ನಿತೀಶ್ ಕುಮಾರ್, ನವೀನ್ ಪಟ್ನಾಯಕ್​ಗೆ ಭಾರತ ರತ್ನ ನೀಡಬೇಕು; ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಒತ್ತಾಯ

|

Updated on: Dec 25, 2024 | 4:25 PM

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ಭಾರತ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ. ಈ ವರ್ಷದ ಆರಂಭದಲ್ಲಿ ಬಿಜೆಪಿ ಅಧಿಕಾರದಿಂದ ಹೊರಹಾಕಲ್ಪಟ್ಟ ಮಾಜಿ ಮೈತ್ರಿ ಪಾಲುದಾರರಾದ ನಿತೀಶ್ ಕುಮಾರ್ ಮತ್ತು ನವೀನ್ ಪಟ್ನಾಯಕ್ ಅವರ ಲೋಕಸಭಾ ಕ್ಷೇತ್ರವಾದ ಬೇಗುಸರಾಯ್‌ನಲ್ಲಿ ಈ ಅಭಿಪ್ರಾಯವನ್ನು ಬಿಜೆಪಿ ಸಂಸದ ವ್ಯಕ್ತಪಡಿಸಿದ್ದಾರೆ.

ನಿತೀಶ್ ಕುಮಾರ್, ನವೀನ್ ಪಟ್ನಾಯಕ್​ಗೆ ಭಾರತ ರತ್ನ ನೀಡಬೇಕು; ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಒತ್ತಾಯ
Nitish Kumar And Naveen Patnaik
Follow us on

ನವದೆಹಲಿ: ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ನೀಡಬೇಕು ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಇಂದು ಹೇಳಿದ್ದಾರೆ. ಗಿರಿರಾಜ್ ಸಿಂಗ್ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ಬೇಗುಸರಾಯ್‌ನಲ್ಲಿ ಬಿಜೆಪಿಯ ಮೈತ್ರಿಕೂಟದ ಸದಸ್ಯರಾದ ನಿತೀಶ್ ಕುಮಾರ್ ಮತ್ತು ಈ ವರ್ಷದ ಆರಂಭದಲ್ಲಿ ಬಿಜೆಪಿ ಅಧಿಕಾರದಿಂದ ಹೊರಹಾಕಲ್ಪಟ್ಟ ಮಾಜಿ ಮೈತ್ರಿ ಪಾಲುದಾರ ನವೀನ್ ಪಟ್ನಾಯಕ್ ಅವರನ್ನು ಹೊಗಳಿದ್ದಾರೆ.

“ರಾಜ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ನಿತೀಶ್ ಕುಮಾರ್ ಅಧಿಕಾರಕ್ಕೆ ಏರುವವರೆಗೂ ಬಿಹಾರ ಹದಗೆಟ್ಟ ರಸ್ತೆಗಳು, ಶಾಲೆಗಳು ಮತ್ತು ಕಟ್ಟಡಗಳಿಗೆ ಹೆಸರುವಾಸಿಯಾಗಿತ್ತು. ಹಾಗೆಯೇ ನವೀನ್ ಪಟ್ನಾಯಕ್ ಒಡಿಶಾಗೆ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರಂತಹ ನಾಯಕರು ಭಾರತ ರತ್ನದಂತಹ ಅತ್ಯುನ್ನತ ಗೌರವಕ್ಕೆ ಅರ್ಹರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತ ರತ್ನ ಪ್ರಶಸ್ತಿಗೆ ಕೈಗಾರಿಕೋದ್ಯಮಿ ರತನ್ ಟಾಟಾ ಹೆಸರು ಪ್ರಸ್ತಾಪಿಸಿದ ಮಹಾರಾಷ್ಟ್ರ ಸರ್ಕಾರ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದಂದು ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಬಿಹಾರದಲ್ಲಿ ಮತ್ತೆ ಎನ್‌ಡಿಎ ಸರ್ಕಾರ ರಚನೆಯಾಗಲಿದೆ ಎಂದು ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಹೇಳಿದರು.

ಕಳೆದ ತಿಂಗಳು ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿಯಾಗಿದ್ದ ಏಕನಾಥ್ ಶಿಂಧೆ ಅವರನ್ನು ಎನ್‌ಡಿಎ ಸಿಎಂ ಅಭ್ಯರ್ಥಿ ಎಂದು ಘೋಷಿಸಿರಲಿಲ್ಲ. ಎನ್‌ಡಿಎಯ ಪ್ರಚಂಡ ವಿಜಯದ ನಂತರ ಅತಿದೊಡ್ಡ ಘಟಕವಾಗಿ ಹೊರಹೊಮ್ಮಿದ ಬಿಜೆಪಿ ತಾನೇ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಂಡಿತು. ಬಿಜೆಪಿಯ ದೇವೇಂದ್ರ ಫಡ್ನವಿಸ್ ಹೊಸ ಮುಖ್ಯಮಂತ್ರಿಯಾದರು.

ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ 2025ರ ಕೊನೆಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ