ಓವೈಸಿ ಬೆಂಗಾವಲು ಪಡೆ ಮೇಲೆ ನಡೆದ ದಾಳಿಯ ಬಗ್ಗೆ ಸಂಸತ್​​ನಲ್ಲಿ ಹೇಳಿಕೆ ನೀಡಲಿದ್ದಾರೆ ಅಮಿತ್ ಶಾ

| Updated By: ರಶ್ಮಿ ಕಲ್ಲಕಟ್ಟ

Updated on: Feb 07, 2022 | 10:37 AM

ಗುರುವಾರ ಸಂಜೆ ಪಶ್ಚಿಮ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಛಜರ್ಸಿ ಟೋಲ್ ಪ್ಲಾಜಾದಲ್ಲಿ ಓವೈಸಿ ಅವರ ಕಾರಿನ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಓವೈಸಿ ಬೆಂಗಾವಲು ಪಡೆ ಮೇಲೆ ನಡೆದ ದಾಳಿಯ ಬಗ್ಗೆ ಸಂಸತ್​​ನಲ್ಲಿ  ಹೇಳಿಕೆ ನೀಡಲಿದ್ದಾರೆ ಅಮಿತ್ ಶಾ
ಅಮಿತ್ ಶಾ
Follow us on

ದೆಹಲಿ: ಉತ್ತರ ಪ್ರದೇಶದಲ್ಲಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಸಂಸದ ಅಸಾದುದ್ದೀನ್ ಓವೈಸಿ (Asaduddin Owaisi) ಅವರ ಬೆಂಗಾವಲು ಪಡೆ ಮೇಲೆ ಇತ್ತೀಚೆಗೆ ನಡೆದ ದಾಳಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಸಂಸತ್ತಿನ ಉಭಯ ಸದನಗಳಲ್ಲಿ ಹೇಳಿಕೆ ನೀಡಲಿದ್ದಾರೆ. ಗುರುವಾರ ಸಂಜೆ ಪಶ್ಚಿಮ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ಛಜರ್ಸಿ ಟೋಲ್ ಪ್ಲಾಜಾದಲ್ಲಿ ಓವೈಸಿ ಅವರ ಕಾರಿನ ಮೇಲೆ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೀರತ್ ಜಿಲ್ಲೆಯ ಕಿಥೋರ್ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ಸಂಜೆ ಓವೈಸಿ ತಮ್ಮ ಪಕ್ಷದ ಅಭ್ಯರ್ಥಿ ಪರ ಮನೆ ಮನೆಗೆ ಪ್ರಚಾರ ನಡೆಸಿ ದೆಹಲಿಗೆ ವಾಪಸಾಗುತ್ತಿದ್ದಾಗ ಗುಂಡು ಹಾರಿಸಲಾಗಿದೆ. ಅವರ ಬೆಂಗಾವಲು ಪಡೆ ದಾಳಿಗೆ ಒಳಗಾದ ಒಂದು ದಿನದ ನಂತರ ಅವರಿಗೆ ಝೆಡ್ ಕೆಟಗರಿ ಭದ್ರತೆಯನ್ನು ನೀಡಲಾಯಿತು. ಆದರೆ ಓವೈಸಿ   ಅದನ್ನು ನಿರಾಕರಿಸಿದರು.  ಲೋಕಸಭೆಯಲ್ಲಿಯೂ ಸೋಮವಾರ ಕೇಂದ್ರ ಬಜೆಟ್‌ನ ಚರ್ಚೆ ನಡೆಯಲಿದೆ.  ಬುಡಕಟ್ಟು ವ್ಯವಹಾರಗಳ ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರು ಸೋಮವಾರ ಲೋಕಸಭೆಯಲ್ಲಿ ತ್ರಿಪುರಾದ ಪರಿಶಿಷ್ಟ ಪಂಗಡಗಳ ಪಟ್ಟಿಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಮಂಡಿಸಲಿದ್ದಾರೆ.

ಅರ್ಜುನ್ ಮುಂಡಾ ಅವರು ಸಂವಿಧಾನ (ಪರಿಶಿಷ್ಟ ಬುಡಕಟ್ಟುಗಳು) ಆದೇಶ (ತಿದ್ದುಪಡಿ) ಮಸೂದೆ, 2022 ಅನ್ನು ಪರಿಚಯಿಸಲಿದ್ದಾರೆ. ತ್ರಿಪುರಾ ರಾಜ್ಯಕ್ಕೆ ಸಂಬಂಧಿಸಿದಂತೆ ಕೆಲವು ಸಮುದಾಯಗಳನ್ನು ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿ ಸೇರಿಸಲು ಸಂವಿಧಾನ (ಪರಿಶಿಷ್ಟ ಬುಡಕಟ್ಟುಗಳು) ಆದೇಶ, 1950 ಅನ್ನು ತಿದ್ದುಪಡಿ ಮಾಡುವ ಗುರಿಯನ್ನು ಈ ಮಸೂದೆ ಹೊಂದಿದೆ. ಪ್ರಸ್ತುತ, ತ್ರಿಪುರಾದಲ್ಲಿ 19 ಅಧಿಸೂಚಿತ ಪರಿಶಿಷ್ಟ ಪಂಗಡಗಳಿವೆ.

ಕಳೆದ ವಾರ ಬಿಡುಗಡೆಯಾದ ಬುಲೆಟಿನ್ ಪ್ರಕಾರ, ಚುನಾವಣೆಗೆ ಒಳಪಟ್ಟಿರುವ ಉತ್ತರ ಪ್ರದೇಶ ಮತ್ತು ಜಾರ್ಖಂಡ್‌ನ ಎಸ್‌ಸಿ ಮತ್ತು ಎಸ್‌ಟಿ ಪಟ್ಟಿಗಳನ್ನು ತಿದ್ದುಪಡಿ ಮಾಡುವ ಮಸೂದೆಗಳನ್ನು ಸಹ ಸರ್ಕಾರದ ಕಾರ್ಯಸೂಚಿಯಲ್ಲಿ ಪಟ್ಟಿ ಮಾಡಲಾಗಿದೆ.

ರಾಜ್ಯಸಭೆಯಲ್ಲಿ ಮುಂಡಾ ಅವರು ಸಂವಿಧಾನ (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು) ಆದೇಶಗಳ (ತಿದ್ದುಪಡಿ) ಮಸೂದೆ, 2022 ಅನ್ನು ಮಂಡಿಸಲಿದ್ದಾರೆ. ಈ ಮಸೂದೆಯು ಸಂವಿಧಾನದ (ಪರಿಶಿಷ್ಟ ಜಾತಿಗಳು) ಆದೇಶ, 1950 ಅನ್ನು ಮತ್ತಷ್ಟು ತಿದ್ದುಪಡಿ ಮಾಡುವ ಜಾರ್ಖಂಡ್‌ಗೆ ಸಂಬಂಧಿಸಿದಂತೆ ಮತ್ತು ಸಂವಿಧಾನ (ಪರಿಶಿಷ್ಟ ಬುಡಕಟ್ಟುಗಳು) ಆದೇಶ, 1950 ರಾಜ್ಯಕ್ಕೆ ಸಂಬಂಧಿಸಿದಂತೆ ಕೆಲವು ಸಮುದಾಯಗಳನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗಳಲ್ಲಿ ಸೇರಿಸುವ ಗುರಿಯನ್ನು ಹೊಂದಿದೆ.

ಉಭಯ ಸದನಗಳು ವಂದನಾ ನಿರ್ಣಯದ ಮೇಲಿನ ಚರ್ಚೆಯನ್ನು ಮುಂದುವರಿಸಲಿದ್ದು, ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚರ್ಚೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ:ಗಾಂಧಿಯನ್ನು ಕೊಂದವರೇ ನನ್ನ ಮೇಲೆ ದಾಳಿ ನಡೆಸಿದ್ದಾರೆ; ಅಸಾದುದ್ದೀನ್ ಓವೈಸಿ ಆರೋಪ

Published On - 10:16 am, Mon, 7 February 22