ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆಯ ವೈರಲ್ ವಿಡಿಯೊ ಪ್ರಕರಣದ ತನಿಖೆ ಸಿಬಿಐಗೆ ವಹಿಸಿದ ಕೇಂದ್ರ ಸರ್ಕಾರ

ಘಟನೆ ನಡೆದ ವಾರಗಳ ನಂತರ ಜುಲೈ 19 ರಂದು ಮಣಿಪುರದಲ್ಲಿ ಮೂವರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಪರೇಡ್ ಮಾಡಿದ ವಿಡಿಯೊ ಬೆಚ್ಚಿ ಬೀಳಿಸಿತ್ತು. ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ವಿಪಕ್ಷಗಳು ಒತ್ತಾಯಿಸಿ ಪ್ರತಿಭಟಿಸಿದ್ದು, ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಅಡ್ಡಿಪಡಿಸಿವೆ.

ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆಯ ವೈರಲ್ ವಿಡಿಯೊ ಪ್ರಕರಣದ ತನಿಖೆ ಸಿಬಿಐಗೆ ವಹಿಸಿದ ಕೇಂದ್ರ ಸರ್ಕಾರ
ಸಿಬಿಐ
Follow us
ರಶ್ಮಿ ಕಲ್ಲಕಟ್ಟ
|

Updated on: Jul 27, 2023 | 8:44 PM

ದೆಹಲಿ ಜುಲೈ 27: ಮಣಿಪುರದಲ್ಲಿ (Manipur) ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (CBI)ಗೆ ವರ್ಗಾಯಿಸಲು ಕೇಂದ್ರ ಗೃಹ ಸಚಿವಾಲಯ (Union home ministry) ನಿರ್ಧರಿಸಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ. ವೈರಲ್ ವಿಡಿಯೊ ಪ್ರಕರಣದ ವಿಚಾರಣೆಯನ್ನು ಕಲಹ ಪೀಡಿತ ಮಣಿಪುರದ ಹೊರಗೆ ನಡೆಸುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡುವ ಅಫಿಡವಿಟ್ ಅನ್ನು ಕೂಡಾ ಸರ್ಕಾರ ಸಲ್ಲಿಸಲಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಘಟನೆ ನಡೆದ ವಾರಗಳ ನಂತರ ಜುಲೈ 19 ರಂದು ಮಣಿಪುರದಲ್ಲಿ ಮೂವರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಪರೇಡ್ ಮಾಡಿದ ವಿಡಿಯೊ ಬೆಚ್ಚಿ ಬೀಳಿಸಿತ್ತು. ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ವಿಪಕ್ಷಗಳು ಒತ್ತಾಯಿಸಿ ಪ್ರತಿಭಟಿಸಿದ್ದು, ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಅಡ್ಡಿಪಡಿಸಿವೆ.

ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರಕಾರ, ಮೇ 4 ರಂದು 800-1000 ಪುರುಷರ ಗುಂಪೊಂದು ಮಹಿಳೆಯೊಬ್ಬರ ಸಹೋದರ ಮತ್ತು ತಂದೆಯನ್ನು ಕೊಂದಿದೆ. ಒಂದು ಕುಟುಂಬದ ಮೂವರು ಮಹಿಳೆಯರಲ್ಲಿ ಒಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ವಿಡಿಯೊ ಚಿತ್ರೀಕರಿಸಿದ ಮೊಬೈಲ್ ಫೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ವಿಡಿಯೊವನ್ನು ಚಿತ್ರೀಕರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಜನರನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ. ರಾಜ್ಯದಲ್ಲಿ ಸಹಜತೆಯನ್ನು ಪುನಃಸ್ಥಾಪಿಸುವ ಪ್ರಯತ್ನದಲ್ಲಿ ಗೃಹ ಸಚಿವಾಲಯವು ಕುಕಿ ಮತ್ತು ಮೈತಿ ಸಮುದಾಯಗಳ ಸದಸ್ಯರೊಂದಿಗೆ ಹಲವಾರು ಸುತ್ತಿನ ಮಾತುಕತೆಗಳನ್ನು ನಡೆಸಿದೆ ಎಂದು ವರದಿ ಸೂಚಿಸುತ್ತದೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ರೆಡ್ ಡೈರಿ ಕಾಂಗ್ರೆಸ್​​ನ್ನು ಅಧಿಕಾರದಿಂದ ಕೆಳಗಿಳಿಸುತ್ತದೆ: ಗೆಹ್ಲೋಟ್ ಸರ್ಕಾರ ವಿರುದ್ಧ ಮೋದಿ ವಾಗ್ದಾಳಿ

ಶೇ 53 ಜನಸಂಖ್ಯೆಯನ್ನು ಹೊಂದಿರುವ ಮಣಿಪುರದ ಪ್ರಬಲ ಸಮುದಾಯವಾದ ಮೈತಿಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಬೇಕೆಂದು ಸರ್ಕಾರಕ್ಕೆ ಶಿಫಾರಸು ಮಾಡಿದ ಮಣಿಪುರ ಉಚ್ಚ ನ್ಯಾಯಾಲಯದ ಆದೇಶದ ವಿರುದ್ಧ ಕುಕಿ ಸಮುದಾಯದ ಸದಸ್ಯರು ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದ ನಂತರ ಮೇ 3 ರಂದು ಜನಾಂಗೀಯ ಘರ್ಷಣೆಗಳು ಪ್ರಾರಂಭವಾದವು. ಮಣಿಪುರದಲ್ಲಿ ಸುಮಾರು ಮೂರು ತಿಂಗಳ ಕಾಲ ನಡೆದ ಜನಾಂಗೀಯ ಹಿಂಸಾಚಾರವು 160 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ.

ಲೈಂಗಿಕ ದೌರ್ಜನ್ಯದ ವಿಡಿಯೊ ವೈರಲ್ ಆದ ನಂತರ, ಇಬ್ಬರು ಮಹಿಳೆಯರ ಮೇಲಿನ ಹಲ್ಲೆಗಳು ಅಕ್ಷಮ್ಯ ಎಂದು ಮೋದಿ ಖಂಡಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್