Kiren Rijiju: ಜಮ್ಮು ಕಾಶ್ಮೀರದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಕಾರು ಅಪಘಾತ; ಯಾರಿಗೂ ಪ್ರಾಣಾಪಾಯವಿಲ್ಲ

|

Updated on: Apr 08, 2023 | 8:53 PM

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

Kiren Rijiju: ಜಮ್ಮು ಕಾಶ್ಮೀರದಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಕಾರು ಅಪಘಾತ; ಯಾರಿಗೂ ಪ್ರಾಣಾಪಾಯವಿಲ್ಲ
ಕಿರಣ್ ರಿಜಿಜು
Follow us on

ಜಮ್ಮು ಮತ್ತು ಕಾಶ್ಮೀರದ (Jammu and Kashmir) ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಅವರ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು ಅಪಘಾತ (Accident) ಸಂಭವಿಸಿದೆ. ಈ ಅಪಘಾತದಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಕಾರಿನಲ್ಲಿದ್ದ ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಇತರರು ಸಂಚರಿಸುತ್ತಿದ್ದರು. ಅಪಘಾತದಲ್ಲಿ ಬುಲೆಟ್‌ಪ್ರೂಫ್ ಕಾರು ಜಖಂಗೊಂಡಿದೆ. ಇಂದು ಜಮ್ಮುವಿನಿಂದ ಶ್ರೀನಗರಕ್ಕೆ ರಸ್ತೆ ಮಾರ್ಗವಾಗಿ ಹೋಗುತ್ತಿದ್ದಾಗ ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಕಾರು ಸಣ್ಣ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕಿರಣ್ ರಿಜಿಜು ಅವರನ್ನು ಸುರಕ್ಷಿತವಾಗಿ ಅವರ ಗಮ್ಯಸ್ಥಾನಕ್ಕೆ ಕರೆದೊಯ್ಯಲಾಗಿದೆ ಎಂದು ರಾಂಬನ್ ಪೊಲೀಸರು ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.


ಎಲ್ಲರೂ ಸುರಕ್ಷಿತರಾಗಿದ್ದಾರೆ. ಸಣ್ಣ ಅಪಘಾತವಾಗಿದ್ದು, ಎಲ್ಲವೂ ನಿಯಂತ್ರಣದಲ್ಲಿದೆ ಎಂದು ಎಡಿಜಿ ಮುಖೇಶ್ ಸಿಂಗ್ ಹೇಳಿದ್ದಾರೆ. ಘಟನೆಯ ವಿಡಿಯೋದಲ್ಲಿ ಭದ್ರತಾ ಸಿಬ್ಬಂದಿ ಸಚಿವರ ಕಪ್ಪು ಸ್ಕಾರ್ಪಿಯೊದ ಬಾಗಿಲು ತೆರೆಯಲು ಧಾವಿಸಿ ಜನರನ್ನು ಹೊರಗೆ ಕರೆತರುವುದನ್ನು ಕಾಣುತ್ತದೆ.

ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬ್ಬಂದಿ ಅಲ್ಲಿ ಸುತ್ತುವರಿದಿದ್ದು ಸಚಿವರು ವಾಹನದಿಂದ ಹೊರಬರುವುದನ್ನು ಚಿತ್ರಗಳು ತೋರಿಸುತ್ತವೆ.

ಇದನ್ನೂ ಓದಿ: ರಾಹುಲ್​​ಗೆ ಮತ್ತೊಂದು ಸಂಕಷ್ಟ; ತನ್ನ ಹೆಸರನ್ನು ಅದಾನಿ ಜತೆ ತಳಕು ಹಾಕಿದ್ದಕ್ಕೆ ನ್ಯಾಯಾಲಯದ ಮೆಟ್ಟಿಲೇರಲು ಹಿಮಂತ ಬಿಸ್ವ ಶರ್ಮಾ ನಿರ್ಧಾರ

ಇಂದು ಬೆಳಗ್ಗೆ ಕಾನೂನು ಸೇವೆಗಳ ಶಿಬಿರದಲ್ಲಿ ಪಾಲ್ಗೊಳ್ಳಲು ಜಮ್ಮುವಿನಿಂದ ಉಧಮ್‌ಪುರಕ್ಕೆ ಪ್ರಯಾಣಿಸುತ್ತಿದ್ದಾಗ ಸಚಿವರು ಪ್ರಯಾಣದುದ್ದಕ್ಕೂ ಸುಂದರವಾದ ರಸ್ತೆ ಪಯಣವನ್ನು ಆನಂದಿಸಬಹುದು ಎಂದು ಟ್ವೀಟ್ ಮಾಡಿದ್ದಾರೆ.

Published On - 8:30 pm, Sat, 8 April 23