ಕೇಂದ್ರ ಸಚಿವ ಕಿಶನ್ ರೆಡ್ಡಿಗೆ ಪ್ರತಿಷ್ಠಿತ ‘ಗ್ಲೋಬಲ್ ಇನ್ಕ್ರೆಡಿಬಲ್ ಇಂಕ್ ಲೀಡರ್ಶಿಪ್’ ಪ್ರಶಸ್ತಿ ಪ್ರದಾನ
ಪ್ರವಾಸೋದ್ಯಮ ಮತ್ತು ಭಾರತದ ಶ್ರೀಮಂತ ಸಂಸ್ಕೃತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಾಡಿದ ಕಾರ್ಯಗಳನ್ನು ಗಮನಿಸಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಅವರಿಗೆ ಪ್ರತಿಷ್ಠಿತ ಗ್ಲೋಬಲ್ ಇನ್ಕ್ರೆಡಿಬಲ್ ಇಂಕ್ ಲೀಡರ್ಶಿಪ್ ಅವಾರ್ಡ್ ನೀಡಿ ಗೌರಿವಿಸಲಾಯಿತು.
ನವದೆಹಲಿ, ಜುಲೈ 17: ಅಮೆರಿಕ ಮತ್ತು ಭಾರತದ ನಡುವೆ ವ್ಯಾಪಾರ, ವಾಣಿಜ್ಯ ಮತ್ತು ಜನರ ನಡುವಿನ ವಿನಿಮಯ ಕಾರ್ಯಕ್ರಮಗಳನ್ನು ಉತ್ತೇಜಿಸುವ ಯುಎಸ್ ಇಂಡಿಯಾ ಎಸ್ಎಂಇ ಕೌನ್ಸಿಲ್ ಸಂಸ್ಥೆಯಿಂದ ಕೊಡಮಾಡಲ್ಪಡುವ ಪ್ರತಿಷ್ಠಿತ ‘ಗ್ಲೋಬಲ್ ಇನ್ಕ್ರೆಡಿಬಲ್ ಇಂಕ್ ಲೀಡರ್ಶಿಪ್ ಅವಾರ್ಡ್’ (Global Incredible Inc leadership Award) ಅನ್ನು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ (G Kishan Reddy) ಅವರಿಗೆ ನೀಡಿ ಗೌರವಿಸಲಾಯಿತು.
ಪ್ರವಾಸೋದ್ಯಮ ಮತ್ತು ಭಾರತದ ಶ್ರೀಮಂತ ಸಂಸ್ಕೃತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಅವರ ಪ್ರಯತ್ನಗಳನ್ನು ಗುರುತಿಸಿ ಅಮೆರಿಕದ ಮೇರಿಲ್ಯಾಂಡ್ ರಾಜ್ಯದ ಗಣ್ಯರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಿದ ನಂತರ ಟ್ವೀಟ್ ಮಾಡಿದ ಕೇಂದ್ರ ಸಚಿವರು, “ಅಮೆರಿಕ ಮತ್ತು ಭಾರತದ ನಡುವೆ ವ್ಯಾಪಾರ, ವಾಣಿಜ್ಯ ಮತ್ತು ಜನರ ನಡುವಿನ ವಿನಿಮಯ ಕಾರ್ಯಕ್ರಮಗಳನ್ನು ಉತ್ತೇಜಿಸುವ ಸಂಸ್ಥೆಯಾದ ಯುಎಸ್ ಇಂಡಿಯಾ ಎಸ್ಎಂಇ ಕೌನ್ಸಿಲ್ನಿಂದ ‘ಲೀಡರ್ಶಿಪ್ ಅವಾರ್ಡ್’ ಪಡೆದಿದ್ದಕ್ಕೆ ಕೃತಜ್ಞನಾಗಿದ್ದೇನೆ” ಎಂದರು.
ಇದನ್ನೂ ಓದಿ: Kishan Reddy: ‘ಧರಣಿ’ ಪೋರ್ಟಲ್ನಿಂದ ಹೊಸ ಸಮಸ್ಯೆ; ಬಿಆರ್ಎಸ್ ಸರ್ಕಾರದ ವಿರುದ್ಧ ಕಿಶನ್ ರೆಡ್ಡಿ ಕಿಡಿ
“ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನ ಮತ್ತು ನಾಯಕತ್ವದಲ್ಲಿ ಪ್ರವಾಸೋದ್ಯಮ ಮತ್ತು ಭಾರತದ ಶ್ರೀಮಂತ ಸಂಸ್ಕೃತಿಯನ್ನು ಉತ್ತೇಜಿಸುವ ಪ್ರಯತ್ನಗಳನ್ನು ಗುರುತಿಸಿ ಅಮೆರಿಕದ ಮೇರಿಲ್ಯಾಂಡ್ ರಾಜ್ಯದ ಗಣ್ಯರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು” ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
Humbled to have received the ‘Leadership Award’ from The US India SME Council – an organization that promotes trade, commerce, and people-to-people exchange programs between the US ?? & India??
The award was conferred by eminent citizens from Maryland state, US in recognization… pic.twitter.com/oU628qrMiS
— G Kishan Reddy (@kishanreddybjp) July 15, 2023
ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಪ್ರಸ್ತುತ ಅಮೆರಿಕದಲ್ಲಿದ್ದು, ಪ್ರವಾಸೋದ್ಯಮದ ಆರ್ಥಿಕ, ಸಾಮಾಜಿಕ ಮತ್ತು ಪರಿಸರ ಸುಸ್ಥಿರತೆ ಕುರಿತು ವಿಶ್ವಸಂಸ್ಥೆಯ ಉನ್ನತ ಮಟ್ಟದ ರಾಜಕೀಯ ವೇದಿಕೆಯಲ್ಲಿ (UN HLPF) ಭಾಗವಹಿಸಿ ಭಾಷಣ ಮಾಡಿದ್ದಾರೆ.
ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:44 pm, Mon, 17 July 23