AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪೋತ್ಸವ: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಬಳಿಕ ದೀಪಗಳ ಬೆಳಗಿದ ಧರ್ಮೇಂದ್ರ ಪ್ರಧಾನ್

ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡ ಮನೆಯಲ್ಲಿ ದೀಪೋತ್ಸವ ಆಚರಿಸಿದರು. ಅಯೋಧ್ಯೆಯ ರಾಮ ಮಂದಿರದಲ್ಲಿ ಸೋಮವಾರವಷ್ಟೇ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ನೆರವೇರಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಮನೆಯಲ್ಲಿ ದೀಪಗಳನ್ನು ಬೆಳಗಿ ರಾಮನನ್ನು ಮನಸ್ಸಿಗೆ ಹಾಗೂ ಮನೆಗೆ ಬರಮಾಡಿಕೊಂಡಿದ್ದಾರೆ.

ನಯನಾ ರಾಜೀವ್
|

Updated on: Jan 23, 2024 | 10:01 AM

Share

ಅಯೋಧ್ಯೆ(Ayodhya) ಯ ರಾಮ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ರಾಮ ವಿರಾಜಮಾನನಾಗಿದ್ದಾನೆ ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್(Dharmendra Pradhan) ಒಡಿಶಾದಲ್ಲಿ ರಾಮ ಜ್ಯೋತಿ ಬೆಳಗುವುದರ ಮೂಲಕ ದೀಪೋತ್ಸವ ಆಚರಿಸಿದರು. ರಾಮಮಂದಿರ ಪ್ರಾಣಪ್ರತಿಷ್ಠೆಯಂದು ಮನೆಗಳಲ್ಲಿ ದೀಪ ಬೆಳಗಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದರು. ಜನರು ತಮ್ಮ ಮನೆಗಳಲ್ಲಿ ದೀಪ ಬೆಳಗುವುದರ ಮೂಲಕ ರಾಮನ ಮೇಲಿದ್ದ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಸಾಂಪ್ರದಾಯಿಕ ಬಿಳಿ ಕುರ್ತಾ ಧರಿಸಿರುವ ಪ್ರಧಾನ್ ತಮ್ಮ ನಿವಾಸದಲ್ಲಿ ದೀಪಗಳನ್ನು ಬೆಳಗಿಸಿದ್ದಾರೆ. ಮನೆಗಳನ್ನು ದೀಪಗಳಿಂದ ಅಲಂಕರಿಸಿ ರಾಮ ಬಂದಿದ್ದಾನೆ ಎಂದು ಎಕ್ಸ್​ನಲ್ಲಿ ಬರೆದಿದ್ದಾರೆ.

ಪ್ರಧಾನಿ ಮೋದಿ, ಕೇಂದ್ರ ಸಚಿವರು ದೀಪೋತ್ಸವ ಆಚರಿಸಿದರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಬಿಜೆಪಿಯ ಹಿರಿಯ ನಾಯಕರು ತಮ್ಮ ಮನೆಗಳಲ್ಲಿ ದೀಪೋತ್ಸವ ಆಚರಿಸಿದರು. ಹಲವಾರು ಮುಖಂಡರು ಬೀದಿಗಿಳಿದು ವಿಶೇಷ ದೀಪಗಳನ್ನು ಹಚ್ಚಿ, ಪಟಾಕಿ ಸಿಡಿಸಿದರು.

ಪ್ರಾಣ ಪ್ರತಿಷ್ಠಾ ಸಮಾರಂಭ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲ ಆನಂದಿಬೆನ್ ಪಟೇಲ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾವತ್ ಮತ್ತು ಸಾವಿರಾರು ಗಣ್ಯರ ಸಮ್ಮುಖದಲ್ಲಿ ಅಯೋಧ್ಯೆಯ ಭವ್ಯ ಮಂದಿರದಲ್ಲಿ ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾ ವಿಧಿ ವಿಧಾನಗಳು ನಡೆದವು.

ಅಯೋಧ್ಯೆಯ ರಾಮಮಂದಿರದಲ್ಲಿ ಸೋಮವಾರ ನಡೆದ ಶ್ರೀರಾಮಲಲ್ಲಾ ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ಹಬ್ಬದ ವಾತಾವರಣ ಕಂಡುಬಂತು. ರಾಜ್ಯಗಳ ಎಲ್ಲಾ ಪ್ರಮುಖ ದೇವಾಲಯಗಳಲ್ಲಿ ಅಲಂಕಾರ, ವಿಶೇಷ ಭಜನೆ, ಕೀರ್ತನೆಗಳೊಂದಿಗೆ ಜನರು ಪರಸ್ಪರ ಶುಭ ಹಾರೈಸುತ್ತಿರುವುದು ಕಂಡುಬಂದಿತು.

ಅಯೋಧ್ಯೆಯಲ್ಲಿ ಶ್ರೀರಾಮನ ಬಾಲ ಮೂರ್ತಿಯ ಪ್ರತಿಷ್ಠಾಪನೆ ಸೋಮವಾರ ನಡೆಯಿತು. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ದೇವಾಲಯಗಳಲ್ಲಿ ಭಜನೆ-ಕೀರ್ತನೆ ಮತ್ತು ರಾಮಾಯಣ ಮತ್ತು ಸುಂದರಕಾಂಡ ಪಠಣ ಮಾಡಲಾಯಿತು.

ಮತ್ತಷ್ಟು ಓದಿ: ಅಯೋಧ್ಯೆ ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭದ ನಂತರ ‘ರಾಮ ಜ್ಯೋತಿ’ ಬೆಳಗಿದ ಮೋದಿ

ಅಯೋಧ್ಯೆಯ ರಾಮಮಂದಿರದಲ್ಲಿ ನೂತನ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ವೀಕ್ಷಿಸಲು ಟಿವಿಯ ಮುಂದೆ ಕೈಮುಗಿದು ನಿಂತಿರುವ ಜನರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಮಗುವಿನಂತಿರುವ ರಾಮನ ವಿಗ್ರಹಕ್ಕೆ ಸಾಷ್ಟಾಂಗ ನಮಸ್ಕಾರ ಮಾಡುತ್ತಿರುವಂತಹ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಸಂಭ್ರಮದ ವಾತಾವರಣ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಹಲವು ಗಣ್ಯರು ಅಯೋಧ್ಯೆಗೆ ಆಗಮಿಸಿದ್ದರು ಮತ್ತು ಸಮಾರಂಭವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಟ್ರೆಂಡಿಂಗ್‌ನಲ್ಲಿದೆ. ಇದು ಭಾರತದ ರಾಜಕೀಯ ಮತ್ತು ಧಾರ್ಮಿಕ ಇತಿಹಾಸದಲ್ಲಿ ಪ್ರಮುಖ ಸಂದರ್ಭವೆಂದು ಪರಿಗಣಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ