AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zojila Tunnel: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್​ ಗಡ್ಕರಿಯಿಂದ ಇಂದು ಜೋಜಿಲಾ ಸುರಂಗ ಮಾರ್ಗ ಯೋಜನೆಯ ಪರಿಶೀಲನೆ

ಗಡಿ ಪ್ರದೇಶದಲ್ಲಿರುವ ಈ ಸುರಂಗ ಮಾರ್ಗವು ತುರ್ತು ಪರಿಸ್ಥಿತಿಯಲ್ಲಿ ಸೇನಾಪಡೆ, ಯುದ್ಧೋಪಕರಣಗಳು ಮತ್ತು ಯುದ್ಧ ಟ್ಯಾಂಕ್​ಗಳನ್ನು ಗಡಿಯಲ್ಲಿ ನಿಯೋಜಿಸಲು ಅನುಕೂಲ ಕಲ್ಪಿಸಲಿದೆ.

Zojila Tunnel: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್​ ಗಡ್ಕರಿಯಿಂದ ಇಂದು ಜೋಜಿಲಾ ಸುರಂಗ ಮಾರ್ಗ ಯೋಜನೆಯ ಪರಿಶೀಲನೆ
ಝೊಜಿಲಾ ಸುರಂಗ ಮಾರ್ಗ
Follow us
TV9 Web
| Updated By: Digi Tech Desk

Updated on:Sep 28, 2021 | 12:52 PM

ದೆಹಲಿ: ಸ್ವತಂತ್ರ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಮಹತ್ವದ ಎಂಜಿನಿಯರಿಂಗ್ ನಿರ್ಮಾಣ ಎನಿಸಿಕೊಂಡಿರುವ ಲಡಾಖ್​ನ ಕಾರ್ಗಿಲ್ ಜಿಲ್ಲೆಯಲ್ಲಿರುವ ಜೋಜಿಲಾ ಸುರಂಗ ಮಾರ್ಗದ ಕೆಲಸದ ಪ್ರಗತಿಯನ್ನು ಪರಿಶೀಲಿಸಲಿದ್ದಾರೆ. ಈ ಸುರಂಗ ಲೋಕಾರ್ಪಣೆಗೊಂಡಾಗ ಲಡಾಖ್ ಜನರ 30 ವರ್ಷಗಳ ನಿರೀಕ್ಷೆ ಈಡೇರಿದಂತೆ ಆಗುತ್ತದೆ. ಹೈದರಾಬಾದ್ ಮೂಲದ ಮೇಘಾ ಎಂಜಿನಿಯಿಂಗ್ ಕಂಪನಿಯು (MEIL) ಈ ಸುರಂಗ ನಿರ್ಮಾಣ ಯೋಜನೆ ಅನುಷ್ಠಾನದ ಹೊಣೆ ಹೊತ್ತಿತ್ತು.

ಕೇಂದ್ರ ಕ್ರೀಡೆ ಮತ್ತು ಯುವಜನ ಸೇವಾ ಖಾತೆ ಸಚಿವ ಅನುರಾಗ್ ಠಾಕೂರ್ ಭಾನುವಾರ ಝೊಜಿಲಾ ಸುರಂಗ ಪರಿಶೀಲಿಸಿದರು. 14.15 ಕಿಮೀ ಅಂತರದ ಈ ಸುರಂಗವು ಶ್ರೀನಗರ-ಕಾರ್ಗಿಲ್-ಲೇಹ್ ಸಂಪರ್ಕ ಬೆಸೆಯುವಲ್ಲಿ ಮಹತ್ವದ ಪಾತ್ರ ನಿರ್ವಹಿಸಲಿದೆ.

ಕಳೆದ ವರ್ಷ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಯೋಜನೆಗೆ ಚಾಲನೆ ನೀಡಿದ್ದರು. ಏಷ್ಯಾದ ಅತ್ಯಂತ ಉದ್ದದ ಈ ಸುರಂಗವು ಶ್ರೀನಗರ ಕಣಿವೆ ಮತ್ತು ಲೇಹ್ ನಡುವೆ ಸರ್ವಋತು ಸಂಪರ್ಕ ಕಾಪಾಡಲು ನೆರವಾಗುತ್ತದೆ. ವಿಶ್ವದ ಅತ್ಯಂತ ಅಪಾಯಕಾರಿ ರಸ್ತೆಗಳಲ್ಲಿ ಒಂದು ಎನಿಸಿಕೊಂಡಿರುವ ಈ ರಸ್ತೆಯಲ್ಲಿ ಸಂಚರಿಸುವುದು ಸವಾಲಿನ ವಿಷಯವಾಗಿತ್ತು. ಚೀನಾ ಮತ್ತು ಪಾಕಿಸ್ತಾನದ ಗಡಿಯ ಸನಿಹದಲ್ಲಿರುವ ಈ ಸುರಂಗ ಮಾರ್ಗವು ದೇಶದ ಭದ್ರತೆ ದೃಷ್ಟಿಯಿಂದ ಪ್ರಾಮುಖ್ಯತೆ ಪಡೆದಿದೆ.

ರಾಷ್ಟ್ರೀಯ ಹೆದ್ದಾರಿ 1ರ ಮೂಲಕ ಶ್ರೀನಗರ ಕಣಿವೆ ಮತ್ತು ಲೇಹ್ (ಲಡಾಖ್ ಪ್ರಸ್ತಭೂಮಿ) ನಡುವೆ ಸರ್ವಋತು ಸಂಪರ್ಕ ಒದಗಿಸುವ ಈ ರಸ್ತೆಯು ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಏಕತೆ ಕಾಪಾಡುವ ದೃಷ್ಟಿಯಿಂದಲೂ ಮಹತ್ವದ ಪಾತ್ರ ನಿರ್ವಹಿಸುತ್ತದೆ.

ಝೊಜಿಲಾ ಸುರಂಗವು ಸೇವೆಗೆ ಸಮರ್ಪಣೆಗೊಂಡ ನಂತರ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿ 1ರ ಸಂಚಾರವು ಭೂ ಕುಸಿತದ ಆತಂಕದಿಂದ ಮುಕ್ತವಾಗುತ್ತದೆ. ಸಂಚಾರ ಸುರಕ್ಷೆ ಸುಧಾರಿಸುವ ಜೊತೆಗೆ ಸಂಚಾರದ ಅವಧಿಯನ್ನು 3.15 ತಾಸು ಕಡಿಮೆ ಮಾಡುತ್ತದೆ. ₹6800 ಕೋಟಿ ವೆಚ್ಚದ ಈ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮೇ 2018ರಲ್ಲಿ ಶಿಲಾನ್ಯಾಸ ನೆರವೇರಿಸಿದ್ದರು.

ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸುವ ಆತ್ಮನಿರ್ಭರ್ ಭಾರತ ಪರಿಕಲ್ಪನೆಗೂ ಈ ಸುರಂಗ ಪೂರಕವಾಗಿದೆ. ಸುರಂಗ ನಿರ್ಮಾಣದ ನಂತರ ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಚಟುವಟಿಕೆಗೆ ಹೊಸ ಬಲ ಸಿಗಲಿದೆ.

ಗಡಿ ಪ್ರದೇಶದಲ್ಲಿರುವ ಈ ಸುರಂಗ ಮಾರ್ಗವು ತುರ್ತು ಪರಿಸ್ಥಿತಿಯಲ್ಲಿ ಸೇನಾಪಡೆ, ಯುದ್ಧೋಪಕರಣಗಳು ಮತ್ತು ಯುದ್ಧ ಟ್ಯಾಂಕ್​ಗಳನ್ನು ಗಡಿಯಲ್ಲಿ ನಿಯೋಜಿಸಲು ಅನುಕೂಲ ಕಲ್ಪಿಸಲಿದೆ.

ಜೋಜಿಲಾ ಯೋಜನೆಯ ಪ್ರಾಮುಖ್ಯತೆ – ಶ್ರೀನಗರ, ದ್ರಾಸ್, ಕಾರ್ಗಿಲ್ ಮತ್ತು ಲೇಹ್ ಪ್ರದೇಶದಳಿಗೆ ಝೊಜಿಲಾ ಸುರಂಗವು ಸರ್ವಋತು ಸಂಪರ್ಕ ಕಲ್ಪಿಸುತ್ತದೆ. – ಚಳಿಗಾಲದಲ್ಲಿ ಭಾರೀ ಹಿಮಪಾತದ ಕಾರಣದಿಂದ ದೇಶದ ಇತರ ಪ್ರದೇಶಗಳ ಸಂಪರ್ಕ ಕಡಿದುಕೊಳ್ಳುವ ಈ ಪ್ರದೇಶಗಳಲ್ಲಿ ನಿರಂತರ ರಸ್ತೆ ಸಂಪರ್ಕದ ಸಾಧ್ಯತೆಯನ್ನು ಮುಕ್ತವಾಗಿರಿಸುತ್ತದೆ. – ಆರಂಭಿಕ ಕಾರ್ಯಗಳು ಮುಗಿದ ನಂತರ ಈ ರಸ್ತೆಯ ಮಹತ್ವದ ಹಂತಕ್ಕೆ ಅಕ್ಟೋಬರ್ 2020ರಂದು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಿದ್ದರು. – ಸಮುದ್ರಮಟ್ಟದಿಂದ 11,578 ಅಡಿ ಎತ್ತರದಲ್ಲಿ ಈ ರಸ್ತೆಯನ್ನು ನಿರ್ಮಿಸುವುದು ದೊಡ್ಡ ಸವಾಲಾಗಿತ್ತು. ಮೇಘಾ ಎಂಜಿನಿಯರಿಂಗ್ ಸಂಸ್ಥೆಯು ಈ ರಸ್ತೆ ನಿರ್ಮಾಣದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. – ಕಾರ್ಗಿಲ್ ಮತ್ತು ಲಡಾಖ್ ಪ್ರದೇಶದ ಜನರು ಕಳೆದ 30 ವರ್ಷಗಳಿಂದಲೂ ಈ ರಸ್ತೆ ನಿರ್ಮಾಣವಾಗಬೇಕು ಎಂದು ಬೇಡಿಕೆಯಿಟ್ಟಿದ್ದರು. – ಗಿರಿ ಶಿಖರಗಳ ಮಾರ್ಗದಲ್ಲಿ ಸರಕು ಸಾಗಣೆಗೆ ಕೆಟ್ಟ ಹವಾಮಾನವು ದೊಡ್ಡ ಸವಾಲಾಗಿತ್ತು. ಹೀಗಾಗಿ ಸುರಂಗ ಮಾರ್ಗ ನಿರ್ಮಾಣವಾಗಬೇಕು ಎಂದು ಜನರು ಕೋರುತ್ತಿದ್ದರು. – 2013ರ ಯುಪಿಎ ಆಡಳಿತದಲ್ಲಿಯೇ ಈ ರಸ್ತೆ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ನಾಲ್ಕು ಬಾರಿ ಟೆಂಡರ್ ಕರೆಯಲಾಗಿತ್ತು. ಕೊನೆಗೆ ಮೋದಿ ಅಧಿಕಾರ ಅವಧಿಯಲ್ಲಿ ಈ ಯೋಜನೆ ಅನುಷ್ಠಾನಗೊಂಡಿತು. – ಭೂಮಿಪೂಜೆ ಸಮಾರಂಭದಲ್ಲಿ ಮಾತನಾಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ, ಮೇಘಾ ಎಂಜಿನಿಯರಿಂಗ್ ಸಂಸ್ಥೆಯು ಸಕಾಲದಲ್ಲಿ ಯೋಜನೆಗಳನ್ನು ಪೂರ್ಣಗೊಳಿಸುವಲ್ಲಿ ಖ್ಯಾತಿ ಪಡೆದಿದೆ. ಕೇವಲ ನಾಲ್ಕು ವರ್ಷದಲ್ಲಿ ಯೋಜನೆ ಪೂರ್ಣಗೊಳಿಸಿದ ಹೊಸ ದಾಖಲೆ ಬರೆಯಲಿದೆ ಎಂದು ಹೇಳಿದ್ದರು. – ಸುರಂಗಕ್ಕಾಗಿ ಆರಂಭದಲ್ಲಿ ₹ 10,643 ಕೋಟಿ ವೆಚ್ಚವನ್ನು ಅಂದಾಜು ಮಾಡಲಾಗಿತ್ತು. ರಸ್ತೆ ಮತ್ತು ಸುರಂಗವನ್ನು ಪ್ರತ್ಯೇಕವಾಗಿ ನಿರ್ಮಿಸುವ ಮೂಲಕ ₹ 3,835 ಕೋಟಿ ಉಳಿತಾಯವಾಗಲಿದೆ ಎಂದು ಸರ್ಕಾರ ಅಂದಾಜಿಸಿದೆ. – ಈ ಅತ್ಯಾಧುನಿಕ ಸುರಂಗದಲ್ಲಿ ಸಿಸಿಟಿವಿ ಕ್ಯಾಮೆರಾ, ಅತಿಭಾರದ ವಾಹನಗಳನ್ನು ಗುರುತಿಸುವ ವ್ಯವಸ್ಥೆ, ಸ್ವಯಂಚಾಲಿತ ಬೆಂಕಿ ಗುರುತಿಸುವ ವ್ಯವಸ್ಥೆ, ಬೆಂಕಿಯ ಕರೆಗಂಟೆ ಸೇರಿದಂತೆ ಹಲವು ಸೌಕರ್ಯಗಳು ಈ ಸುರಂಗದಲ್ಲಿದೆ. ಈ ಸುರಂಗದಲ್ಲಿ ಸಂಚಾರಕ್ಕೆ ಗಂಟೆಗೆ 80 ಕಿಮೀ ವೇಗಮಿತಿ ವಿಧಿಸಲಾಗಿದೆ.

(Union minister Nitin Gadkari to visit the Jozilla tunnel on September 28)

ಇದನ್ನೂ ಓದಿ: ಮಂಗಳೂರು-ಬೆಂಗಳೂರು ಶಿರಾಡಿ ಸುರಂಗ ಮಾರ್ಗಕ್ಕೆ ಯೋಜನೆ ಸಿದ್ಧ: ನಿತಿನ್ ಗಡ್ಕರಿ

ಇದನ್ನೂ ಓದಿ: 24 ಗಂಟೆಯಲ್ಲಿ 2.5 ಕಿ.ಮೀ. ಉದ್ದದ ಚತುಷ್ಪಥ ರಸ್ತೆ ನಿರ್ಮಾಣ; ಭಾರತದ ವಿಶ್ವದಾಖಲೆ ಇದು ಎಂದ ಸಚಿವ ನಿತಿನ್ ಗಡ್ಕರಿ

Published On - 12:50 am, Tue, 28 September 21

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ