಿ ಯುವಮೋರ್ಚಾ ಶುಕ್ರವಾರ ವೈದ್ಯಕೀಯ ಶಿಬಿರ ಮತ್ತು ಸಮುದಾಯದ ಊಟದ ಕಾರ್ಯಕ್ರಮ ಆಯೋಜಿಸಿದ್ದು, ಮರುದಿನ ಪರಿಶಿಷ್ಟ ಪಂಗಡ ಮೋರ್ಚಾ ಬುಡಕಟ್ಟು ಯುವಕರಿಗೆ ಸಮಾವೇಶ ನಡೆಸಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ದಲಿತರು ಒಟ್ಟು ಜನಸಂಖ್ಯೆಯ ಶೇಕಡ 22 ರಷ್ಟಿದ್ದಾರೆ. ಏಪ್ರಿಲ್ 14 ರಿಂದ ಮೇ 5 ರವರೆಗೆ ರಾಜ್ಯಾದ್ಯಂತ ಸರಣಿ ವಿಚಾರ ಸಂಕಿರಣಗಳು ನಡೆಯಲಿದ್ದು, 1995 ರಲ್ಲಿ ಅತಿಥಿ ಗೃಹದ ಘಟನೆಯಲ್ಲಿ ಬಿಜೆಪಿ ನಾಯಕರು ಸಮಾಜವಾದಿ ಪಕ್ಷದ ಗೂಂಡಾಗಳಿಂದ ಮಾಯಾವತಿ ಅವರ ಜೀವವನ್ನು ಹೇಗೆ ಉಳಿಸಿದರು ಎಂಬುದನ್ನು ನಾವು ಜನರಿಗೆ ತಿಳಿಸುತ್ತೇವೆ.ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಈಗ ಕಾನ್ಶಿರಾಮ್ ಅವರ ಪ್ರತಿಮೆಯನ್ನು ಅನಾವರಣಗೊಳಿಸುವ ಮೂಲಕ ಸುಳ್ಳಿನ ರಾಜಕೀಯ ಮಾಡುತ್ತಿದ್ದಾರೆ. ಆದರೆ ದಲಿತ ಸಮಾಜವು ಅವರನ್ನು ತಮ್ಮ “ದೊಡ್ಡ ಎದುರಾಳಿ” ಎಂದು ಪರಿಗಣಿಸುತ್ತದೆ ಎಂದು ಉತ್ತರ ಪ್ರದೇಶ ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ಅಧ್ಯಕ್ಷ ರಾಮಚಂದ್ರ ಕನೋಜಿಯಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ