ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡಲ್ಲ: ಸುಪ್ರೀಂಕೋರ್ಟ್​ ನಿವೃತ್ತ ನ್ಯಾಯಮೂರ್ತಿ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ

ಜನರಿಂದ ಆಯ್ಕೆಯಾಗಿರುವ ಜನಪ್ರಿಯ ಪ್ರಧಾನಿಯನ್ನು ಸಾರ್ವಜನಿಕವಾಗಿ ನಿಂದಿಸುವ ವ್ಯಕ್ತಿಗಳು ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲ ಎಂದು ಕೂಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತುರ್ತು ಪರಿಸ್ಥಿತಿ ಬಗ್ಗೆ ಮಾತನಾಡಲ್ಲ: ಸುಪ್ರೀಂಕೋರ್ಟ್​ ನಿವೃತ್ತ ನ್ಯಾಯಮೂರ್ತಿ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ
ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 04, 2022 | 1:02 PM

ದೆಹಲಿ: ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಅವರು ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ ಎಂದು ನೀಡಿರುವ ಹೇಳಿಕೆಯನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಟೀಕಿಸಿದ್ದಾರೆ. ಜನರಿಂದ ಆಯ್ಕೆಯಾಗಿರುವ ಜನಪ್ರಿಯ ಪ್ರಧಾನಿಯನ್ನು ಸಾರ್ವಜನಿಕವಾಗಿ ನಿಂದಿಸುವ ವ್ಯಕ್ತಿಗಳು ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವಿಲ್ಲ ಎಂದು ಕೂಗುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ಅವರು ದಿನಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದ ತುಣುಕನ್ನು ಟ್ವೀಟ್ ಮಾಡಿರುವ ಕಿರಣ್ ರಿಜಿಜು, ‘ಜನಪ್ರಿಯ ಪ್ರಧಾನಿಯನ್ನು ಎಗ್ಗಿಲ್ಲದೆ ಟೀಕಿಸುವ ಇಂಥವರು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಅಳುತ್ತಿದ್ದಾರೆ. ಅಂಥವರು ಕಾಂಗ್ರೆಸ್​ ಪಕ್ಷವು ದೇಶದ ಮೇಲೆ ಹೇರಿದ ತುರ್ತುಪರಿಸ್ಥಿತಿ ಬಗ್ಗೆಯಾಗಲೀ, ದೇಶದ ಕೆಲ ಪ್ರಾದೇಶಿಕ ಪಕ್ಷಗಳ ಮುಖ್ಯಮಂತ್ರಿಗಳ ಬಗ್ಗೆಯಾಗಲೀ ಎಂದಿಗೂ ಮಾತನಾಡುವುದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಮೂರ್ತಿಗಳು ಸಂದರ್ಶನದಲ್ಲಿ ಮಾತನಾಡುವಾಗ, ‘ಇಂದು ಕೆಲ ಸಂಗತಿಗಳು ತೀರಾ ಕೆಟ್ಟದಾಗಿವೆ. ನಾನು ಸಾರ್ವಜನಿಕ ಸ್ಥಳದಲ್ಲಿ ನಿಂತು ಪ್ರಧಾನಿಯ ಮುಖ ನನಗಿಷ್ಟವಿಲ್ಲ ಎಂದು ಹೇಳಿದರೆ ನನ್ನ ಮೇಲೆ ದಾಳಿಯಾಗಬಹುದು. ಯಾವುದೇ ಕಾರಣ ನೀಡದೇ ನನ್ನನ್ನು ಬಂಧಿಸಿ ಜೈಲಿಗೆ ಅಟ್ಟಬಹುದು. ಈ ಪ್ರವೃತ್ತಿಯನ್ನು ದೇಶದ ಎಲ್ಲ ನಾಗರಿಕರು ವಿರೋಧಿಸುತ್ತಿದ್ದೇವೆ’ ಎಂದು ಹೇಳಿದ್ದರು.

ಈ ಹೇಳಿಕೆ ಖಂಡಿಸಿ ಶನಿವಾರ ಸರಣಿ ಟ್ವೀಟ್ ಮಾಡಿರುವ ಕೇಂದ್ರ ಸಚಿವರು, ಸುಪ್ರೀಂಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಈ ಹೇಳಿಕೆ ನೀಡಿರುವುದು ನಿಜವೇ ಆಗಿದ್ದರೆ, ಅವರು ತಾವು ಸೇವೆ ಸಲ್ಲಿಸಿದ ಸಂಸ್ಥೆಗೆ ಅವಮಾನ ಮಾಡಿದಂತೆ ಎಂದು ಹೇಳಿದ್ದರು.

Published On - 1:01 pm, Sun, 4 September 22

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು