AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ದಿಢೀರ್ ನಿರ್ಧಾರವಲ್ಲ; ಜಾತಿ ಗಣತಿ ಬಗ್ಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಸ್ಪಷ್ಟನೆ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯು ಇಂದು (ಏಪ್ರಿಲ್ 30) ಮುಂಬರುವ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸಬೇಕೆಂದು ನಿರ್ಧರಿಸಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ಸಚಿವ ಕಿಶನ್ ರೆಡ್ಡಿ, ಇದು ಹಠಾತ್ ನಿರ್ಧಾರವಲ್ಲ. ಸಾಕಷ್ಟು ಚರ್ಚೆಯ ಬಳಿಕ ಮಾಡಿದ ನಿರ್ಧಾರ. ಜನಗಣತಿ ಘೋಷಣೆಯ ಸಮಯದಲ್ಲಿ ಈ ನಿರ್ಧಾರವನ್ನು ಸಾರ್ವಜನಿಕಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಸೆಪ್ಟೆಂಬರ್ 18, 2024ರಂದು ಹೇಳಿದ್ದರು ಎಂದಿದ್ದಾರೆ.

ಇದು ದಿಢೀರ್ ನಿರ್ಧಾರವಲ್ಲ; ಜಾತಿ ಗಣತಿ ಬಗ್ಗೆ ಕೇಂದ್ರ ಸಚಿವ ಕಿಶನ್ ರೆಡ್ಡಿ ಸ್ಪಷ್ಟನೆ
Kishan Reddy
ಸುಷ್ಮಾ ಚಕ್ರೆ
|

Updated on: Apr 30, 2025 | 10:36 PM

Share

ನವದೆಹಲಿ, ಏಪ್ರಿಲ್ 30: ಪ್ರಧಾನಿ ಮೋದಿ (PM Modi) ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇಂದು ಹಲವು ಮುಖ್ಯ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು. ಜನಗಣತಿಯ ಜೊತೆಗೆ ಜಾತಿ ಜನಗಣತಿ ನಡೆಸುವ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಪಿಎ) ಜಾತಿ ಗಣತಿಗೆ ಅನುಮೋದನೆ ನೀಡಿದೆ. ಈ ಸಂದರ್ಭದಲ್ಲಿ ಜಾತಿ ಜನಗಣತಿ ನಡೆಸುವ ಸರ್ಕಾರದ ನಿರ್ಧಾರದ ಬಗ್ಗೆ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ (G Kishan Reddy) ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯು ಮುಂಬರುವ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಲು ನಿರ್ಧರಿಸಿದೆ ಎಂದು ಅವರು ಹೇಳಿದರು. ಇದು ಹಠಾತ್ ನಿರ್ಧಾರವಲ್ಲ, ಬದಲಾಗಿ ಸಾಕಷ್ಟು ಚರ್ಚೆಯ ನಂತರ ತೆಗೆದುಕೊಂಡ ನಿರ್ಧಾರ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸೆಪ್ಟೆಂಬರ್ 18, 2024ರಂದು ಜನಗಣತಿ ಘೋಷಣೆಯ ಸಮಯದಲ್ಲಿ ಈ ನಿರ್ಧಾರವನ್ನು ಸಾರ್ವಜನಿಕವಾಗಿ ಘೋಷಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಹಿಂದೆ ನಮ್ಮ ಸರ್ಕಾರವು ಸಮಾಜದ ಯಾವುದೇ ವರ್ಗದ ಮೇಲೆ ಒತ್ತಡ ಹೇರದೆ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ 10% ಮೀಸಲಾತಿಯನ್ನು ಪರಿಚಯಿಸಿದ್ದು, ಇದು ನಮ್ಮ ಸರ್ಕಾರವು ಸಮಾಜ ಮತ್ತು ದೇಶದ ಮೌಲ್ಯಗಳು ಮತ್ತು ಹಿತಾಸಕ್ತಿಗಳಿಗೆ ಬದ್ಧವಾಗಿದೆ ಎಂಬುದನ್ನು ಸಾಬೀತುಪಡಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಜನಗಣತಿ ಜೊತೆಗೆ ಜಾತಿಗಣತಿ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ

1881-1931ರ ನಡುವೆ ನಡೆಸಿದ ದಶಕದ ಜನಗಣತಿಯಲ್ಲಿ ಎಲ್ಲಾ ಜಾತಿಗಳನ್ನು ಎಣಿಸಲಾಗಿದ್ದರೂ, ಕಾಂಗ್ರೆಸ್ ನೇತೃತ್ವದ ಸರ್ಕಾರವು 1951ರ ಜನಗಣತಿಯಲ್ಲಿ ಜಾತಿಗಳನ್ನು ಎಣಿಸಬಾರದು ಎಂದು ಆದೇಶಿಸಿತು. ಅಂದಿನಿಂದ, ಕಾಂಗ್ರೆಸ್ ಸರ್ಕಾರಗಳು ಯಾವಾಗಲೂ ಜಾತಿ ಎಣಿಕೆಯನ್ನು ವಿರೋಧಿಸುತ್ತಿವೆ. ಕಾಂಗ್ರೆಸ್ ಪಕ್ಷ ಮತ್ತು ಅದರ ಮೈತ್ರಿಕೂಟದ ಪಾಲುದಾರರು ಜಾತಿ ಜನಗಣತಿಯನ್ನು ರಾಜಕೀಯ ಸಾಧನವಾಗಿ ಬಳಸುತ್ತಿದ್ದಾರೆ. ಅವರ ಉದ್ದೇಶ ಸಾಮಾಜಿಕ ನ್ಯಾಯ ಅಥವಾ ಉತ್ತಮ ಆಡಳಿತದ ಕಡೆಗೆ ಅಲ್ಲ ಎಂದು ಕಿಶನ್ ರೆಡ್ಡಿ ಆರೋಪಿಸಿದ್ದಾರೆ.

2010ರಲ್ಲಿ, ಅಂದಿನ ಪ್ರಧಾನಿ ದಿವಂಗತ ಡಾ. ಮನಮೋಹನ್ ಸಿಂಗ್ ಜಿ ಅವರು ಜಾತಿ ಜನಗಣತಿಯ ವಿಷಯವನ್ನು ಸಂಪುಟದಲ್ಲಿ ಪರಿಗಣಿಸಲಾಗುವುದು ಎಂದು ಲೋಕಸಭೆಗೆ ಭರವಸೆ ನೀಡಿದ್ದರು ಮತ್ತು ಈ ವಿಷಯವನ್ನು ಪರಿಗಣಿಸಲು ಸಚಿವರ ಗುಂಪನ್ನು ರಚಿಸಲಾಗಿತ್ತು ಎಂದು ಅವರು ನೆನಪಿಸಿಕೊಂಡರು. ಹಲವು ರಾಜಕೀಯ ಪಕ್ಷಗಳು ಜಾತಿ ಜನಗಣತಿಯನ್ನು ಶಿಫಾರಸು ಮಾಡಿದ್ದವು. ಸಂಸತ್ತಿನಲ್ಲಿ ಅಂಗೀಕರಿಸಲಾದ ಸರ್ವಾನುಮತದ ನಿರ್ಣಯವನ್ನು ಬಿಜೆಪಿ ಬೆಂಬಲಿಸಿತು ಎಂದು ಸಚಿವ ಕಿಶನ್ ರೆಡ್ಡಿ ನೆನಪಿಸಿಕೊಂಡರು. ಆದರೆ, ಕಾಂಗ್ರೆಸ್ ಸರ್ಕಾರ ಜಾತಿ ಜನಗಣತಿಯ ಬದಲು ಒಂದೇ ಒಂದು ಸಮೀಕ್ಷೆ ನಡೆಸಲು ನಿರ್ಧರಿಸಿತು. ಸಾಮಾಜಿಕ-ಆರ್ಥಿಕ ಜಾತಿ ಜನಗಣತಿ – 2011 (SECC-2011) ಎಂದು ಕರೆಯಲ್ಪಡುವ ಈ ಸಮೀಕ್ಷೆಯು ಕಳಪೆ ಯೋಜನೆ ಮತ್ತು ಅಸಮರ್ಥ ಅನುಷ್ಠಾನದಿಂದಾಗಿ ಸಂಪೂರ್ಣವಾಗಿ ವಿಫಲವಾಯಿತು ಎಂದು ಸಚಿವ ಕಿಶನ್ ರೆಡ್ಡಿ ಟೀಕಿಸಿದ್ದಾರೆ.

ಇದನ್ನೂ ಓದಿ: ಯಾವಾಗ ಮಾಡ್ತೀರ ಹೇಳಿ; ಕೇಂದ್ರ ಸರ್ಕಾರದ ಜಾತಿ ಗಣತಿಯ ನಿರ್ಧಾರಕ್ಕೆ ರಾಹುಲ್ ಗಾಂಧಿ ಸ್ವಾಗತ

ಆ ಸಮೀಕ್ಷೆ 46 ಲಕ್ಷ ಜಾತಿಗಳನ್ನು ತೋರಿಸಿತು ಮತ್ತು 8.19 ಕೋಟಿ ತಪ್ಪುಗಳನ್ನು ಒಳಗೊಂಡಿತ್ತು. 4,893.60 ಕೋಟಿ ರೂ. ಖರ್ಚು ಮಾಡಿದ ನಂತರವೂ ಅದರ ಫಲಿತಾಂಶಗಳನ್ನು ಎಂದಿಗೂ ಬಿಡುಗಡೆ ಮಾಡಲಾಗಿಲ್ಲ. ಏಕೆಂದರೆ ಆಗಿನ ಕೇಂದ್ರ ಗೃಹ ಸಚಿವ ಪಿ. ಚಿದಂಬರಂ ಜನಗಣತಿಯಲ್ಲಿ ಜಾತಿಯನ್ನು ಸೇರಿಸುವುದನ್ನು ವಿರೋಧಿಸಿದರು. ಆದ್ದರಿಂದ SECC ಅನ್ನು 1948 ರ ಜನಗಣತಿ ಕಾಯ್ದೆಯಡಿಯಲ್ಲಿ ನಡೆಸಲಾಗಿಲ್ಲ. ಅಂದಿನಿಂದ ಕಾಂಗ್ರೆಸ್ ಪಕ್ಷ ಮತ್ತು ಅದರ INDI ಮೈತ್ರಿ ಪಾಲುದಾರರು ಜಾತಿ ಜನಗಣತಿಯನ್ನು ರಾಜಕೀಯ ಸಾಧನವಾಗಿ ಬಳಸಿದ್ದಾರೆ. ಅವರ ಉದ್ದೇಶ ಸಾಮಾಜಿಕ ನ್ಯಾಯ ಅಥವಾ ಉತ್ತಮ ಆಡಳಿತದ ಬದಲು ಸಮಾಜವನ್ನು ವಿಭಜಿಸುವ ಮತ್ತು ಘರ್ಷಣೆಯನ್ನು ಉಂಟುಮಾಡುವುದಾಗಿದೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!