ಸ್ಕಿಲ್ ಇಂಡಿಯಾ ಡಿಜಿಟಲ್​ಗೆ ಚಾಲನೆ ನೀಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ 

ಸ್ಕಿಲ್ ಇಂಡಿಯಾ ಡಿಜಿಟಲ್ ವೇದಿಕೆಗೆಯನ್ನು ಬುಧವಾರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಉದ್ಘಾಟನೆ ಮಾಡಿದ್ದಾರೆ. ಎಲ್ಲಾ ಕೌಶಲ್ಯ ಅಭಿವೃದ್ಧಿ ಉಪಕ್ರಮಗಳನ್ನು ಒಂದೇ ವೇದಿಕೆಯಲ್ಲಿ ತರಲು ಈ ಅತ್ಯಾಧುನಿಕ ಡಿಜಿಟಲ್ ವೇದಿಕೆ ಸಹಕಾರಿಯಾಗಲಿದೆ.

ಸ್ಕಿಲ್ ಇಂಡಿಯಾ ಡಿಜಿಟಲ್​ಗೆ ಚಾಲನೆ ನೀಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ 
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
Follow us
ಗಂಗಾಧರ​ ಬ. ಸಾಬೋಜಿ
|

Updated on:Sep 13, 2023 | 11:07 PM

ಸ್ಕಿಲ್ ಇಂಡಿಯಾ ಡಿಜಿಟಲ್ ವೇದಿಕೆಗೆಯನ್ನು ಬುಧವಾರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಉದ್ಘಾಟನೆ ಮಾಡಿದ್ದಾರೆ. ಎಲ್ಲಾ ಕೌಶಲ್ಯ ಅಭಿವೃದ್ಧಿ ಉಪಕ್ರಮಗಳನ್ನು ಒಂದೇ ವೇದಿಕೆಯಲ್ಲಿ ತರಲು ಈ ಅತ್ಯಾಧುನಿಕ ಡಿಜಿಟಲ್ ವೇದಿಕೆ ಸಹಕಾರಿಯಾಗಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪ್ರಧಾನ್, ‘ಎಲ್ಲಿಯಾದರೂ ಕೌಶಲ್ಯ, ಯಾವುದೇ ಸಮಯದಲ್ಲಿ ಕೌಶಲ್ಯ, ಎಲ್ಲರಿಗೂ ಕೌಶಲ್ಯ’ ಎಂದು ಹೇಳಿದರು. ಈ ವೇದಿಕೆಯೂ ಕೌಶಲ್ಯ ಅಭಿವೃದ್ಧಿ ಉಪಕ್ರಮಗಳ ಪ್ರವೇಶವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.

ಡಿಜಿಟಲ್ ತಂತ್ರಜ್ಞಾನದಲ್ಲಿ ಭಾರತವು ಸಾಕಷ್ಟು ಅಭಿವೃದ್ಧಿ ಹೊಂದಿದೆ. ಡಿಜಿಲಾಕರ್, ಒಎನ್ ಡಿಸಿ, ಡಿಬಿಟಿ, ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್​ನಂತಹ ಉಪಕ್ರಮಗಳು ಜನರ ಜೀವನವನ್ನು ಸರಾಗಗೊಳಿಸುತ್ತಿವೆ. ಕಡಿಮೆ ವೆಚ್ಚದ, ಉತ್ತಮ ಗುಣಮಟ್ಟದ ಸಾರ್ವಜನಿಕ ಡಿಜಿಟಲ್ ಮೂಲಸೌಕರ್ಯವನ್ನು ನಿರ್ಮಿಸುವಲ್ಲಿ ಭಾರತವು ನಾಯಕತ್ವವವನ್ನು ಹೊಂದಿದೆ ಎಂದು ಹೇಳಿದರು.

ಇದನ್ನೂ ಓದಿ; ಕೊನೆಗೂ ಸಂಸತ್ ವಿಶೇಷ ಅಧಿವೇಶನದ ಅಜೆಂಡಾ ಬಿಡುಗಡೆ ಮಾಡಿದ ಕೇಂದ್ರ; ಇಲ್ಲಿದೆ ವಿವರ

ಭಾರತದ ಜನಸಂಖ್ಯಾ ಲಾಭಾಂಶ, ಆರ್ಥಿಕ ಬೆಳವಣಿಗೆಯ ಸಾಧನವಾಗಿ ಕೌಶಲ್ಯ, ಉದ್ಯಮಶೀಲತೆ ಮತ್ತು ಸರ್ಕಾರವು ಕೈಗೊಂಡ ಇತರೆ ಡಿಜಿಟಲ್ ಉಪಕ್ರಮಗಳ ಬಗ್ಗೆ ಸಚಿವ ಧರ್ಮೇಂದ್ರ ಪ್ರಧಾನ್ ಮಾಹಿತಿ ನೀಡಿದ್ದಾರೆ. ​

ಉದ್ಯಮ ಸಂಬಂಧಿತ ಕೌಶಲ್ಯ ಕೋರ್ಸ್​ಗಳು, ಉದ್ಯೋಗಾವಕಾಶಗಳು ಮತ್ತು ಉದ್ಯಮಶೀಲತೆ ಬೆಂಬಲವನ್ನು ವಿಸ್ತರಿಸುವುದರಿಂದ ಉತ್ತಮ ಅವಕಾಶಗಳು ಮತ್ತು ಉಜ್ವಲ ಭವಿಷ್ಯವನ್ನು ಬಯಸುವ ಲಕ್ಷಾಂತರ ಭಾರತೀಯರ ಆಕಾಂಕ್ಷೆಗಳು ಮತ್ತು ಕನಸುಗಳನ್ನು ಈ ವೇದಿಕೆ ಒಳಗೊಂಡಿದೆ. ಕಾರ್ಯಕ್ರಮದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಎಲೆಕ್ಟ್ರಾನಿಕ್ಸ್ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಹೆಚ್ಚು ಅರ್ಹತೆ ಮತ್ತು ಸಂಪಾದಿಸುತ್ತಿರುವ ಪತ್ನಿಗೆ ಜೀವನಾಂಶ ನೀಡಲಾಗದು: ದೆಹಲಿ ಹೈಕೋರ್ಟ್

ಸ್ಕಿಲ್ ಇಂಡಿಯಾ ಎಂಬುದು ಭಾರತದ ಕೌಶಲ್ಯ, ಶಿಕ್ಷಣ, ಉದ್ಯೋಗ ಮತ್ತು ಉದ್ಯಮಶೀಲತೆ ಪರಿಸರ ವ್ಯವಸ್ಥೆಗಾಗಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಆಗಿದೆ. ಈ ಅತ್ಯಾಧುನಿಕ ವೇದಿಕೆಯು ನುರಿತ ಪ್ರತಿಭೆಗಳ ನೇಮಕಾತಿಯನ್ನು ವೇಗಗೊಳಿಸುವಲ್ಲಿ, ಜೀವನಪರ್ಯಂತ ಕಲಿಕೆ ಮತ್ತು ವೃತ್ತಿಜೀವನದ ಪ್ರಗತಿಗೆ ಅನುಕೂಲವಾಗಲಿದೆ.

ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್​ ಮಾತನಾಡಿ, ಕೌಶಲ್ಯ ಭಾರತ ಮತ್ತು ಡಿಜಿಟಲ್ ಇಂಡಿಯಾ ಇವು ಶಕ್ತಿಯುತ ಯೋಜನೆಗಳಾಗಿದ್ದು, ಭವಿಷ್ಯದಲ್ಲಿ ಯುವಕರನ್ನು ಕೌಶಲ್ಯಗೊಳಿಸುವುದು ಇದರ ಏಕೈಕ ಉದ್ದೇಶವಾಗಿದೆ. ಇದು ಅನೇಕ ಅವಕಾಶಗಳನ್ನು ಸೃಷ್ಟಿಸಲಿದೆ ಸ್ಕಿಲ್ ಇಂಡಿಯಾ ಡಿಜಿಟಲ್ ಉದ್ಯಮಶೀಲತೆ ಮತ್ತು ಭವಿಷ್ಯಕ್ಕೆ ಸಿದ್ಧವಾದ ಉದ್ಯೋಗಿಗಳನ್ನು ಸಕ್ರಿಯಗೊಳಿಸುತ್ತದೆ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:00 pm, Wed, 13 September 23

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ