ಗೂಗಲ್ ಸಿಇಒ ಸುಂದರ್ ಪಿಚೈ ಭೇಟಿಯಾದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಕೇಂದ್ರ ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಮಂಗಳವಾರ ಗೂಗಲ್ ಸಿಇಒ ಸುಂದರ್ ಪಿಚೈ ಅವರನ್ನು ಗೂಗಲ್ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ಗೂಗಲ್ ಸಿಇಒ ಸುಂದರ್ ಪಿಚೈ ಭೇಟಿಯಾದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಸಚಿವ ಅಶ್ವಿನಿ ವೈಷ್ಣವ್ ಮಂಗಳವಾರ ಗೂಗಲ್ ಸಿಇಒ ಸುಂದರ್ ಪಿಚೈ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು
Image Credit source: Twitter

Updated on: May 09, 2023 | 10:30 PM

ನವದೆಹಲಿ: ಕೇಂದ್ರ ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) 
ಗೂಗಲ್ ಸಿಇಒ ಸುಂದರ್ ಪಿಚೈ (Sundar Pichai) ಅವರನ್ನು ಗೂಗಲ್ ಪ್ರಧಾನ ಕಚೇರಿಯಲ್ಲಿ ಮಂಗಳವಾರ ಭೇಟಿಯಾಗಿ ಮಾತುಕತೆ ನಡೆಸಿದರು. ನಂತರ ಟ್ವೀಟ್​ ಮಾಡಿರುವ ಅಶ್ವಿನಿ ವೈಷ್ಣವ್ ‘ಇಂಡಿಯಾ ಸ್ಟ್ಯಾಕ್ ಮತ್ತು ಮೇಕ್ ಇನ್ ಇಂಡಿಯಾ ಕಾರ್ಯಕ್ರಮದ ಬಗ್ಗೆ ಉತ್ತಮ ಚರ್ಚೆ ನಡೆಯಿತು’ ಎಂದು ಉಲ್ಲೇಖಿಸಿದ್ದಾರೆ. ಇದು ಇಬ್ಬರ ನಡುವಣ ಎರಡನೇ ಭೇಟಿಯಾಗಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಪಿಚೈ ಅವರು ‘ಗೂಗಲ್ ಫಾರ್ ಇಂಡಿಯಾ 2022’ ಕಾರ್ಯಕ್ರಮಕ್ಕಾಗಿ ಭಾರತಕ್ಕೆ ಆಗಮಿಸಿದ್ದಾಗ ವೈಷ್ಣವ್ ಅವರನ್ನು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

ಸುಂದರ್ ಪಿಚೈ ಅವರನ್ನು ಭೇಟಿಯಾಗಿ ನಾವೀನ್ಯತೆ, ತಂತ್ರಜ್ಞಾನ ಹಾಗೂ ಇನ್ನಷ್ಟು ವಿಚಾರಗಳನ್ನು ಚರ್ಚಿಸಿದ್ದು ಸಂತೋಷಗೊಂಡಿದ್ದೇನೆ. ಮಾನವ ಸಮೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿಗಾಗಿ ತಂತ್ರಜ್ಞಾನವನ್ನು ಬಳಸಿಕೊಂಡು ಜಗತ್ತು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಮೋದಿ ಹೇಳಿದ್ದರು.

ಇದನ್ನೂ ಓದಿ: G7 Digital, Tech Ministers Meeting: ಭಾರತವು ತಂತ್ರಜ್ಞಾನದ ಶಕ್ತಿ ಕೇಂದ್ರವಾಗಿ ಹೊರಹೊಮ್ಮುತ್ತಿದೆ; ಅಶ್ವಿನಿ ವೈಷ್ಣವ್

‘ಪ್ರಧಾನಿ ನರೇಂದ್ರ ಮೋದಿಯವರೇ, ಭೇಟಿಗೆ ಧನ್ಯವಾದಗಳು. ನಿಮ್ಮ ನಾಯಕತ್ವದಲ್ಲಿ ತಾಂತ್ರಿಕ ಬದಲಾವಣೆಯ ಕ್ಷಿಪ್ರ ಗತಿಯನ್ನು ಎದುರು ನೋಡುತ್ತಿದ್ದೇನೆ. ನಮ್ಮ ಬಲವಾದ ಸಹಭಾಗಿತ್ವವನ್ನು ಮುಂದುವರಿಸಲು ಮತ್ತು ಎಲ್ಲರಿಗಾಗಿ ಕೆಲಸ ಮಾಡುವ ಮುಕ್ತ, ಸಂಪರ್ಕಿತ ಇಂಟರ್ನೆಟ್ ಅನ್ನು ಮುನ್ನಡೆಸಲು ಭಾರತದ ಜಿ20 ಅಧ್ಯಕ್ಷತೆಯನ್ನು ಬೆಂಬಲಿಸಲು ಎದುರು ನೋಡುತ್ತೇವೆ’ ಎಂದು ಮೋದಿ ಭೇಟಿ ಬಳಿಕ ಪಿಚೈ ಟ್ವೀಟ್ ಮಾಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ