20 ಲಕ್ಷ ಕೋಟಿ ಪ್ಯಾಕೇಜ್: ಸಚಿವೆ ನಿರ್ಮಲಾ ಬತ್ತಳಿಕೆಯಲ್ಲಿ ಏನಿದೆಯೋ? ಸಂಜೆ ಬಯಲು

ದೆಹಲಿ: ನಿನ್ನೆ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ದೇಶದ ಆರ್ಥಿಕತೆ ಹಾಗೂ ಸಂಕಷ್ಟದಲ್ಲಿರೋ ಜನರ ಅನುಕೂಲಕ್ಕಾಗಿ ಬರೋಬ್ಬರಿ ₹20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ. ₹20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್​ನಲ್ಲಿ ಏನಿರುತ್ತೆ, ಯಾವ ವಲಯಕ್ಕೆ ಎಷ್ಟು ಹಣ ನೀಡುತ್ತಾರೆ. ಇದರಿಂದ ಯಾರಿಗೆಲ್ಲಾ ಅನುಕೂಲವಾಗಲಿದೆ ಎನ್ನುವುದರ ಬಗ್ಗೆ ವಿವರಣೆ ನೀಡಲಿದ್ದಾರೆ.

20 ಲಕ್ಷ ಕೋಟಿ ಪ್ಯಾಕೇಜ್: ಸಚಿವೆ ನಿರ್ಮಲಾ ಬತ್ತಳಿಕೆಯಲ್ಲಿ ಏನಿದೆಯೋ? ಸಂಜೆ ಬಯಲು
ಸಾಧು ಶ್ರೀನಾಥ್​

Updated on: May 13, 2020 | 2:02 PM

ದೆಹಲಿ: ನಿನ್ನೆ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ದೇಶದ ಆರ್ಥಿಕತೆ ಹಾಗೂ ಸಂಕಷ್ಟದಲ್ಲಿರೋ ಜನರ ಅನುಕೂಲಕ್ಕಾಗಿ ಬರೋಬ್ಬರಿ ₹20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ. ₹20 ಲಕ್ಷ ಕೋಟಿ ಮೊತ್ತದ ಆರ್ಥಿಕ ಪ್ಯಾಕೇಜ್​ನಲ್ಲಿ ಏನಿರುತ್ತೆ, ಯಾವ ವಲಯಕ್ಕೆ ಎಷ್ಟು ಹಣ ನೀಡುತ್ತಾರೆ. ಇದರಿಂದ ಯಾರಿಗೆಲ್ಲಾ ಅನುಕೂಲವಾಗಲಿದೆ ಎನ್ನುವುದರ ಬಗ್ಗೆ ವಿವರಣೆ ನೀಡಲಿದ್ದಾರೆ.

Published On - 10:51 am, Wed, 13 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us