AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC ಅಧಿಕಾರಿಗಳು ದರೋಡೆಕೋರರು, ವಿವಾದ ಸೃಷ್ಟಿಸಿದ ಕೇಂದ್ರ ಸಚಿವ ಬಿಶ್ವೇಶ್ವರ್ ತುಡು ಹೇಳಿಕೆ

ಕೇಂದ್ರ ಲೋಕಸೇವಾ ಆಯೋಗದ ಮೂಲಕ ನೇಮಕಗೊಂಡಿರುವ ಹಲವು ಅಧಿಕಾರಿಗಳನ್ನು ದರೋಡೆಕೋರರು ಎಂದು ಕೇಂದ್ರ ಸಚಿವ ಬಿಶೇಶ್ವರ್ ತುಡು ಎಂದು ಹೇಳಿರುವ ಹೇಳಿಕೆ ವಿವಾದ ಸೃಷ್ಟಿಸಿದೆ.

UPSC ಅಧಿಕಾರಿಗಳು ದರೋಡೆಕೋರರು, ವಿವಾದ ಸೃಷ್ಟಿಸಿದ ಕೇಂದ್ರ ಸಚಿವ ಬಿಶ್ವೇಶ್ವರ್ ತುಡು ಹೇಳಿಕೆ
ಬಿಶೇಶ್ವರ್ ತುಡು
ಅಕ್ಷಯ್​ ಪಲ್ಲಮಜಲು​​
|

Updated on:Apr 10, 2023 | 10:54 AM

Share

ಬಾಲಸೋರ್: ಕೇಂದ್ರ ಲೋಕಸೇವಾ ಆಯೋಗ (UPSC) ಮೂಲಕ ನೇಮಕಗೊಂಡಿರುವ ಹಲವು ಅಧಿಕಾರಿಗಳನ್ನು ದರೋಡೆಕೋರರು ಎಂದು ಕೇಂದ್ರ ಸಚಿವ ಬಿಶ್ವೇಶ್ವರ್ ತುಡು (Bisheshwar Tudu) ಹೇಳಿರುವ ಹೇಳಿಕೆ ಇದೀಗ ವಿವಾದವನ್ನು ಸೃಷ್ಟಿಸಿದೆ. ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕೋಳಿ ಕಳ್ಳನಿಗೆ ಶಿಕ್ಷೆಯಾಗಬಹುದಾದರೂ, ಖನಿಜ ಮಾಫಿಯಾ ನಡೆಸುವ ಅಧಿಕಾರಿಯನ್ನು ಮುಟ್ಟಲು ಸಾಧ್ಯವಿಲ್ಲ, ಏಕೆಂದರೆ ಈ ವ್ಯವಸ್ಥೆ ಅವರನ್ನು ರಕ್ಷಣೆ ಮಾಡುತ್ತದೆ ಎಂದು ಹೇಳಿದರು. ಬಾಲಸೋರ್ ಜಿಲ್ಲೆಯ ಬಲಿಪಾಲ್‌ನಲ್ಲಿರುವ ಸರ್ಕಾರಿ ಶಾಲೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಸಭೆಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಬುಡಕಟ್ಟು ವ್ಯವಹಾರಗಳು ಮತ್ತು ಜಲಶಕ್ತಿ ರಾಜ್ಯ ಸಚಿವರು ಬಿಶ್ವೇಶ್ವರ್ ತುಡು ಯುಪಿಎಸ್‌ಸಿ ಅಧಿಕಾರಿಗಳು ಕೂಡ ಭೂ ಮಾಫಿಯಾದತಂಹ ಕೃತ್ಯಗಳಲ್ಲಿ ಭಾಗಿಯಾಗುತ್ತಾರೆ. ಅವರು ಕೂಡ ದರೋಡೆಕೋರರು ಎಂದು ಹೇಳಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ಪತ್ತೆಯಾಗಿದೆ, ವೀಡಿಯೊ ಕ್ಲಿಪ್‌ನ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸಾಧ್ಯವಾಗಲಿಲ್ಲ ಎಂದು ಪಿಟಿಐ ವರದಿ ಮಾಡಿದೆ. ಯುಪಿಎಸ್‌ಸಿ ಮೂಲಕ ನೇಮಕಗೊಂಡ ಅಧಿಕಾರಿಗಳು ಅತ್ಯಂತ ಜ್ಞಾನವುಳ್ಳ ವ್ಯಕ್ತಿಗಳು ಮತ್ತು ಯಾವಾಗಲೂ ಉನ್ನತ ಹುದ್ದೆಗಳಲ್ಲಿರುತ್ತಾರೆ ಎಂಬ ಕಲ್ಪನೆ ನನಗಿತ್ತು. ಆದರೆ ಈ ಯುಪಿಎಸ್‌ಸಿ ಅರ್ಹತೆ ಪಡೆದವರಲ್ಲಿ ಹೆಚ್ಚಿನವರು ಡಕಾಯಿತರು ಎಂದು ನಾನು ಭಾವಿಸುತ್ತೇನೆ. ಆದರೆ ಎಲ್ಲ ಅಧಿಕಾರಿಗಳು ಡಕಾಯಿತರು ಎಂದು ನಾನು ಹೇಳುವುದಿಲ್ಲ. ಆದರೆ ಅವರಲ್ಲಿ ಕೇಲವರು ಕಳ್ಳರು ಇದ್ದರೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ;ಕಾಶ್ಮೀರ ಬಗ್ಗೆ ಹೇಳಿಕೆ ವಿವಾದದ ಬೆನ್ನಲ್ಲೇ ದೆಹಲಿಗೆ ಬಂದಿಳಿದ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ

UPSC ದೇಶದ ಪ್ರಧಾನ ಕೇಂದ್ರ ನೇಮಕಾತಿ ಆಯೋಗವಾಗಿದೆ, ಇದು ಸ್ವತಂತ್ರ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಉನ್ನತ ಸರ್ಕಾರಿ ಅಧಿಕಾರಿಗಳನ್ನು ನೇಮಿಸುತ್ತದೆ. ನಾನು ಒಡಿಶಾ ಸಂಸದ, ದೆಹಲಿರುವ ನನ್ನ ಮನೆಯ ಹಿಂದೆ ಯುಪಿಎಸ್​​ಸಿ ಕಚೇರಿ ಇದೆ, ಈ ಬಗ್ಗೆ ನನಗೆ ತುಂಬಾ ಗೌರವ ಇತ್ತು, ಆದರೆ ಇದೀಗ ಬದಲಾಗಿದೆ ಎಂದು ಹೇಳಿದರು.

ಇಂತಹ ವಿದ್ಯಾವಂತರು ಇದ್ದರೆ ನಮ್ಮ ಸಮಾಜ ಏಕೆ ಭ್ರಷ್ಟಾಚಾರ ಮತ್ತು ಅನ್ಯಾಯದಲ್ಲಿ ಮುಳುಗಿದೆ? ಇದಕ್ಕೆ ಕಾರಣ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿನ ನೈತಿಕತೆಯ ಕೊರತೆ. ನಮ್ಮಲ್ಲಿ ಆಧ್ಯಾತ್ಮಿಕ ಶಿಕ್ಷಣ ಮತ್ತು ಆಲೋಚನೆಗಳ ಕೊರತೆ. 2021ರಲ್ಲಿ ಮಯೂರ್‌ಭಂಜ್‌ನ ತಮ್ಮ ಕ್ಷೇತ್ರದಲ್ಲಿ ರಾಜ್ಯ ಸರ್ಕಾರಿ ಅಧಿಕಾರಿಗಳು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ ಸಚಿವರು.

Published On - 10:46 am, Mon, 10 April 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!