AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್ ಸಿಇಒ ಸುಂದರ್ ಪಿಚೈ ಭೇಟಿಯಾದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಕೇಂದ್ರ ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮಂಗಳವಾರ ಗೂಗಲ್ ಸಿಇಒ ಸುಂದರ್ ಪಿಚೈ ಅವರನ್ನು ಗೂಗಲ್ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ಗೂಗಲ್ ಸಿಇಒ ಸುಂದರ್ ಪಿಚೈ ಭೇಟಿಯಾದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಸಚಿವ ಅಶ್ವಿನಿ ವೈಷ್ಣವ್ ಮಂಗಳವಾರ ಗೂಗಲ್ ಸಿಇಒ ಸುಂದರ್ ಪಿಚೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರುImage Credit source: Twitter
ಗಣಪತಿ ಶರ್ಮಾ
|

Updated on: May 09, 2023 | 10:30 PM

Share

ನವದೆಹಲಿ: ಕೇಂದ್ರ ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw)  ಗೂಗಲ್ ಸಿಇಒ ಸುಂದರ್ ಪಿಚೈ (Sundar Pichai) ಅವರನ್ನು ಗೂಗಲ್ ಪ್ರಧಾನ ಕಚೇರಿಯಲ್ಲಿ ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದರು. ನಂತರ ಟ್ವೀಟ್​ ಮಾಡಿರುವ ಅಶ್ವಿನಿ ವೈಷ್ಣವ್ ‘ಇಂಡಿಯಾ ಸ್ಟ್ಯಾಕ್ ಮತ್ತು ಮೇಕ್ ಇನ್ ಇಂಡಿಯಾ ಕಾರ್ಯಕ್ರಮದ ಬಗ್ಗೆ ಉತ್ತಮ ಚರ್ಚೆ ನಡೆಯಿತು’ ಎಂದು ಉಲ್ಲೇಖಿಸಿದ್ದಾರೆ. ಇದು ಇಬ್ಬರ ನಡುವಣ ಎರಡನೇ ಭೇಟಿಯಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಪಿಚೈ ಅವರು ‘ಗೂಗಲ್ ಫಾರ್ ಇಂಡಿಯಾ 2022’ ಕಾರ್ಯಕ್ರಮಕ್ಕಾಗಿ ಭಾರತಕ್ಕೆ ಆಗಮಿಸಿದ್ದಾಗ ವೈಷ್ಣವ್ ಅವರನ್ನು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಸುಂದರ್ ಪಿಚೈ ಅವರನ್ನು ಭೇಟಿಯಾಗಿ ನಾವೀನ್ಯತೆ, ತಂತ್ರಜ್ಞಾನ ಹಾಗೂ ಇನ್ನಷ್ಟು ವಿಚಾರಗಳನ್ನು ಚರ್ಚಿಸಿದ್ದು ಸಂತೋಷಗೊಂಡಿದ್ದೇನೆ. ಮಾನವ ಸಮೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿಗಾಗಿ ತಂತ್ರಜ್ಞಾನವನ್ನು ಬಳಸಿಕೊಂಡು ಜಗತ್ತು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಮೋದಿ ಹೇಳಿದ್ದರು.

ಇದನ್ನೂ ಓದಿ: G7 Digital, Tech Ministers Meeting: ಭಾರತವು ತಂತ್ರಜ್ಞಾನದ ಶಕ್ತಿ ಕೇಂದ್ರವಾಗಿ ಹೊರಹೊಮ್ಮುತ್ತಿದೆ; ಅಶ್ವಿನಿ ವೈಷ್ಣವ್

‘ಪ್ರಧಾನಿ ನರೇಂದ್ರ ಮೋದಿಯವರೇ, ಭೇಟಿಗೆ ಧನ್ಯವಾದಗಳು. ನಿಮ್ಮ ನಾಯಕತ್ವದಲ್ಲಿ ತಾಂತ್ರಿಕ ಬದಲಾವಣೆಯ ಕ್ಷಿಪ್ರ ಗತಿಯನ್ನು ಎದುರು ನೋಡುತ್ತಿದ್ದೇನೆ. ನಮ್ಮ ಬಲವಾದ ಸಹಭಾಗಿತ್ವವನ್ನು ಮುಂದುವರಿಸಲು ಮತ್ತು ಎಲ್ಲರಿಗಾಗಿ ಕೆಲಸ ಮಾಡುವ ಮುಕ್ತ, ಸಂಪರ್ಕಿತ ಇಂಟರ್ನೆಟ್ ಅನ್ನು ಮುನ್ನಡೆಸಲು ಭಾರತದ ಜಿ20 ಅಧ್ಯಕ್ಷತೆಯನ್ನು ಬೆಂಬಲಿಸಲು ಎದುರು ನೋಡುತ್ತೇವೆ’ ಎಂದು ಮೋದಿ ಭೇಟಿ ಬಳಿಕ ಪಿಚೈ ಟ್ವೀಟ್ ಮಾಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್