ಶೀಘ್ರ ಸಹಜ ಸ್ಥಿತಿಗೆ ವಿಮಾನ ಸಂಚಾರ: ಕೇಂದ್ರ ಸಚಿವ ಹರ್​ದೀಪ್ ಸಿಂಗ್ ಪುರಿ ಆಶಯ

ದೇಶೀಯ ವಿಮಾನಯಾನವು ಮುಂಚಿನಂತಾಗಲಿದೆ. 2021 ಜನವರಿ9 ರಂದು 2,151 ದೇಶೀಯ ವಿಮಾನಗಳು ಹಾರಾಟ ನಡೆಸಿದ್ದು 2,59,851 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ ಎಂದು ಪುರಿ ಟ್ವೀಟ್ ಮಾಡಿದ್ದಾರೆ.

ಶೀಘ್ರ ಸಹಜ ಸ್ಥಿತಿಗೆ ವಿಮಾನ ಸಂಚಾರ: ಕೇಂದ್ರ ಸಚಿವ ಹರ್​ದೀಪ್ ಸಿಂಗ್ ಪುರಿ ಆಶಯ
ಹರ್​ದೀಪ್ ಸಿಂಗ್ ಪುರಿ
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 10, 2021 | 6:24 PM

ನವದೆಹಲಿ: ದೇಶೀಯ ವಿಮಾನಯಾನ ಸೇವೆಗಳು ಶೀಘ್ರದಲ್ಲಿಯೇ ಕೋವಿಡ್ ಪೂರ್ವ ಅವಧಿಯಲ್ಲಿರುವಂತೆಯೇ ಸೇವೆ ಒದಗಿಸಲಿವೆ. ಈ ಪ್ರಕ್ರಿಯೆ ನಿಧಾನವಾಗಿ ನಡೆಯಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ಹರ್​ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಹೆಚ್ಚಿನ ಜನರು ವಿಮಾನ ಪ್ರಯಾಣವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂಬುದನ್ನು ತೋರಿಸಲು ವಿಮಾನ ಪ್ರಯಾಣಿಕರ ಅಂಕಿಅಂಶಗಳನ್ನು ಸಚಿವ ಪುರಿ ಟ್ವೀಟ್ ಮಾಡಿದ್ದಾರೆ.

ದೇಶೀಯ ವಿಮಾನಯಾನವು ಮುಂಚಿನಂತಾಗಲಿದೆ. ಜನವರಿ 9, 2021ರಂದು 2,151 ದೇಶೀಯ ವಿಮಾನಗಳು ಹಾರಾಟ ನಡೆಸಿದ್ದು 2,59,851 ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಇದೇ ದಿನ ಒಟ್ಟು 4,306 ವಿಮಾನಗಳು ಹಾರಾಟ ನಡೆಸಿದ್ದು 5,16,404 ಮಂದಿ ಪ್ರಯಾಣಿಸಿದ್ದಾರೆ ಎಂದು ಪುರಿ ಹೇಳಿದ್ದಾರೆ.

ಅಂತರರಾಷ್ಟ್ರೀಯ ವಿಮಾನಗಳನ್ನು ಜನವರಿ 31ರವರೆಗೆ ರದ್ದು ವಿಸ್ತರಿಸುವಂತೆ  ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಬುಧವಾರ ತಮ್ಮ ಆದೇಶದಲ್ಲಿ ಬದಲಾವಣೆ ಮಾಡಿತ್ತು .

ಕೋವಿಡ್-19 ವ್ಯಾಪಿಸಿದ ಹಿನ್ನೆಲೆಯಲ್ಲಿ ಮಾರ್ಚ್ 25ರಂದು ಭಾರತ ವಿಮಾನ ಸೇವೆಗಳನ್ನು ರದ್ದು ಮಾಡಿತ್ತು. ಹಂತ ಹಂತವಾಗಿ ದೇಶೀಯ ವಿಮಾನಗಳು ಮೇ 25ರಂದು ವಿಮಾನಯಾನ ಆರಂಭಿಸಿದ್ದವು. ಜುಲೈ ತಿಂಗಳಿನಿಂದ ಕೆಲವು ಅಂತರರಾಷ್ಟ್ರೀಯ ವಿಶೇಷ ವಿಮಾನಗಳು ಮಾತ್ರ ಸೇವೆ ಆರಂಭಿಸಿದ್ದವು.

ಹುಬ್ಬಳ್ಳಿಯಿಂದ ಇನ್ನೆರಡು ಮಾರ್ಗಗಳಲ್ಲಿ ಇಂಡಿಗೋ ವಿಮಾನ ಸೇವೆ: ಪ್ರಲ್ಹಾದ್ ಜೋಶಿ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ