AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitin Gadkari Death Threat: ಕೇಂದ್ರ ಸಚಿವ, ಬಿಜೆಪಿಯ ಹಿರಿಯ ನಾಯಕ ನಿತಿನ್ ಗಡ್ಕರಿಗೆ ಜೀವ ಬೆದರಿಕೆ

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಿವಾಸಕ್ಕೆ ಬಂದಿರುವ ಜೀವ ಬೆದರಿಕೆ ಕರೆಗೆ ಸಂಬಂಧಿಸಿದ ಮಾಹಿತಿಯನ್ನು ಸಚಿವರ ಸಿಬ್ಬಂದಿ ಪೊಲೀಸರಿಗೆ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ವಿವರಗಳನ್ನು ಪರಿಶೀಲಿಸಲಾಗುತ್ತಿದ್ದು ತನಿಖೆ ನಡೆಯುತ್ತಿದೆ.

Nitin Gadkari Death Threat: ಕೇಂದ್ರ ಸಚಿವ, ಬಿಜೆಪಿಯ ಹಿರಿಯ ನಾಯಕ ನಿತಿನ್ ಗಡ್ಕರಿಗೆ ಜೀವ ಬೆದರಿಕೆ
ನಿತಿನ್ ಗಡ್ಕರಿ
ರಶ್ಮಿ ಕಲ್ಲಕಟ್ಟ
|

Updated on:May 16, 2023 | 5:31 PM

Share

ಕೇಂದ್ರ ಸಚಿವ ಮತ್ತು ಬಿಜೆಪಿಯ (BJP) ಹಿರಿಯ ನಾಯಕ ನಿತಿನ್ ಗಡ್ಕರಿಯವರ (Nitin Gadkari) ದೆಹಲಿ ನಿವಾಸಕ್ಕೆ ದೂರವಾಣಿ ಕರೆ ಮೂಲಕ ಜೀವ ಬೆದರಿಕೆ (Death Threat) ಬಂದಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ತನಿಖೆ ನಡೆಯುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ನಿನ್ನೆ ಸಂಜೆ ದೆಹಲಿಯ ನಿವಾಸದಲ್ಲಿ ದೂರವಾಣಿ ಕರೆ ಮೂಲಕ ಕೊಲೆ ಬೆದರಿಕೆ ಬಂದಿತ್ತು. ಸಚಿವರ ಕಚೇರಿಯು ದೆಹಲಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ  ಎಂದು ಮೂಲಗಳು ತಿಳಿಸಿವೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಿವಾಸಕ್ಕೆ ಬಂದಿರುವ ಜೀವ ಬೆದರಿಕೆ ಕರೆಗೆ ಸಂಬಂಧಿಸಿದ ಮಾಹಿತಿಯನ್ನು ಸಚಿವರ ಸಿಬ್ಬಂದಿ ಪೊಲೀಸರಿಗೆ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ವಿವರಗಳನ್ನು ಪರಿಶೀಲಿಸಲಾಗುತ್ತಿದ್ದು ತನಿಖೆ ನಡೆಯುತ್ತಿದೆ.

ಗಡ್ಕರಿ ಅವರಿಗೆ ಈ ಹಿಂದೆಯೂ ಬಂದಿತ್ತು ಬೆದರಿಕೆ ಕರೆ

ಜನವರಿ 14ರಂದು ನಾಗ್ಪುರದಲ್ಲಿರುವ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಜಯೇಶ್ ಪೂಜಾರಿ ಅಲಿಯಾಸ್ ಕಾಂತ ಎಂಬ ವ್ಯಕ್ತಿ ಬೆದರಿಕೆ ಕರೆ ಮಾಡಿದ್ದ. 100 ಕೋಟಿ ನೀಡುವಂತೆ ಬೇಡಿಕೆ ಇಟ್ಟಿದ್ದ ಆತ, ತಾನು ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡಿದ್ದ. ಜಯೇಶ್ ಪೂಜಾರಿ ಕೊಲೆ ಅಪರಾಧಿಯಾಗಿದ್ದು, ಕರ್ನಾಟಕದ ಬೆಳಗಾವಿಯಿಂದ ಈತನನ್ನು ಬಂಧಿಸಲಾಗಿದೆ. ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದಾದ ನಂತರ ಮಾರ್ಚ್ 21 ರಂದು ಪೂಜಾರಿ ಮತ್ತೆ ಕರೆ ಮಾಡಿ ನಾಗ್ಪುರದ ಬಿಜೆಪಿ ಲೋಕಸಭಾ ಸದಸ್ಯರಿಗೆ 10 ಕೋಟಿ ರೂಪಾಯಿ ಪಾವತಿಸದಿದ್ದರೆ ಹಾನಿ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಇದನ್ನೂ ಓದಿ:ನಿತೀಶ್ ಕುಮಾರ್ ಜೊತೆಗಿನ ಮೈತ್ರಿ ಮುರಿಯಲ್ಲ, ಆ ಪರಿಸ್ಥಿತಿ ಎಂದಿಗೂ ಉದ್ಭವಿಸುವುದಿಲ್ಲ: ಜಿತನ್ ರಾಮ್ ಮಾಂಝಿ

ಕೇಂದ್ರ ಗೃಹ ಸಚಿವಾಲಯದಿಂದ ಗ್ರೀನ್ ಸಿಗ್ನಲ್ ಪಡೆದ ನಂತರ, ಎನ್‌ಐಎ ಅಧಿಕಾರಿಗಳು ಭಯೋತ್ಪಾದಕ ಕೋನದಲ್ಲಿ ತನಿಖೆಯನ್ನು ಪ್ರಾರಂಭಿಸಿದರು, ಪೂಜಾರಿ ಲಷ್ಕರ್-ಎ-ತೊಯ್ಬಾದ ದಕ್ಷಿಣ ವಿಭಾಗದ ಮುಖ್ಯಸ್ಥ ಕ್ಯಾಪ್ಟನ್ ನಸೀರ್ ಸೇರಿದಂತೆ ಭಯೋತ್ಪಾದಕರೊಂದಿಗೆ ಸಂಬಂಧ ಹೊಂದಿದ್ದರು ಎಂದು ಅಧಿಕಾರಿಯೊಬ್ಬರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:17 pm, Tue, 16 May 23

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ