ಮಹಿಳೆಯರ ಸುರಕ್ಷತೆ ಬಗ್ಗೆ ರಾಹುಲ್ ಗಾಂಧಿ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ: ಕಿಶನ್ ರೆಡ್ಡಿ
ಮಹಿಳೆಯರ ಸುರಕ್ಷತೆ ಬಗ್ಗೆ ರಾಹುಲ್ ಗಾಂಧಿ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಕೇಂದ್ರ ಕಲ್ಲಿದ್ದಿಲು ಮತ್ತು ಗಣಿ ಸಚಿವ ಜಿ ಕಿಶನ್ ರೆಡ್ಡಿ ಹೇಳಿದ್ದಾರೆ. ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುವ ರಾಹುಲ್ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಅವರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಮಾತನಾಡಲಿ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಒತ್ತಾಯಿಸಿದ್ದಾರೆ.
ಮಹಿಳೆಯರ ಸುರಕ್ಷತೆ ಬಗ್ಗೆ ರಾಹುಲ್ ಗಾಂಧಿ ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ ಎಂದು ಕೇಂದ್ರ ಕಲ್ಲಿದ್ದಿಲು ಮತ್ತು ಗಣಿ ಸಚಿವ ಜಿ ಕಿಶನ್ ರೆಡ್ಡಿ ಹೇಳಿದ್ದಾರೆ. ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುವ ರಾಹುಲ್ ಗಾಂಧಿ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಮಾತನಾಡಲಿ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಒತ್ತಾಯಿಸಿದ್ದಾರೆ.
ತೆಲಂಗಾಣದ ಜೈನೂರಿನಲ್ಲಿ ಆದಿವಾಸಿ ಮಹಿಳೆಯರ ಮೇಲಿನ ದೌರ್ಜನ್ಯ ಕಾಣುತ್ತಿಲ್ಲವೇ?.. ಇದೇನಾ ಬದಲಾವಣೆ ಎಂದು ಪ್ರಶ್ನಿಸಿದರು. ಮೊಸಳೆ ಕಣ್ಣೀರು ಮಹಿಳೆಯರ ಸುರಕ್ಷತೆಗೆ ಅಲ್ಲ. ಕಣ್ಣು ತೆರೆಯಿರಿ ರಾಹುಲ್, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ದಿನದಿಂದ ದಿನಕ್ಕೆ ಹಿಂಸಾಚಾರ ಮತ್ತು ಕಿರುಕುಳ ಮುಂದುವರೆದಿದೆ. ಮಹಿಳೆಯರ ರಕ್ಷಣೆ ಮಾಡದ ಕಾಂಗ್ರೆಸ್ ಸರ್ಕಾರಗಳು ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದರು.
ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ನಡೆದ ಘಟನೆಯನ್ನು ಬಗ್ಗೆ ಮಾತನಾಡಿ ಮಹಿಳೆಯರ ಮೇಲಿನ ದೌರ್ಜನ್ಯ ಭಯಾನಕ ಎಂದು ಹೇಳಿಕೆ ನೀಡುವ ರಾಹುಲ್‌ಗೆ ತೆಲಂಗಾಣದ ಆಸಿಫಾಬಾದ್ ಜಿಲ್ಲೆಯ ಜೈನೂರಿನಲ್ಲಿ ಆದಿವಾಸಿ ಮಹಿಳೆಯೊಬ್ಬರ ಮೇಲೆ ನಡೆದ ಅಮಾನವೀಯ ಘಟನೆ ನೆನಪಾಗುವುದಿಲ್ಲವೇ?
ಅಲ್ಪಸಂಖ್ಯಾತರ ಓಲೈಕೆ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಆದಿವಾಸಿ ಮಹಿಳೆಗೆ ನ್ಯಾಯ ಕೊಡಿಸುವ ಆಲೋಚನೆ ರಾಹುಲ್‌ಗೆ ಏಕೆ ಆಗುತ್ತಿಲ್ಲ? ಅತ್ಯಾಚಾರ ಎಸಗಿದ ಆಟೋ ಚಾಲಕ ಅಲ್ಪಸಂಖ್ಯಾತ ಎಂಬ ಕಾರಣಕ್ಕೆ ರಾಹುಲ್ ಮತ್ತು ಕಾಂಗ್ರೆಸ್ ಈ ಘಟನೆಯನ್ನು ಮರೆಮಾಚಲು ಯತ್ನಿಸುತ್ತಿದೆ ಎಂದರು.
ಮತ್ತಷ್ಟು ಓದಿ: ರೈತರ ಬಗ್ಗೆ ರಾಹುಲ್ ಗಾಂಧಿ ಮೊಸಳೆ ಕಣ್ಣೀರು; ಸಚಿವ ಕಿಶನ್ ರೆಡ್ಡಿ ಟೀಕೆ
ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಯಾವುದೇ ಘಟನೆ ನಡೆದರೂ ತಕ್ಷಣ ತನಿಖೆ ನಡೆಸಿ ಆರೋಪಿಗಳಿಗೆ ಕಾನೂನಿನ ಪ್ರಕಾರ ಶಿಕ್ಷೆಯಾಗುವಂತೆ ಸರ್ಕಾರಗಳು ಕ್ರಮ ಕೈಗೊಳ್ಳುತ್ತಿವೆ.
ಆದರೆ, ಅವರಂತೆ ಮಹಿಳೆಯರ ಮೇಲಿನ ದಾಳಿ ತಡೆಯುವಲ್ಲಿ ತಾರತಮ್ಯವಿಲ್ಲ. ದೇಶಾದ್ಯಂತ ಸಂಚಲನ ಮೂಡಿಸಿದ್ದ ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ ಮತ್ತು ಜೈನೂರ್‌ನಲ್ಲಿ ನಡೆದ ಘಟನೆಯನ್ನು ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಮರೆಮಾಚಲು ಯತ್ನಿಸಿದೆ ಎಂದು ಅವರು ಹೇಳಿದರು.
ಇನ್ನುಮೇಲಾದರೂ ಮಹಿಳೆಯರನ್ನು ಗೌರವಿಸುವುದನ್ನು ಕಲಿಯಬೇಕು ಮತ್ತು ಮಹಿಳೆಯರ ಮೇಲಿನ ಹಲ್ಲೆ ಘಟನೆಗಳಿಗೆ ತಾರತಮ್ಯ ಮಾಡಬಾರದು ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ.
13-ಜೂನ್-24: ಪೆದ್ದಪಲ್ಲಿ ಜಿಲ್ಲೆಯ ಸುಲ್ತಾನಾಬಾದ್ ಮಂಡಲದ ಕಟ್ನಪಲ್ಲಿ ಎಂಬಲ್ಲಿ ರೈಸ್ ಮಿಲ್‌ನಲ್ಲಿ ಆರು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ.
22-ಜೂ-24: ನಾಗರ್‌ಕರ್ನೂಲ್ ಜಿಲ್ಲೆಯಲ್ಲಿ ಬುಡಕಟ್ಟು ಮಹಿಳೆಯೊಬ್ಬರಿಗೆ ಒಂದು ವಾರ ಕಾಲ ಚಿತ್ರಹಿಂಸೆ ನೀಡಿ, ಆಕೆಯ ಮೇಲೆ ಗುಂಡು ಹಾರಿಸಿ, ಆಕೆಯ ಕಣ್ಣಿಗೆ ಮತ್ತು ಖಾಸಗಿ ಭಾಗಗಳಿಗೆ ಮೆಣಸಿನ ಪುಡಿ ಎರಚಿದ ಘಟನೆ ನಡೆದಿದೆ.
21-ಜುಲೈ-24: ನಾಗರ್‌ಕರ್ನೂಲ್ ಜಿಲ್ಲೆಯ ಹಾಜಿಪುರದಲ್ಲಿ ಕಾರಿನಲ್ಲಿ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ.
24-ಜುಲೈ-24: ಮಲಕಪೇಟೆಯ ಅಂಧರ ಶಾಲೆಯಲ್ಲಿ 8 ವರ್ಷದ ದೃಷ್ಟಿ ವಿಕಲಚೇತನ ಬಾಲಕಿಯ ಮೇಲೆ ಹಲ್ಲೆ ನಡೆಸಲಾಗಿದೆ.
30-ಜುಲೈ-24: ನಿರ್ಮಲ್‌ನ 26 ವರ್ಷದ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಚಲಿಸುತ್ತಿದ್ದ ಬಸ್‌ನಲ್ಲಿ ಅತ್ಯಾಚಾರ.
30-ಜುಲೈ-24: ವನಸ್ಥಲಿಪುರಂನಲ್ಲಿ 24 ವರ್ಷದ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರಿಗೆ ಇಬ್ಬರು ವ್ಯಕ್ತಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ.
4-ಆಗಸ್ಟ್-24: ಕಳ್ಳತನದ ಆರೋಪದ ಮೇಲೆ ದಲಿತ ಮಹಿಳೆ ಸುನೀತಾಳನ್ನು ಶಾದ್‌ನಗರ ಪೊಲೀಸರು ಅಮಾನುಷವಾಗಿ ಚಿತ್ರಹಿಂಸೆ ನೀಡಿದ್ದಾರೆ.
22-ಆಗಸ್ಟ್-24: ನಾಗರ್‌ಕರ್ನೂಲ್ ಜಿಲ್ಲೆಯ ಕೊಂಡರೆಡ್ಡಿಪಲ್ಲಿಯಲ್ಲಿ ಇಬ್ಬರು ಮಹಿಳಾ ಪತ್ರಕರ್ತರ ಮೇಲೆ ಕಾಂಗ್ರೆಸ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಕಿಶನ್ ರೆಡ್ಡಿ ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ