ಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ; ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಟೀಕೆ
ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಅರಾಜಕತೆಯನ್ನು ಹರಡಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ ಎಂದು ಹೇಳಿದ್ದಾರೆ. ಲೋಕಸಭಾ ಕ್ಷೇತ್ರವಾದ ಗುಣಾದಲ್ಲಿ 3 ದಿನಗಳ ಪ್ರವಾಸ ಕೈಗೊಂಡಿರುವ ಅವರು ಹಿಂಡೆನ್‌ಬರ್ಗ್ ವಿವಾದದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಗ್ವಾಲಿಯರ್: ಹಿಂಡೆನ್‌ಬರ್ಗ್ ವರದಿ ಕುರಿತು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಪ್ರತಿಕ್ರಿಯೆ ನೀಡಿದ್ದು, “ಕಾಂಗ್ರೆಸ್‌ಗೆ ಒಂದೇ ಒಂದು ಕೆಲಸ. ಅದೇನೆಂದರೆ ದೇಶದಲ್ಲಿ ಅರಾಜಕತೆಯನ್ನು ಹರಡಲು ಮತ್ತು ದೇಶವನ್ನು ವಿವಾದಾತ್ಮಕ ವಿಷಯಗಳಲ್ಲಿ ತೊಡಗಿಸುವುದಾಗಿದೆ. ಪಿಎಂ ನರೇಂದ್ರ ಮೋದಿ ಮತ್ತು ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಭಾರತವು ಪ್ರಗತಿ ಮತ್ತು ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತಿದೆ” ಎಂದು ಹೇಳಿದ್ದಾರೆ.
ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ಗುಣಾದಲ್ಲಿ ತಮ್ಮ ಮೂರು ದಿನಗಳ ಪ್ರವಾಸವನ್ನು ಇಂದು ಪ್ರಾರಂಭಿಸಿದರು. ಕೇಂದ್ರ ಸಚಿವರು ತಮ್ಮ ಲೋಕಸಭಾ ಕ್ಷೇತ್ರದ ಮೂರು ಜಿಲ್ಲೆಗಳಲ್ಲಿ ಸಾರ್ವಜನಿಕ ಸಂಪರ್ಕ ಕಚೇರಿಗಳನ್ನು ತೆರೆಯುವ ಬಗ್ಗೆ ಮತ್ತು ಶೀಘ್ರದಲ್ಲೇ ಗ್ವಾಲಿಯರ್‌ನಲ್ಲಿ ಉದ್ಯಮಶೀಲತಾ ಕೇಂದ್ರವನ್ನು ತೆರೆಯುವ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ಇದನ್ನೂ ಓದಿ: Narendra Modi: ಆರ್ಗಾನಿಕ್ ಕೃಷಿಗೆ ಆದ್ಯತೆ ನೀಡಿ; ರೈತರು, ವಿಜ್ಞಾನಿಗಳ ಜೊತೆ ಪ್ರಧಾನಿ ಮೋದಿ ಸಂವಾದ
6 ಗ್ವಾಲಿಯರ್ ಆಗ್ರಾ ಎಕ್ಸ್‌ಪ್ರೆಸ್‌ವೇ ತೆಗೆದುಕೊಂಡಿದ್ದಕ್ಕಾಗಿ ಮತ್ತೊಮ್ಮೆ ಪ್ರಧಾನಿ ಮೋದಿ ಮತ್ತು ನಿತಿನ್ ಗಡ್ಕರಿ ಅವರಿಗೆ ಜ್ಯೋತಿರಾದಿತ್ಯ ಸಿಂಧಿಯಾ ಧನ್ಯವಾದ ಹೇಳಿದ್ದಾರೆ.
#WATCH | Gwalior, Madhya Pradesh: On Hindenburg report, Union Minister and BJP leader Jyotiraditya Scindia says, “Congress has only one work, to spread anarchy in the country and to engage the country in controversial matters. PM Modi and each worker of the BJP are taking India… pic.twitter.com/TQ1rEpnqUI
— ANI (@ANI) August 11, 2024
ಹಿಂಡನ್‌ಬರ್ಗ್ ವರದಿಯ ಪ್ರಶ್ನೆಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದು, ದೇಶದಲ್ಲಿ ಅರಾಜಕತೆಯನ್ನು ಹರಡುವುದು ಮತ್ತು ವಿವಾದಾತ್ಮಕ ವಿಷಯಗಳಲ್ಲಿ ಸಿಲುಕಿಕೊಳ್ಳುವುದು ಮಾತ್ರ ಕಾಂಗ್ರೆಸ್‌ನ ಕೆಲಸವಾಗಿದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ಮತ್ತು ಬಿಜೆಪಿ ಕಾರ್ಯಕರ್ತರು ದೇಶವನ್ನು ಬೆಳಕಿನತ್ತ ಕೊಂಡೊಯ್ಯಲು ಪ್ರಯತ್ನಿಸಿದರೆ ಕಾಂಗ್ರೆಸ್ ದೇಶವನ್ನು ದಾರಿ ತಪ್ಪಿಸಿ ಕತ್ತಲಲ್ಲಿ ಇಡುವ ಪ್ರಯತ್ನ ಮಾಡುತ್ತಿದೆ ಎಂದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:41 pm, Sun, 11 August 24