AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಕ್ಸೋ ಕೇಸ್​​ನಲ್ಲಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿ ಅರೆಸ್ಟ್​​

ಪೋಕ್ಸೋ ಕೇಸ್​​ ಸಂಬಂಧ ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದರಾಗಿರುವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚವರು, ತನ್ನ ಮಗ ತಪ್ಪು ಮಾಡಿಲ್ಲ ಎಂದು ಹೇಳುತ್ತಿದ್ದಾನೆ. ಹೀಗಾಗಿ ಪ್ರಕರಣ ಸಂಬಂಧ ನ್ಯಾಯ ಸಿಗುವ ವಿಶ್ವಾಸವಿದೆ ಎಂದಿದ್ದಾರೆ. ಮತ್ತೊಂದೆಡೆ ಇದೊಂದು ಹನಿ ಟ್ರ್ಯಾಪ್ ಯತ್ನಎಂದು ಅವರ ಪುತ್ರ ಭಗೀರಥ್ ಸಾಯಿ ಗಂಭೀರ ಆರೋಪ ಮಾಡಿದ್ದಾರೆ.

ಪೋಕ್ಸೋ ಕೇಸ್​​ನಲ್ಲಿ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿ ಅರೆಸ್ಟ್​​
ಪ್ರಾತಿನಿಧಿಕ ಚಿತ್ರ
ಪ್ರಸನ್ನ ಹೆಗಡೆ
| Edited By: |

Updated on:May 24, 2026 | 7:02 PM

Share

ಹೈದರಾಬಾದ್​​, ಮೇ 17: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವರು ಹಾಗೂ ಬಿಜೆಪಿ ಸಂಸದರಾಗಿರುವ ಬಂಡಿ ಸಂಜಯ್ ಕುಮಾರ್ ಪುತ್ರ ಭಗೀರಥ್ ಸಾಯಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ತೆಲಂಗಾಣ ಹೈಕೋರ್ಟ್​​ ನಿರಾಕರಿಸಿದ ಕೆಲವೇ ಗಂಟೆಗಳಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ತಮ್ಮ ಪುತ್ರನನ್ನು ತನಿಖೆಗೆ ಪೊಲೀಸರಿಗೆ ಒಪ್ಪಿಸಿದ್ದಾಗಿ ಬಂಡಿ ಸಂಜಯ್ ಕುಮಾರ್ ತಿಳಿಸಿದ್ದು, 17 ವರ್ಷದ ಬಾಲಕಿ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ಆರೋಪದಡಿ 25 ವರ್ಷದ ಭಗೀರಥ್ ಸಾಯಿ ವಿರುದ್ಧ ಪ್ರಕರಣ ದಾಖಲಾಗಿತ್ತು.

‘ಕಾನೂನಿನ ಮುಂದೆ ಎಲ್ಲರೂ ಸಮಾನರು’

ಈ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡಿರುವ ಬಂಡಿ ಸಂಜಯ್ ಕುಮಾರ್, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ನಂಬಿಕೆ ನನ್ನದು ಎಂದು ಹೇಳಿದ್ದಾರೆ. ಕಾನೂನು ಮತ್ತು ನ್ಯಾಯಾಂಗದ ಮೇಲೆ ಅತ್ಯಂತ ಗೌರವದಿಂದ, ನನ್ನ ಪುತ್ರ ಬಂಡಿ ಭಗೀರಥ್ ನಮ್ಮ ವಕೀಲರ ಮೂಲಕ ತೆಲಂಗಾಣ ಪೊಲೀಸರ ಮುಂದೆ ತನಿಖೆಗೆ ಹಾಜರಾಗಿದ್ದಾರೆ. ನನ್ನ ಸ್ವಂತ ಮಗನಾಗಲಿ ಅಥವಾ ಸಾಮಾನ್ಯ ನಾಗರಿಕನಾಗಲಿ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ನಾನು ಹಿಂದೆಯೂ ಹೇಳಿದ್ದೇನೆ. ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ ಎಂದು ನಿರಂತರವಾಗಿ ಹೇಳುತ್ತಿದ್ದಾನೆ. ನಮ್ಮ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಕಾನೂನು ತಜ್ಞರ ಮುಂದೆ ಇಟ್ಟಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: 3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಪಕ್ಕದ ರಾಜ್ಯ ಸರ್ಕಾರದಿಂದ ಹೊಸ ಆಫರ್

ಅಲ್ಲದೆ ನ್ಯಾಯ ವ್ಯವಸ್ಥೆಯ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ. ನ್ಯಾಯ ತಡವಾಗಬಹುದು, ಆದರೆ ನಿರಾಕರಿಸಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. ಶುಕ್ರವಾರ ಮಧ್ಯರಾತ್ರಿ ತನಕ ನಡೆದ ವಿಚಾರಣೆಯಲ್ಲಿ, ತೆಲಂಗಾಣ ಹೈಕೋರ್ಟ್ ಸಾಯಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿತ್ತು. ಸಾಯಿ ಪರ ವಕೀಲರು ಪ್ರಕರಣದ ದೂರುದಾರೆಯಾದ ಬಾಲಕಿಯ ತಾಯಿ, ತನ್ನ ಮಗಳು ಕಳೆದ ವರ್ಷದಿಂದ ಸಾಯಿಯೊಂದಿಗೆ ಸಂಬಂಧದಲ್ಲಿದ್ದು, ಅದು ಪರಸ್ಪರ ಸೌಹಾರ್ದಯುತವಾಗಿತ್ತು ಎಂದು ಹೇಳಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ಆದರೆ, ಸಂತ್ರಸ್ತೆಯ ಪರ ವಕೀಲರು ಜಾಮೀನು ಅರ್ಜಿಯನ್ನು ತೀವ್ರವಾಗಿ ವಿರೋಧಿಸಿದ್ದರು. ವಾದ-ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ಟಿ. ಮಾಧವಿ ದೇವಿ ಅವರು ಈ ಹಂತದಲ್ಲಿ ಯಾವುದೇ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದಿದ್ದರು.

ಹನಿ ಟ್ರ್ಯಾಪ್ ಆರೋಪ

ಇನ್ನು ಇದೊಂದು ಹನಿ ಟ್ರ್ಯಾಪ್ ಯತ್ನಎಂದು ಭಗೀರಥ್ ಸಾಯಿ ಆರೋಪಿಸಿದ್ದಾರೆ. ಬಾಲಕಿ ಹಾಗೂ ಆಕೆಯ ಪೋಷಕರು ಮದುವೆಯಾಗುವಂತೆ ಒತ್ತಡ ಹೇರಿ 5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಈ ಕುರಿತು ತಾವು ಮೊದಲೇ ಪೊಲೀಸರನ್ನು ಸಂಪರ್ಕಿಸಿದ್ದಾಗಿ ಅವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:34 am, Sun, 17 May 26

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!