AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಭಟನಾ ನಿರತ ಪಂಜಾಬ್​ ರೈತರ ಜೊತೆ ಕೃಷಿ ಸಚಿವ ತೋಮರ್​ ಭೋಜನ

ದೆಹಲಿಯಲ್ಲಿರುವ ವಿಜ್ಞಾನ ಭವನದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ ಹಾಗೂ ರೈಲ್ವೆ ಸಚಿವ ಪಿಯೂಷ್​ ಗೋಯಲ್​ ಹಾಗೂ ಇಂದು ರೈತರ ಜೊತೆ ಊಟ ಮಾಡಿದರು. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಪ್ರತಿಭಟನಾ ನಿರತ ಪಂಜಾಬ್​ ರೈತರ ಜೊತೆ ಕೃಷಿ ಸಚಿವ ತೋಮರ್​ ಭೋಜನ
ರೈತ ನಾಯಕರ ಜೊತೆ ಕೇಂದ್ರ ಸಚಿವರು
ರಾಜೇಶ್ ದುಗ್ಗುಮನೆ
|

Updated on:Dec 30, 2020 | 4:19 PM

Share

ದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸತತ ಐದು ಬಾರಿ ಕೇಂದ್ರ ಸರ್ಕಾರ ರೈತರ ಜೊತೆ ಮಾತುಕತೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇಂದು ಕೇಂದ್ರದ ಜೊತೆ ಸರ್ಕಾರ ಏಳನೆ ಸುತ್ತಿನ ಮಾತುಕತೆ ನಡೆಸುತ್ತಿದೆ. ಊಟದ ಬಿಡುವಿನ ವೇಳೆ ಕೇಂದ್ರ ಸಚಿವರು ರೈತರ ಜೊತೆ ಊಟ ಮಾಡಿದ್ದು ವಿಶೇಷವಾಗಿತ್ತು.

ದೆಹಲಿಯಲ್ಲಿರುವ ವಿಜ್ಞಾನ ಭವನದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ ಹಾಗೂ ರೈಲ್ವೆ ಸಚಿವ ಪಿಯೂಷ್​ ಗೋಯಲ್​  ರೈತರ ಜೊತೆ ಊಟ ಮಾಡಿದರು. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕೇಂದ್ರ ಸರ್ಕಾರದ ನಡುವೆ 5 ಸಭೆಗಳು ನಡೆದಿವೆ. ಗೃಹ ಸಚಿವ ಅಮಿತ್ ಶಾ ಅವರು ಕೂಡ ಒಮ್ಮೆ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಅನೌಪಚಾರಿಕ ಮಾತುಕತೆಯನ್ನ ನಡೆಸಿದ್ದಾರೆ. ಅವೆಲ್ಲ ವಿಫಲವಾಗಿದ್ದು, ರೈತರು ತಮ್ಮ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರೆಸಿದ್ದಾರೆ.

ಹೋರಾಟ ನಿರತ ರೈತರ ಬೇಡಿಕೆಗಳು ಏನೇನು..? ಕೇಂದ್ರದ 3 ಕೃಷಿ ಕಾಯ್ದೆಗಳನ್ನು ಕೂಡಲೇ ರದ್ದು ಮಾಡಬೇಕು. ಕೃಷಿ ಆಯೋಗದ ಶಿಫಾರಸು ಪ್ರಕಾರ ಕೃಷಿ ಉತ್ಪನ್ನದ ಬೆಂಬಲ ಬೆಲೆ ನೀಡಿಕೆಗೆ ಕಾನೂನು ಬದ್ಧ ಗ್ಯಾರಂಟಿ ನೀಡಬೇಕು. NCR ಹಾಗೂ ಸುತ್ತಲಿನ ಪ್ರದೇಶದ ವಾಯುಗುಣಮಟ್ಟ ನಿರ್ವಹಣೆ ಸುಗ್ರೀವಾಜ್ಞೆಗೆ ತಿದ್ದುಪಡಿ ತರಬೇಕು. ರೈತರಿಗೆ ಈ‌ ಕಾಯಿದೆಯಡಿ ದಂಡವನ್ನು ವಿಧಿಸಬಾರದು. ರೈತರ ಹಿತ ರಕ್ಷಣೆಗೆ ವಿದ್ಯುತ್ ತಿದ್ದುಪಡಿ ಮಸೂದೆ 2020 ಕ್ಕೆ ತಿದ್ದುಪಡಿ ಸೇರಿದಂತೆ ಇತರ ಬೇಡಿಕೆಗಳನ್ನ ರೈತರು ಸರ್ಕಾರದ ಮುಂದಿಟ್ಟಿದ್ದಾರೆ.

ಮೇಲೆ ವಿವರಿಸಿದ 4 ಬೇಡಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಬೇಕೆಂದು ರೈತ ಸಂಘಟನೆಗಳಿಂದ ಅಜೆಂಡಾ ಫಿಕ್ಸ್ ಆಗಿದೆ‌. ಅಜೆಂಡಾವನ್ನ ಕೇಂದ್ರ ಕೃಷಿ ಇಲಾಖೆಗೆ ರವಾನಿಸಿದ್ದಾರೆ. ಇಂದಿನ ಸಭೆಗೂ ಮುನ್ನಾ ಗೃಹ ಸಚಿವ ಅಮಿತ್ ಶಾ ಜೊತೆ ಕೃಷಿ ಸಚಿವ ನರೇಂದ್ರಸಿಂಗ್ ತೋಮರ್, ರೇಲ್ವೆ ಸಚಿವ ಪಿಯೂಷ್ ಗೋಯಲ್ ಚರ್ಚೆ ನಡೆಸಿದ್ದಾರೆ‌. ರೈತರ ಮನವೊಲಿಸುವ ಬಗ್ಗೆ ಮಾತುಕತೆ ನಡೆಸಿದ್ದಾರೆ. ಒಟ್ಟಾರೆ ರೈತರು ಹಾಗೂ ಸರ್ಕಾರದ ನಡುವಿನ ಹಗ್ಗಜಗ್ಗಾಟ ಇಂದಿನ ಸಭೆಯ ಬಳಿಕ ಕೊನೆಯಾಗಲಿದೆಯಾ ಅಥವಾ ಮತ್ತೆ ಮುಂದುವರಿಯಲಿದೆಯಾ ಅನ್ನೋದನ್ನ ಕಾದು ನೋಡ್ಬೇಕಿದೆ.

ಕೃಷಿ ಕಾಯ್ದೆ ವಿರುದ್ಧ ರೈತರ ಹೋರಾಟ: 7ನೇ ಸುತ್ತಿನ ಮಾತುಕತೆಗೆ ಸರ್ಕಾರ ಸಿದ್ಧತೆ, ಇಂದಾದರೂ ಈಡೇರುತ್ತಾ ರೈತರ ಬೇಡಿಕೆಗಳು?

Published On - 4:19 pm, Wed, 30 December 20

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್