AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Violence: ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಬಿಟ್ಟು ತೆರಳಿದ ಅಮಿತ್ ಶಾ, ಚುನಾವಣೆಗೂ ಮುನ್ನ ಮತ್ತೆ ರಾಜ್ಯಕ್ಕೆ ಬರುವುದು ಅನುಮಾನ

ಮಣಿಪುರ(Manipur)ದಲ್ಲಿ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ(Amit Shah) ಕರ್ನಾಟಕದಲ್ಲಿ ನಡೆಸುತ್ತಿದ್ದ ಚುನಾವಣಾ ಪ್ರಚಾರ ಸಭೆಗಳನ್ನು ರದ್ದುಪಡಿಸಿ ಕೂಡಲೇ ದೆಹಲಿಗೆ ತೆರಳಿದ್ದಾರೆ.

Manipur Violence: ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಬಿಟ್ಟು ತೆರಳಿದ ಅಮಿತ್ ಶಾ, ಚುನಾವಣೆಗೂ ಮುನ್ನ ಮತ್ತೆ ರಾಜ್ಯಕ್ಕೆ ಬರುವುದು ಅನುಮಾನ
ಅಮಿತ್ ಶಾ
ನಯನಾ ರಾಜೀವ್
|

Updated on: May 05, 2023 | 10:41 AM

Share

ಮಣಿಪುರ(Manipur)ದಲ್ಲಿ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ(Amit Shah) ಕರ್ನಾಟಕದಲ್ಲಿ ನಡೆಸುತ್ತಿದ್ದ ಚುನಾವಣಾ ಪ್ರಚಾರ ಸಭೆಗಳನ್ನು ರದ್ದುಪಡಿಸಿ ಕೂಡಲೇ ದೆಹಲಿಗೆ ತೆರಳಿದ್ದಾರೆ. ಚುನಾವಣೆಗೂ ಮುನ್ನ ಮತ್ತೆ ಕರ್ನಾಟಕಕ್ಕೆ ಬರುವುದು ಅನುಮಾನ ಎನ್ನಲಾಗಿದೆ. ಅಮಿತ್ ಶಾ ಇಂದು ಕಲಬುರಗಿ ಹಾಗೂ ರಾಯಚೂರಿನಲ್ಲಿ ಪ್ರಚಾರ ನಡೆಸಬೇಕಿತ್ತು, ಏಪ್ರಿಲ್ 25ರಿಂದ ರಾಜ್ಯದಲ್ಲಿ ವ್ಯಾಪಕ ಪ್ರಚಾರ ನಡೆಸುತ್ತಿದ್ದ ಅಮಿತ್ ಶಾ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲಿದ್ದೇವೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದರು.

ಕರ್ನಾಟಕ ವಿಧಾನಸಭೆ ಚುನಾವಣೆ ಮೇ 10 ರಂದು ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ. ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ಮಣಿಪುರದಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಹಿಂಸಾಚಾರ ಹತ್ತಿಕ್ಕಲು ಸೇನೆ ಮತ್ತು ಅಸ್ಸಾಂ ರೈಫಲ್ಸ್‌ಗೆ ಬುಲಾವ್ ನೀಡಲಾಗಿದೆ.

ಮತ್ತಷ್ಟು ಓದಿ: Manipur violence: ಹಿಂಸಾಚಾರದಲ್ಲಿ ಹೊತ್ತಿ ಉರಿದ ಮಣಿಪುರ, ಪರಿಸ್ಥಿತಿ ಹದಗೆಟ್ಟರೆ ಕಂಡಲ್ಲಿ ಗುಂಡು ಹಾರಿಸಲು ಆದೇಶ

ಇಂಫಾಲ್, ಚುರಾಚಂದ್‌ಪುರ ಹಾಗೂ ಕಾಂಗ್‌ಪೋಕ್ಪಿಯಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ನಿನ್ನೆ ರಾತ್ರಿ ಮಣಿಪುರದ ಎಂಟು ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಮಣಿಪುರ ಸರಕಾರ ರಾಜ್ಯದಲ್ಲಿ 5 ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.

ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಸೇನೆ ಹಾಗೂ ಅಸ್ಸಾಂ ರೈಫಲ್ಸ್‌ನಿಂದ ಇಂದು ಧ್ವಜ ಮೆರವಣಿಗೆ ನಡೆಸಲಾಯಿತು. ಹಿಂಸಾಚಾರದ ನಂತರ ರಾಜ್ಯದ ವಿವಿಧ ಹಿಂಸಾಪೀಡಿತ ಪ್ರದೇಶಗಳಲ್ಲಿನ ಸುಮಾರು 4,000 ಜನರಿಗೆ ಸೇನಾ ಶಿಬಿರಗಳು ಹಾಗೂ ಸರಕಾರಿ ಕಚೇರಿ ಆವರಣದಲ್ಲಿ ಆಶ್ರಯ ನೀಡಲಾಯಿತು.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು