Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ಯೇಂದ್ರ ಜೈನ್ ವಿರುದ್ಧ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ

ಈ ವರ್ಷದ ಆರಂಭದಲ್ಲಿ, ದೆಹಲಿ ಎಲ್ ಜಿ ವಿಕೆ ಸಕ್ಸೇನಾ ಅವರು ಸತ್ಯೇಂದ್ರ ಜೈನ್ ವಿರುದ್ಧದ ಸುಲಿಗೆ ಆರೋಪಗಳ ಸಿಬಿಐ ತನಿಖೆಗೆ ಅನುಮತಿ ನೀಡಿದರು. ಸುಲಿಗೆ ಆರೋಪಗಳ ತನಿಖೆಗೆ ಎಲ್‌ಜಿ ಒಪ್ಪಿಗೆ ಕೋರಿ ಕಳೆದ ವರ್ಷ ನವೆಂಬರ್‌ನಲ್ಲಿ ಸಿಬಿಐ ಬರೆದ ಪತ್ರದಲ್ಲಿ, ಜೈನ್ ಅವರು ತಿಹಾರ್ ಜೈಲಿನಿಂದ ಉನ್ನತ ಸುಲಿಗೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಸತ್ಯೇಂದ್ರ ಜೈನ್ ವಿರುದ್ಧ ಸಿಬಿಐ ತನಿಖೆಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ
ಸತ್ಯೇಂದ್ರ ಜೈನ್
Follow us
ರಶ್ಮಿ ಕಲ್ಲಕಟ್ಟ
|

Updated on: Mar 29, 2024 | 7:53 PM

ದೆಹಲಿ ಮಾರ್ಚ್ 29: ‘ರಕ್ಷಣಾ ಹಣ’ ಎಂದು ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrashekhar) ಅವರಿಂದ ₹10 ಕೋಟಿ ಸುಲಿಗೆ ಮಾಡಿದ ಆರೋಪದ ಮೇಲೆ ಜೈಲು ಪಾಲಾದ ಎಎಪಿ ನಾಯಕ ಸತ್ಯೇಂದ್ರ ಜೈನ್ (Satyendar Jain) ವಿರುದ್ಧ ಸಿಬಿಐ (CBI) ತನಿಖೆಗೆ ಕೇಂದ್ರ ಗೃಹ ಸಚಿವಾಲಯ (Union home ministry) ಅನುಮತಿ ನೀಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಜೈನ್ ಮತ್ತು ತಿಹಾರ್ ಜೈಲಿನ ಮಾಜಿ ಡಿಜಿ ಸಂದೀಪ್ ಗೋಯೆಲ್ ಅವರು ತಿಹಾರ್‌ನಿಂದ ಸುಲಿಗೆ ದಂಧೆ ನಡೆಸುತ್ತಿದ್ದಾರೆ ಮತ್ತು ಉನ್ನತ ಮಟ್ಟದ ಕೈದಿಗಳಿಂದ ರಕ್ಷಣಾ ಹಣವನ್ನು ಕೇಳುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal)  ಇಡಿ ಬಂಧನದಲ್ಲಿರುವಾಗಲೇ ಈ ಬೆಳವಣಿಗೆ ನಡೆದಿದೆ.

ಈ ವರ್ಷದ ಆರಂಭದಲ್ಲಿ, ದೆಹಲಿ ಎಲ್ ಜಿ ವಿಕೆ ಸಕ್ಸೇನಾ ಅವರು ಸತ್ಯೇಂದ್ರ ಜೈನ್ ವಿರುದ್ಧದ ಸುಲಿಗೆ ಆರೋಪಗಳ ಸಿಬಿಐ ತನಿಖೆಗೆ ಅನುಮತಿ ನೀಡಿದರು. ಸುಲಿಗೆ ಆರೋಪಗಳ ತನಿಖೆಗೆ ಎಲ್‌ಜಿ ಒಪ್ಪಿಗೆ ಕೋರಿ ಕಳೆದ ವರ್ಷ ನವೆಂಬರ್‌ನಲ್ಲಿ ಸಿಬಿಐ ಬರೆದ ಪತ್ರದಲ್ಲಿ, ಜೈನ್ ಅವರು ತಿಹಾರ್ ಜೈಲಿನಿಂದ ಉನ್ನತ ಸುಲಿಗೆ ದಂಧೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದರು. ಚಂದ್ರಶೇಖರ್ ಅವರಿಗೆ ಜೈಲಿನಲ್ಲಿ ಶಾಂತಿಯುತವಾಗಿ ಮತ್ತು ಆರಾಮವಾಗಿ ಬದುಕು ಸಾಗಿಸಲು “ರಕ್ಷಣಾ ಹಣ” ವಾಗಿ ₹ 10 ಕೋಟಿಗೆ ಬೇಡಿಕೆ ಇಟ್ಟಿದ್ದರು ಎಂದಿತ್ತು.

ಜೈನ್ ಅವರು ದೆಹಲಿಯ ವಿವಿಧ ಜೈಲುಗಳಾದ ತಿಹಾರ್, ರೋಹಿಣಿ ಮತ್ತು ಮಂಡೋಲಿಯಲ್ಲಿ ಆರಾಮವಾಗಿ ವಾಸಿಸಲು ಅನುಕೂಲವಾಗುವಂತೆ 2018-21ರ ಅವಧಿಯಲ್ಲಿ ವೈಯಕ್ತಿಕವಾಗಿ ಅಥವಾ ಅವರ ಸಹಚರರ ಮೂಲಕ ವಿವಿಧ ಕಂತುಗಳಲ್ಲಿ ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ಆರೋಪಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಹುಲ್ ಗಾಂಧಿಯ ‘ಹಿಂದೂ ಶಕ್ತಿ’ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಕಂಗನಾ ರಣಾವತ್

ಸತ್ಯೇಂದ್ರ ಜೈನ್ ಅವರನ್ನು ಮೇ 2022 ರಲ್ಲಿ ಮನಿ ಲಾಂಡರಿಂಗ್ ತಡೆ ಕಾಯ್ದೆಯಡಿ ಬಂಧಿಸಲಾಯಿತು. ಅವರ ಕೊನೆಯ ಜಾಮೀನು ಅರ್ಜಿಯನ್ನು ಈ ವರ್ಷದ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿತು. ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣಾಗುವಂತೆ ಸುಪ್ರೀಂಕೋರ್ಟ್ ಅವರಿಗೆ ಸೂಚಿಸಿತು. ಮೇ 26, 2023 ರಂದು ಅವರು ಜೈಲಿನ ಸ್ನಾನಗೃಹದಲ್ಲಿ ಬಿದ್ದ ನಂತರ ಅವರಿಗೆ ಮಧ್ಯಂತರ ವೈದ್ಯಕೀಯ ಜಾಮೀನು ನೀಡಲಾಯಿತು. ಜಾಮೀನು ಅವಧಿಯಲ್ಲಿ ಅವರು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್