AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಬುಡಕಟ್ಟು ಅಭಿವೃದ್ಧಿಗೆ ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ: ಜುಎಲ್ ಓರಾಂ

ದೇಶದಲ್ಲಿ ಬುಡಕಟ್ಟು ಅಭಿವೃದ್ಧಿಗೆ ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಎಲ್ ಓರಾಂ ಹೇಳಿದ್ದಾರೆ. ಭಾರತ ಸರ್ಕಾರವು 2024ರ ನವೆಂಬರ್ 15ರಿಂದ 2025ರ ನವೆಂಬರ್ 15ರವರಗೆ ಜನಜಾತಿಯ ಗೌರವ್ ವರ್ಷ್​ ಆಗಿ ಬಿರ್ಸಾ ಮುಂಡಾ ಅವರು 150ನೇ ಜನ್ಮ ದಿನಾಚರಣೆಯನ್ನು ಆಚರಣೆ ಮಾಡಲು ಅನುಮೋದನೆ ನೀಡಿದೆ. ಭಾರತದ ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಬುಡಕಟ್ಟು ನಾಯಕರು ಮತ್ತು ಸಮುದಾಯಗಳ ಕೊಡುಗೆಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಗುತ್ತದೆ.

ಭಾರತದಲ್ಲಿ ಬುಡಕಟ್ಟು ಅಭಿವೃದ್ಧಿಗೆ ಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ: ಜುಎಲ್ ಓರಾಂ
ಜುಎಲ್ ಓರಾಂ
ನಯನಾ ರಾಜೀವ್
|

Updated on: May 27, 2025 | 11:00 AM

Share

ನವದೆಹಲಿ, ಮೇ 27: ದೇಶದಲ್ಲಿ ಬುಡಕಟ್ಟು ಅಭಿವೃದ್ಧಿ( Tribal Development)ಗೆ ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಎಲ್ ಓರಾಂ ಹೇಳಿದ್ದಾರೆ. ಭಾರತ ಸರ್ಕಾರವು 2024ರ ನವೆಂಬರ್ 15ರಿಂದ 2025ರ ನವೆಂಬರ್ 15ರವರಗೆ ಜನಜಾತಿಯ ಗೌರವ್ ವರ್ಷ​ ಆಗಿ ಬಿರ್ಸಾ ಮುಂಡಾ ಅವರ 150ನೇ ಜನ್ಮ ದಿನಾಚರಣೆಯನ್ನು ಆಚರಣೆ ಮಾಡಲು ಅನುಮೋದನೆ ನೀಡಿದೆ. ಭಾರತದ ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಬುಡಕಟ್ಟು ನಾಯಕರು ಮತ್ತು ಸಮುದಾಯಗಳ ಕೊಡುಗೆಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಗುತ್ತದೆ.

18 ರಾಜ್ಯಗಳು ಮತ್ತು 01 ಕೇಂದ್ರಾಡಳಿತ ಪ್ರದೇಶದಾದ್ಯಂತ 75 ವಿಶೇಷವಾಗಿ ದುರ್ಬಲ ಬುಡಕಟ್ಟು ಗುಂಪುಗಳ (PVTGs) ಸಮಗ್ರ ಅಭಿವೃದ್ಧಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ಪಿಎಂ ಜನ್​ಮನ್ ಯೋಜನೆ ಒಳ್ಳೆಯ ಉಪಕ್ರಮವಾಗಿದೆ. 24,104 ಕೋಟಿ ರೂ. ಅಭಿವೃದ್ಧಿ ಯೋಜನೆಯಲ್ಲಿ ಕೇಂದ್ರದಪಾಲು 15,336 ಕೋಟಿ ರೂ. ಮತ್ತು ರಾಜ್ಯ ಪಾಲು 8,768 ಕೋಟಿ ರೂ. ಆಗಿದೆ ಎಂದರು.

ಬುಡಕಟ್ಟು ಜನರ ಜೀವನವನ್ನು ಸುಧಾರಿಸಲು ಮತ್ತು ಅವರ ಸಾಮಾಜಿಕ-ಆರ್ಥಿಕ ಪ್ರಗತಿಯನ್ನು ಸುಗಮಗೊಳಿಸಲು ಅನೇಕ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಓರಾಂ ಮಾಹಿತಿ ನೀಡಿದರು. ಮೂರು ವರ್ಷಗಳಲ್ಲಿ ಸುರಕ್ಷಿತ ವಸತಿ, ಶುದ್ಧ ಕುಡಿಯುವ ನೀರು, ಉತ್ತಮ ಶಿಕ್ಷಣ, ಆರೋಗ್ಯ ರಕ್ಷಣೆ, ಪೋಷಣೆ, ರಸ್ತೆ ಸಂಪರ್ಕ, ವಿದ್ಯುತ್ ಮತ್ತು ಸುಸ್ಥಿರ ಜೀವನೋಪಾಯದ ಅವಕಾಶಗಳನ್ನು ಒದಗಿಸುವುದು ಉದ್ದೇಶವಾಗಿದೆ.

ಪಿಎಂ-ಜನ್​ಮನ್ ಯೋಜನೆಯ ಯಶಸ್ಸಿನ ಆಧಾರದ ಮೇಲೆ, ಬುಡಕಟ್ಟು ವ್ಯವಹಾರಗಳ ಸಚಿವಾಲಯ ಧರ್ತಿಆಬಾ ಜನ​ಜಾತಿ ಗ್ರಾಮ ಉತ್ಕರ್ಷ್ ಅಭಿಯಾನ ಎಂಬ ಯೋಜನೆ ಆರಂಭಿಸಿದೆ. ಈ ಯೋಜನೆಯನ್ನು ಪ್ರಧಾನಿ ಮೋದಿ 2024ರ ಫಬ್ರವರಿಯಲ್ಲಿ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಪ್ರಾರಂಭಿಸಿದರು.

ಮತ್ತಷ್ಟು ಓದಿ: ಬ್ರಿಟಿಷರ ವಿರುದ್ಧ ಧ್ವನಿ ಎತ್ತಿದ ಜನಪದ ನಾಯಕ ಬಿರ್ಸಾ ಮುಂಡಾ ಬುಡಕಟ್ಟು ಜನಾಂಗಕ್ಕೆ ಆರಾಧ್ಯ ದೈವವಾಗಿದ್ದು ಹೇಗೆ?

ಇದು ಬುಡಕಟ್ಟು ಗ್ರಾಮಗಳನ್ನು ಅಗತ್ಯ ಸೇವಾ ಮೂಲಸೌಕರ್ಯದೊಂದಿಗೆ ಬಲಪಡಿಸುವತ್ತ ಗಮನಹರಿಸುತ್ತದೆ. ಸಚಿವಾಲಯದ ಪ್ರಕಾರ, ಈ ಅಭಿಯಾನವು 63843 ಬುಡಕಟ್ಟು ಪ್ರಾಬಲ್ಯದ ಹಳ್ಳಿಗಳಲ್ಲಿ ಮೂಲಸೌಕರ್ಯವನ್ನು ಬಲಪಡಿಸುವ ಮೂಲಕ ಶಿಕ್ಷಣ, ಆರೋಗ್ಯ ಮತ್ತು ಅಂಗನವಾಡಿ ಸೌಲಭ್ಯಗಳನ್ನು ಸುಧಾರಿಸುವುದು ಮತ್ತು ಜೀವನೋಪಾಯದ ಅವಕಾಶಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಈ ಅಭಿಯಾನವು ಐದು ವರ್ಷಗಳಲ್ಲಿ 30 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 549 ಜಿಲ್ಲೆಗಳ ಸುಮಾರು ಐದು ಕೋಟಿ ಬುಡಕಟ್ಟು ಜನಾಂಗದವರಿಗೆ ಪ್ರಯೋಜನವನ್ನು ನೀಡುವ ಸಾಧ್ಯತೆಯಿದೆ ಎಂದು ನಂಬಲಾಗಿದೆ. ಪಂಚಾಯತ್ ರಾಜ್ ಸಚಿವಾಲಯ ಕೂಡ ಈ ಅಭಿಯಾನದಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಈ ಯೋಜನೆಯ ಬಜೆಟ್ ಅನ್ನು 5 ಕೋಟಿ ರೂ.ಗಳಿಂದ 15 ಕೋಟಿ ರೂ.ಗಳಿಗೆ ಹೆಚ್ಚಿಸಿದೆ.

ಅದೇ ರೀತಿ, ಬುಡಕಟ್ಟು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ, ಏಕಲವ್ಯ ಮಾದರಿ ವಸತಿ ಶಾಲೆಗಳ ಬಜೆಟ್ ಅನ್ನು ಕಳೆದ ವರ್ಷ 4748 ಕೋಟಿ ರೂ.ಗಳಿಂದ 7088.60 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ.

ಬುಡಕಟ್ಟು ಜನಾಂಗದವರಿಗೆ ಹೊಸ ಆದಾಯದ ಅವಕಾಶಗಳನ್ನು ಸೃಷ್ಟಿಸಲು, ಪ್ರಧಾನ ಮಂತ್ರಿ ಜನಜತಿ ವಿಕಾಸ್ ಮಿಷನ್‌ನ ಬಜೆಟ್ ಅನ್ನು 152 ಕೋಟಿ ರೂ.ಗಳಿಂದ 380 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ್ ಮಹಾ ಅಭಿಯಾನದ (ಪಿಎಂ ಜನ್​ಮನ್) ಬಜೆಟ್ ದ್ವಿಗುಣಗೊಂಡಿದೆ.

ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ, ಇದನ್ನು 150 ಕೋಟಿ ರೂ.ಗಳಿಂದ 300 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ. ಬುಡಕಟ್ಟು ಪ್ರದೇಶಗಳಲ್ಲಿ ವಸತಿ, ಶುದ್ಧ ಕುಡಿಯುವ ನೀರು, ಶಿಕ್ಷಣ, ಆರೋಗ್ಯ, ನೈರ್ಮಲ್ಯ, ರಸ್ತೆಗಳು ಇತ್ಯಾದಿಗಳನ್ನು ಅಭಿವೃದ್ಧಿಪಡಿಸುವ ಮೂಲಕ ದುರ್ಬಲ ಬುಡಕಟ್ಟು ಗುಂಪುಗಳ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ