ಕೇಂದ್ರ ಸಚಿವ ನಿತಿನ್​ ಗಡ್ಕರಿಗೂ ಕೊರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್​ ಆಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಟ್ವೀಟ್​

| Updated By: Lakshmi Hegde

Updated on: Jan 12, 2022 | 7:54 AM

ಈಗಾಗಲೇ ಬಿಜೆಪಿಯ ಹಲವು ನಾಯಕರಿಗೆ ಕೊರೊನಾ ಸೋಂಕು ತಗುಲಿದೆ. ಕೇಂದ್ರ ಸಚಿವ ರಾಜನಾಥ್​ ಸಿಂಗ್​, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​, ಕರ್ನಾಟಕ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಸೇರಿ ಹಲವರು ಸೋಂಕಿಗೆ ಒಳಗಾಗಿದ್ದಾರೆ.

ಕೇಂದ್ರ ಸಚಿವ ನಿತಿನ್​ ಗಡ್ಕರಿಗೂ ಕೊರೊನಾ ಸೋಂಕು; ಮನೆಯಲ್ಲೇ ಕ್ವಾರಂಟೈನ್​ ಆಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಟ್ವೀಟ್​
ನಿತಿನ್​ ಗಡ್ಕರಿ
Follow us on

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಸಚಿವ ನಿತಿನ್​ ಗಡ್ಕರಿ (Nitin Gadkari ) ಮತ್ತೊಮ್ಮೆ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಸದ್ಯ ಅವರಿಗೆ ಕೊವಿಡ್​ 19ನ (Covid 19) ಸೌಮ್ಯ ಲಕ್ಷಣಗಳಿದ್ದು, ಐಸೋಲೇಶನ್​​ಗೆ ಒಳಗಾಗಿದ್ದಾರೆ. ಈ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ನಿತಿನ್​ ಗಡ್ಕರಿ,  ನನಗೆ ಕೊರೊನಾ ಸೋಂಕು ತಗುಲಿದೆ. ಸೌಮ್ಯವಾದ ಲಕ್ಷಣಗಳಿವೆ. ಕೊವಿಡ್​ 19ಗೆ ಸಂಬಂಧಪಟ್ಟ ಎಲ್ಲ ನಿಯಮಗಳನ್ನೂ ಪಾಲಿಸುತ್ತಿದ್ದು, ಐಸೋಲೇಶನ್​ಗೆ ಒಳಗಾಗಿದ್ದೇನೆ. ಮನೆಯಲ್ಲೇ ಕ್ವಾರಂಟೈನ್​ ಆಗಿ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಆದಷ್ಟು ಬೇಗ ತಪಾಸಣೆ ಮಾಡಿಸಿಕೊಳ್ಳಿ. ಫಲಿತಾಂಶ ಬರುವವರೆಗೂ ಐಸೋಲೇಶ್ ಆಗಿ ಎಂದು ಹೇಳಿದ್ದಾರೆ. 

ಈಗಾಗಲೇ ಬಿಜೆಪಿಯ ಹಲವು ನಾಯಕರಿಗೆ ಕೊರೊನಾ ಸೋಂಕು ತಗುಲಿದೆ. ಕೇಂದ್ರ ಸಚಿವ ರಾಜನಾಥ್​ ಸಿಂಗ್​, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​, ಕರ್ನಾಟಕ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಸೇರಿ ಹಲವರು ಸೋಂಕಿಗೆ ಒಳಗಾಗಿದ್ದಾರೆ. ಅಂದಹಾಗೇ, ನಿತಿನ್​ ಗಡ್ಕರಿಗೆ ಸೋಂಕು ತಗುಲುತ್ತಿರುವುದು ಇದೇ ಮೊದಲಲ್ಲ. 2020ರ ಸೆಪ್ಟೆಂಬರ್​​ನಲ್ಲಿ ಒಮ್ಮೆ ಅವರಿಗೆ ಕೊರೊನಾ ಸೋಂಕು ತಗುಲಿತ್ತು.

ಇನ್ನೊಂದೆಡೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಕೂಡ ಮನೆಯಲ್ಲಿಯೇ ಐಸೋಲೇಟ್​ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿ ಕಂಟೋನ್ಮೆಂಟ್​​ನಲ್ಲಿರುವ ಆರ್ಮಿ ಹಾಸ್ಪಿಟಲ್​​​ನ ವೈದ್ಯರ ತಂಡ ರಾಜನಾಥ್​ ಸಿಂಗ್​ಗೆ ಚಿಕಿತ್ಸೆ ನೀಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು  ಇಲಾಖೆಯ ವಕ್ತಾರರು ತಿಳಿಸಿದ್ದಾರೆ. ಜೆಪಿ ನಡ್ಡಾ ಕೂಡ ಮನೆಯಲ್ಲೇ ಇದ್ದುಕೊಂಡು ವೈದ್ಯರ ಸಲಹೆ ಮೇರೆಗೆ ಕೊವಿಡ್​ 19 ಸಂಬಂಧಿತ ನಿಯಮ ಪಾಲನೆ ಮಾಡುತ್ತಿದ್ದಾರೆ. ಇನ್ನುಳಿದಂತೆ ಬಿಜೆಪಿ ಮುಖಂಡರಾದ ಖುಷ್ಬು ಸುಂದರ್​ ಮತ್ತು ವರುಣ್​ ಗಾಂಧಿ ಕೂಡ ಕೊರೊನಾಕ್ಕೆ ಒಳಗಾಗಿದ್ದಾರೆ. ವರುಣ್​ ಗಾಂಧಿ ತಮಗೆ ಗಂಭೀರ ಸ್ವರೂಪದ ಲಕ್ಷಣಗಳು ಇರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Gold Rate: ಮತ್ತಷ್ಟು ಏರಿಕೆಯಾಯ್ತು ಚಿನ್ನ, ಬೆಳ್ಳಿ ಬೆಲೆ; ಪ್ರಮುಖ ನಗರಗಳಲ್ಲಿನ ದರ ವಿವರ ಪರಿಶೀಲಿಸಿ