ಪ್ರತಿ ಪೈಸೆಯೂ ಬಡವರ ಅಭಿವೃದ್ಧಿಗಾಗಿ ಎಂಬ ನೀತಿಯೊಂದಿಗೆ ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸುತ್ತದೆ: ಅಶ್ವಿನಿ ವೈಷ್ಣವ್

|

Updated on: May 27, 2023 | 6:35 PM

ಇಂದು ಭಾರತವು ಆಯುಷ್ಮಾನ್ ಭಾರತ್ ಅಡಿಯಲ್ಲಿ ವಿಶ್ವದ ಅತಿದೊಡ್ಡ ಆರೋಗ್ಯ ವಿಮಾ ಕಾರ್ಯಕ್ರಮವನ್ನು ನಡೆಸುತ್ತಿದೆ. ಇದು ಅಗತ್ಯವಿರುವವರಿಗೆ ಐದು ಲಕ್ಷ ರೂಪಾಯಿಗಳವರೆಗೆ ಉಚಿತ ವೈದ್ಯಕೀಯ ಸೌಲಭ್ಯವನ್ನು ಒದಗಿಸಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಪ್ರತಿ ಪೈಸೆಯೂ ಬಡವರ ಅಭಿವೃದ್ಧಿಗಾಗಿ ಎಂಬ ನೀತಿಯೊಂದಿಗೆ ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸುತ್ತದೆ: ಅಶ್ವಿನಿ ವೈಷ್ಣವ್
ಅಶ್ವಿನಿ ವೈಷ್ಣವ್
Follow us on

ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ 9 ಸಾಲ್ – ಸೇವಾ, ಸುಶಾಸನ್, ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿದರು.  ಕಾರ್ಯಕ್ರಮದಲ್ಲಿ 2014 ರ ಹಿಂದಿನ ಸರ್ಕಾರಗಳ ಕಾರ್ಯಕ್ಷಮತೆಯನ್ನು ಪ್ರಸ್ತುತ ಪಡಿಸಿದ ಅಶ್ವಿನಿ ವೈಷ್ಣವ್, ಹಿಂದಿನ ಆಡಳಿತದ ಪ್ರಯತ್ನಗಳು ಹಗರಣಗಳಿಂದ ಕೂಡಿತ್ತು. ಪ್ರಸ್ತುತ ಸರ್ಕಾರವು ‘ಪೈ ಪೈ ಸೆ ಗರೀಬ್ ಕಿ ಭಲಾಯಿ (ಪ್ರತಿ ಪೈಸೆಯೂ ಬಡವರ ಅಭಿವೃದ್ಧಿಗಾಗಿ) ನೀತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ. ಬಡವರು ಮತ್ತು ನಿರ್ಗತಿಕರಿಗಾಗಿ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ ರೀತಿಯಲ್ಲಿ ಇದು ಪ್ರತಿಫಲಿಸುತ್ತದೆ ಎಂದು ಹೇಳಿದ್ದಾರೆ.

ಸ್ವಂತ ಮನೆ ಹೊಂದುವುದು ಬಡವನ ಜೀವನದಲ್ಲಿ ಪರಿವರ್ತನೆ ತರುವ ಅಂಶವಾಗಿದೆ. ಆ ನಿಟ್ಟಿನಲ್ಲಿ ಇಂದು ದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3.5 ಕೋಟಿ ಮನೆಗಳನ್ನು ನಿರ್ಮಿಸಲಾಗಿದ್ದು, ಬಡವರ ಜೀವನದಲ್ಲಿ ಗುಣಾತ್ಮಕ ಬದಲಾವಣೆ ತರಲಾಗಿದೆ.

ಪ್ರತಿ ಮನೆಗೆ ಪೈಪ್‌ಲೈನ್‌ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ಕಲ್ಪನೆಯನ್ನು ಕಷ್ಟದ್ದು ಎಂದು ಹೇಳಲಾಗಿತ್ತು. ಆದರೆ, ಪ್ರಧಾನಿಯವರು ಇದನ್ನು ಸವಾಲಾಗಿ ಸ್ವೀಕರಿಸಿದರು. ಇಂದು 12 ಕೋಟಿ ಜನರು ನೀರಿನ ಸಂಪರ್ಕವನ್ನು ಹೊಂದಿದ್ದಾರೆ. ಅದೇ ಸಮಯದಲ್ಲಿ, ಸರ್ಕಾರವು ಸಾಂಪ್ರದಾಯಿಕ ಒಲೆ ಕೊನೆಗೊಳಿಸಲು ಶ್ರಮಿಸುತ್ತಿದ್ದು, 9.6 ಕೋಟಿ ಕುಟುಂಬಗಳಿಗೆ ಗ್ಯಾಸ್ ಸಿಲಿಂಡರ್ ಗಳವನ್ನು ಒದಗಿಸಿದೆ ಎಂದು ಅವರು ಹೇಳಿದರು.

ಕೋವಿಡ್- 19 ಸಾಂಕ್ರಾಮಿಕದ ವಿರುದ್ಧ ಹೋರಾಡಲು ಜಗತ್ತು ಹೆಣಗಾಡುತ್ತಿರುವಾಗ, ಸರ್ಕಾರವು 80 ಕೋಟಿ ಜನರಿಗೆ ಉಚಿತ ಪಡಿತರವನ್ನು ತರಲು ಬೃಹತ್ ಲಾಜಿಸ್ಟಿಕ್ ಸವಾಲುಗಳನ್ನು ಮೆಟ್ಟಿ ನಿಂತಿದೆ. ಸ್ವಾತಂತ್ರ್ಯ ದಿನಾಚರಣೆಯ ಭಾಷಣಗಳಲ್ಲಿ ಅಂತರ್ಗತ ಬೆಳವಣಿಗೆಯ ಸೂಚಕಗಳಾದ ಶೌಚಾಲಯಗಳಂತಹ ಮೂಲಭೂತ ಮಾನವ ಅಗತ್ಯಗಳ ಬಗ್ಗೆ ಯಾವುದೇ ಸರ್ಕಾರ ಮಾತನಾಡಲಿಲ್ಲ. ಆದರೆ ಪ್ರಧಾನಿ ಮೋದಿಯವರು ಕೆಂಪು ಕೋಟೆಯಿಂದ ಮಾಡಿದ ಭಾಷಣದಲ್ಲಿ ಪ್ರತಿ ಮನೆಯಲ್ಲೂ ಶೌಚಾಲಯ ನಿರ್ಮಾಣದ ಬಗ್ಗೆ ಮಾತನಾಡಿದರು. ಇದು ಇಂದು 11.72 ಕೋಟಿ ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಮಹಿಳಾ ಸುರಕ್ಷತೆ ಮತ್ತು ನೈರ್ಮಲ್ಯ ಕ್ಷೇತ್ರದಲ್ಲಿ ಕ್ರಾಂತಿಯನ್ನು ಉಂಟುಮಾಡಿದೆ.

ಇಂದು ಭಾರತವು ಆಯುಷ್ಮಾನ್ ಭಾರತ್ ಅಡಿಯಲ್ಲಿ ವಿಶ್ವದ ಅತಿದೊಡ್ಡ ಆರೋಗ್ಯ ವಿಮಾ ಕಾರ್ಯಕ್ರಮವನ್ನು ನಡೆಸುತ್ತಿದೆ. ಇದು ಅಗತ್ಯವಿರುವವರಿಗೆ ಐದು ಲಕ್ಷ ರೂಪಾಯಿಗಳವರೆಗೆ ಉಚಿತ ವೈದ್ಯಕೀಯ ಸೌಲಭ್ಯವನ್ನು ಒದಗಿಸಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಸಾಮಾಜಿಕ ನ್ಯಾಯವನ್ನು ತುಷ್ಟೀಕರಣದಿಂದ ದೂರವಿಟ್ಟು ಸಬಲೀಕರಣದ ಕಡೆಗೆ ಕೊಂಡೊಯ್ಯುವ ಹೊಸ ವ್ಯಾಖ್ಯಾನವನ್ನು ರಚಿಸಿದ ಪ್ರಧಾನಿ ಮೋದಿಗೆ ಸಲ್ಲುತ್ತದೆ ಎಂದ ಸಚಿವರು 2014 ರಿಂದ ದೇಶೀಯ ಮೂಲಸೌಕರ್ಯವು ಅಭೂತಪೂರ್ವ ಬದಲಾವಣೆಯನ್ನು ಕಂಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿಸಂಸತ್ ಭವನ ಉದ್ಘಾಟನೆ ಬಹಿಷ್ಕರಿಸುವ ವಿಪಕ್ಷಗಳ ನಿಲುವು ನಮ್ಮ ರಾಷ್ಟ್ರದ ಪ್ರಜಾಪ್ರಭುತ್ವದ ನೀತಿಗೆ ಅವಮಾನ: ಅನುರಾಗ್ ಠಾಕೂರ್

9 ವರ್ಷಗಳಲ್ಲಿ 74 ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗಿದೆ.ಸ್ವಾತಂತ್ರ್ಯದ ನಂತರ 91 ಸಾವಿರ ಕಿಲೋಮೀಟರ್ ರಸ್ತೆಯನ್ನು ರಚಿಸಲಾಗಿದೆ, 2014 ರಿಂದ ಸುಮಾರು 54 ಸಾವಿರ ಕಿಲೋಮೀಟರ್ ರಸ್ತೆ ನಿರ್ಮಿಸಲಾಗಿದೆ. 2014 ರವರೆಗೆ ಜಲಮಾರ್ಗಗಳೇ ಇಲ್ಲದ್ದು ಇಂದು 111 ಜಲಮಾರ್ಗಗಳನ್ನು ಹೊಂದಿವೆ. ಭಾರತದ ರೈಲು ನಿಲ್ದಾಣಗಳು ವಿಮಾನ ನಿಲ್ದಾಣಗಳಂತಹ ವಿಶ್ವ ದರ್ಜೆಯ ಸೌಲಭ್ಯಗಳನ್ನು ಹೊಂದಿವೆ.
ಭಾರತ ದೀರ್ಘಕಾಲದಿಂದ ವಿಶ್ವ ಆರ್ಥಿಕ ಶ್ರೇಯಾಂಕದಲ್ಲಿ ಹಿಂದುಳಿದಿತ್ತು, ಆದರೆ ಇಂದು ಭಾರತವು 5 ನೇ ಅತಿದೊಡ್ಡ ಆರ್ಥಿಕತೆಯಾಗಿ ಮುಂಚೂಣಿಯಲ್ಲಿದೆ. ಭಾರತ ಇನ್ನೆರಡು ವರ್ಷಗಳಲ್ಲಿ 4ನೇ ಅತಿದೊಡ್ಡ ಆರ್ಥಿಕತೆ ಮತ್ತು ಆರು ವರ್ಷಗಳಲ್ಲಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಹಾದಿಯಲ್ಲಿದೆ ಎಂದು ಅವರು ಹೇಳಿದರು.

ಪ್ರಸ್ತುತ ಕಾರ್ಯಕ್ರಮದಲ್ಲಿ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್, ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್, ಮಾಹಿತಿ ಮತ್ತು ಪ್ರಸಾರ ಖಾತೆ ಕಾರ್ಯದರ್ಶಿ ಶ್ರೀ ಅಪೂರ್ವ ಚಂದ್ರ ಮತ್ತು ಸಿಇಒ, ಪ್ರಸಾರ ಭಾರತಿ, ಶ್ರೀ ಗೌರವ್ ದ್ವಿವೇದಿ ಉಪಸ್ಥಿತರಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ