ಸಂಸತ್ ಭವನ ಉದ್ಘಾಟನೆ ಬಹಿಷ್ಕರಿಸುವ ವಿಪಕ್ಷಗಳ ನಿಲುವು ನಮ್ಮ ರಾಷ್ಟ್ರದ ಪ್ರಜಾಪ್ರಭುತ್ವದ ನೀತಿಗೆ ಅವಮಾನ: ಅನುರಾಗ್ ಠಾಕೂರ್
ಭಾನುವಾರ ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಕಾಂಗ್ರೆಸ್, ಎಎಪಿ, ಟಿಎಂಸಿ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ಹಲವು ವಿರೋಧ ಪಕ್ಷಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗೌರವ ಸಲ್ಲಿಸಬೇಕು ಎಂದು ಒತ್ತಾಯಿಸಿ ಸಮಾರಂಭವನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ.
ಹೊಸ ಸಂಸತ್ ಭವನದ (New Parliament building)ಉದ್ಘಾಟನೆಯನ್ನು ಬಹಿಷ್ಕರಿಸುವ ನಿರ್ಧಾರಕ್ಕಾಗಿ ಪ್ರತಿಪಕ್ಷಗಳನ್ನು ಕೇಂದ್ರ ಸಚಿವ ಅನುರಾಗ್ ಠಾಕೂರ್ (Anurag Thakur) ಟೀಕಿಸಿದ್ದಾರೆ. ಶನಿವಾರ ದೂರದರ್ಶನ ಆಯೋಜಿಸಿದ್ದ ಒಂದು ದಿನದ ರಾಷ್ಟ್ರೀಯ ಸಮಾವೇಶದ ಉದ್ಘಾಟನಾ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಮಾಹಿತಿ ಮತ್ತು ಪ್ರಸಾರ ಸಚಿವರು, ವಿರೋಧ ಪಕ್ಷಗಳು ಈ ಹಿಂದೆ ಸದನಗಳನ್ನು ಅಡ್ಡಿಪಡಿಸಲು ಸಕಾರಣಗಳನ್ನು ಕಂಡುಕೊಂಡವು. ಈಗ ಅವರು ಉದ್ಘಾಟನೆಯನ್ನು ಬಹಿಷ್ಕರಿಸುತ್ತಿದ್ದಾರೆ ಎಂದು ಹೇಳಿದರು. ಕೆಲವರನ್ನು ಸಂಸತ್ಗೆ ಬರದಂತೆ ತಡೆ ಹಿಡಿದಿದ್ದು ಬೇರೆ ವಿಚಾರ. ಈ ಹಿಂದೆ ಅವರು ಸಂಸತ್ತಿನ ಕಲಾಪಕ್ಕೆ ಅವಕಾಶ ನೀಡದಿರುವುದಕ್ಕೆ ಕಾರಣಗಳನ್ನು ಹುಡುಕುತ್ತಿದ್ದರು. ಈಗ, ಅವರು ಬಹಿಷ್ಕಾರದ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಅವಮಾನದ ಸಂಗತಿ ಎಂದು ಮೋದಿ (PM Modi) ಸರ್ಕಾರದ ಒಂಬತ್ತನೇ ವಾರ್ಷಿಕೋತ್ಸವದ ಸ್ಮರಣಾರ್ಥ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಠಾಕೂರ್ ಹೇಳಿದರು.
ಭಾರತವು ಪ್ರಜಾಪ್ರಭುತ್ವದ ತಾಯಿ ಎಂದು ಹೆಮ್ಮೆಪಡುತ್ತದೆ. ಪ್ರಧಾನಿ ಮೋದಿ ಅವರು ರಾಷ್ಟ್ರಕ್ಕೆ ಹೊಸ ಸಂಸತ್ತಿನ ಕಟ್ಟಡವನ್ನು ನೀಡಿದ್ದಾರೆ, ಇದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದೆ ಎಂದು ಠಾಕೂರ್ ಹೇಳಿದರು.
#WATCH | Union Minister Anurag Thakur takes jibe on Congress leader Rahul Gandhi, says, “Some people have been banned from coming to the Parliament. Once they used to find excuses for not running the house, today they are boycotting (inauguration ceremony of new Parliament… pic.twitter.com/ZSehqVfQUM
— ANI (@ANI) May 27, 2023
ಭಾನುವಾರ ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಕಾಂಗ್ರೆಸ್, ಎಎಪಿ, ಟಿಎಂಸಿ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ಹಲವು ವಿರೋಧ ಪಕ್ಷಗಳು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಗೌರವ ಸಲ್ಲಿಸಬೇಕು ಎಂದು ಒತ್ತಾಯಿಸಿ ಸಮಾರಂಭವನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ.
ಇದನ್ನೂ ಓದಿ: ದೇವರು ನಮ್ಮನ್ನು ಪರೀಕ್ಷಿಸುತ್ತಿದ್ದಾರೆ; ಜಡಿ ಮಳೆ,ಸುಡು ಬಿಸಿಲು ಏನೇ ಬರಲಿ ನಾವು ಹಿಂದೆ ಸರಿಯುವುದಿಲ್ಲ: ಬಜರಂಗ್ ಪುನಿಯಾ
ಆಡಳಿತಾರೂಢ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು ಪ್ರಮುಖ ಕಾರ್ಯಕ್ರಮವನ್ನು ಬಹಿಷ್ಕರಿಸುವ ಪ್ರತಿಪಕ್ಷದ ನಿರ್ಧಾರವನ್ನು ಟೀಕಿಸಿವೆ. ವಿಪಕ್ಷಗಳು ಕೈಗೊಂಡಿರುವ ಈ ನಿಲುವು ನಮ್ಮ ಮಹಾನ್ ರಾಷ್ಟ್ರದ ಪ್ರಜಾಪ್ರಭುತ್ವದ ನೀತಿ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ಘೋರ ಅವಮಾನ ಎಂದು ಟೀಕಿಸಿವೆ. ಹೇಳಿಕೆಯೊಂದರಲ್ಲಿ, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು (ಎನ್‌ಡಿಎ) ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿದೆ. ಭಾರತದ ಜನರುನಮ್ಮ ಪ್ರಜಾಪ್ರಭುತ್ವ ಮತ್ತು ಅವರ ಚುನಾಯಿತ ಪ್ರತಿನಿಧಿಗಳಿಗೆ ಮಾಡಿದ ಘೋರ ಅವಮಾನ ವನ್ನು ಮರೆಯುವುದಿಲ್ಲ ಎಂದು ಬಿಜೆಪಿ ಹೇಳಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ