Pralhad Joshi: ದ್ವೀಪ ರಾಷ್ಟ್ರದಲ್ಲೂ ಕೇಂದ್ರ ಸಚಿವರ ಕನ್ನಡ ಡಿಂಡಿಮ : ಸಚಿವರ ಭೇಟಿ ತಂದಿತು ವೆಸ್ಟರ್ನ್ ಆಸ್ಟ್ರೇಲಿಯಾ ಕನ್ನಡ ಸಂಘದ ಸದಸ್ಯರಿಗೆ ಸಂಭ್ರಮ

Western Australia Kannada Sangha: ಕನ್ನಡ ನಾಡಲ್ಲಿ ಕನ್ನಡ ಕಲಿಸೋದಕ್ಕೆ ರಾಜ್ಯ ಸರಕಾರ ಕಡ್ಡಾಯ ನೀತಿ ಜಾರಿಗೆ ತರಬೇಕಾಗದ ಸ್ಥಿತಿ ಇರುವಾಗ ಆಸ್ಟ್ರೇಲಿಯಾದ ಶಾಲೆಯೊಂದರಲ್ಲಿ ಕನ್ನಡ ಬೋಧನೆ ನಡೆಯುತ್ತಿದೆ, ದ್ವೀಪ ರಾಷ್ಟ್ರದಲ್ಲಿ ಕನ್ನಡದ ಕಲರವ ಕೇಳಿ ಬರುತ್ತಿದೆ ಎಂಬುದು ನಿಜಕ್ಕೂ ಅಭಿಮಾನಪಡುವಂತಹ ವಿಷಯ.

Pralhad Joshi: ದ್ವೀಪ ರಾಷ್ಟ್ರದಲ್ಲೂ ಕೇಂದ್ರ ಸಚಿವರ ಕನ್ನಡ ಡಿಂಡಿಮ : ಸಚಿವರ ಭೇಟಿ ತಂದಿತು ವೆಸ್ಟರ್ನ್ ಆಸ್ಟ್ರೇಲಿಯಾ ಕನ್ನಡ ಸಂಘದ ಸದಸ್ಯರಿಗೆ ಸಂಭ್ರಮ
ದ್ವೀಪ ರಾಷ್ಟ್ರದಲ್ಲೂ ಕೇಂದ್ರ ಸಚಿವರ ಕನ್ನಡ ಡಿಂಡಿಮ : ಸಚಿವರ ಭೇಟಿ ತಂದಿತು ವೆಸ್ಟರ್ನ್ ಆಸ್ಟ್ರೇಲಿಯಾ ಕನ್ನಡ ಸಂಘದ ಸದಸ್ಯರಿಗೆ ಸಂಭ್ರಮ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 06, 2022 | 2:10 PM

ಪರ್ತ್​, ಜುಲೈ 05: ವೆಸ್ಟರ್ನ್ ಆಸ್ಟ್ರೇಲಿಯಾ ಕನ್ನಡ ಸಂಘದವರು (Western Australia Kannada Sangha) ಕನ್ನಡ ಶಾಲೆಗಳನ್ನು ನಡೆಸುತ್ತಿದ್ದು ರಾಜ್ಯೋತ್ಸವ, ಯುಗಾದಿ, ಸ್ವಾತಂತ್ರ್ಯೋತ್ಸವ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಆಸ್ಟ್ರೇಲಿಯಾದಲ್ಲಿರುವ ನಮ್ಮ ಕನ್ನಡಿಗರ ಕನ್ನಡ ಪ್ರೇಮ ನಿಜಕ್ಕೂ ಮೆಚ್ಚುವಂತದ್ದು. ಮಾತ್ರವಲ್ಲ, ಇತರರಿಗೂ ಮಾದರಿ ಎಂದು ಪ್ರಲ್ಹಾದ ಜೋಶಿಯವರು ಅಭಿಪ್ರಾಯಪಟ್ಟಿದ್ದಾರೆ. ಇಂದು ಆಸ್ಟ್ರೇಲಿಯಾದ ಪರ್ತ್​ ನಲ್ಲಿರುವ ನಮ್ಮ ಕನ್ನಡಿಗರೊಂದಿಗೆ ಸಭೆಯಲ್ಲಿ ಪಾಲ್ಗೊಂಡಿದ್ದು ಅತ್ಯಂತ ಆತ್ಮೀಯ ಕ್ಷಣ ಎಂದು ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ (Pralhad Joshi) ಹೇಳಿದ್ದಾರೆ.

ಇಲ್ಲಿ ಎಲ್ಲ ಕಾರ್ಯಕ್ರಮಗಳು ಅತ್ಯಂತ ಕನ್ನಡಮಯವಾಗಿದ್ದು, ಕನ್ನಡನಾಡಿನಲ್ಲಿ ನಡೆದಂತೆ ಆಸ್ಟ್ರೇಲಿಯಾದಲ್ಲೂ ಕನ್ನಡ ಕಾರ್ಯಕ್ರಮಗಳ ನಡೆಸುತ್ತಿರುವದು ಹೆಮ್ಮೆಯ ವಿಷಯ.

ಕನ್ನಡ ನಾಡಲ್ಲಿ ಕನ್ನಡ ಕಲಿಸೋದಕ್ಕೆ ರಾಜ್ಯ ಸರಕಾರ ಕಡ್ಡಾಯ ನೀತಿ ಜಾರಿಗೆ ತರಬೇಕಾಗದ ಸ್ಥಿತಿ ಇರುವಾಗ ಆಸ್ಟ್ರೇಲಿಯಾದ ಶಾಲೆಯೊಂದರಲ್ಲಿ ಕನ್ನಡ ಬೋಧನೆ ನಡೆಯುತ್ತಿದೆ, ದ್ವೀಪ ರಾಷ್ಟ್ರದಲ್ಲಿ ಕನ್ನಡದ ಕಲರವ ಕೇಳಿ ಬರುತ್ತಿದೆ ಎಂಬುದು ನಿಜಕ್ಕೂ ಅಭಿಮಾನಪಡುವಂತಹ ವಿಷಯ. ಬಹುತೇಕ ವಿಶ್ವದ ಎಲ್ಲಾ ರಾಷ್ಟ್ರಗಳಲ್ಲಿಯೂ ಕನ್ನಡ ಸಂಘಟನೆಗಳಿವೆ. ಕನ್ನಡದ ಸಂಸ್ಕೃತಿಯನ್ನು ವಿದೇಶಗಳಲ್ಲಿಯೂ ಪಸರಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದಲೂ ಈ ಶಾಲೆ ಕನ್ನಡ ಬೋಧನೆಯನ್ನು ಮಾಡುತ್ತಿದೆ.

ಆಸ್ಟ್ರೇಲಿಯಾದಲ್ಲಿ ಬಹು ಸಂಖ್ಯೆಯಲ್ಲಿ ಕನ್ನಡಿಗರಿದ್ದು, ಕನ್ನಡ ಸೇವೆ ಮಾಡುತ್ತಿದ್ದಾರೆ ಎಂದೂ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡಿಗನಾಗಿರು ಎಂಬ ಕವಿವಾಣಿಯಂತೆ ನಮ್ಮ ಕನ್ನಡಿಗರು ಪ್ರಪಂಚದ ವಿವಿಧ ದೇಶಗಳಲ್ಲಿ ಇದ್ದರೂ ನಮ್ಮ ಕನ್ನಡದ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ಇತರೆ ರಾಷ್ಟ್ರಗಳಲ್ಲಿರುವ ಕನ್ನಡಿಗರ ರಕ್ಷಣೆಗೆ ನಿಂತಿರುವುದು ಶ್ಲ್ಯಾಘನೀಯ. ಇದೇ ರೀತಿ ತಮ್ಮ ಕನ್ನಡ ಸೇವೆ ಮುಂದುವರೆಯಲಿ ಎಂದೂ ಸಚಿವ ಜೋಶಿಯವರು ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದಲ್ಲಿರುವ ಕನ್ನಡಿಗರಿಗೆ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಕನ್ನಡ ಸಂಘದ ಅಧ್ಯಕ್ಷರು ಮತ್ತು ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Published On - 8:17 pm, Tue, 5 July 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ