ಕೇಂದ್ರ ರಾಜ್ಯ ಸಚಿವ ಎಸ್‌ಪಿ ಸಿಂಗ್ ಬಾಘೇಲ್ (SP Singh Baghel) ಅವರನ್ನು ಕೇಂದ್ರ ಕಾನೂನು ಸಚಿವಾಲಯದಿಂದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ವರ್ಗಾಯಿಸಲಾಗಿದ್ದು, ಅಲ್ಲಿ ಅವರು ರಾಜ್ಯ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ಗುರುವಾರ ತಿಳಿಸಿದೆ. ಪ್ರಧಾನಿ ಸಲಹೆಯಂತೆ ಭಾರತದ ರಾಷ್ಟ್ರಪತಿಗಳು, ರಾಜ್ಯ ಸಚಿವ ಪ್ರೊ. ಎಸ್.ಪಿ. ಸಿಂಗ್ ಬಾಘೇಲ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ (Union Ministry of Health and Family Welfare)ರಾಜ್ಯ ಸಚಿವರಾಗಿ ನಿಯೋಜಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ.
ಇಂದು ಬೆಳಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಅವರನ್ನು ಭೂ ವಿಜ್ಞಾನ ಸಚಿವರನ್ನಾಗಿ ನಿಯೋಜಿಸಲಾಗಿದ್ದು, ಅರ್ಜುನ್ ರಾಮ್ ಮೇಘವಾಲ್ ಅವರಿಗೆ ಕಾನೂನು ಸಚಿವಾಲಯದ ಉಸ್ತುವಾರಿಯನ್ನು ನೀಡಲಾಗಿದೆ.
ಪ್ರಧಾನಮಂತ್ರಿಯವರ ಸಲಹೆಯಂತೆ ಭಾರತದ ರಾಷ್ಟ್ರಪತಿಗಳು, ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರ ನಡುವೆ ಖಾತೆಗಳ ಮರುಹಂಚಿಕೆಗೆ ನಿರ್ದೇಶನ ನೀಡಿದ್ದಾರೆ. ಭೂ ವಿಜ್ಞಾನ ಸಚಿವಾಲಯದ ಖಾತೆಯನ್ನು ಕಿರಣ್ ರಿಜಿಜು ಅವರಿಗೆ ನಿಯೋಜಿಸಲಾಗಿದೆ. ಕಿರಣ್ ರಿಜಿಜು ಅವರ ಬದಲಿಗೆ ಅವರ ಅಸ್ತಿತ್ವದಲ್ಲಿರುವ ಖಾತೆಗಳ ಜೊತೆಗೆ ಕಾನೂನು ಮತ್ತು ನ್ಯಾಯ ಸಚಿವಾಲಯದ ರಾಜ್ಯ ಸಚಿವರಾಗಿ ಸ್ವತಂತ್ರ ಉಸ್ತುವಾರಿಯನ್ನು ಅರ್ಜುನ್ ರಾಮ್ ಮೇಘವಾಲ್ ಅವರಿಗೆ ನೀಡಲಾಗಿದೆ ಎಂದು ರಾಷ್ಟ್ರಪತಿಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ:ಐಎಎಸ್ ಆಗಿ ರಾಜಕಾರಣಕ್ಕೆ, ಸೈಕಲ್ನಲ್ಲೇ ಲೋಕಸಭೆಗೆ ಬರುತ್ತಿದ್ದ ಸಂಸದ; ನೂತನ ಕಾನೂನು ಸಚಿವ ಮೇಘವಾಲ್ ಕಿರು ಪರಿಚಯ
ರಿಜಿಜು ಜುಲೈ 8, 2021 ರಂದು ಕಾನೂನು ಮತ್ತು ನ್ಯಾಯ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಅವರು ಮೇ 2019 ರಿಂದ ಜುಲೈ 2021 ರವರೆಗೆ ಯುವ ವ್ಯವಹಾರಗಳು ಮತ್ತು ಕ್ರೀಡೆಗಳ ರಾಜ್ಯ (ಸ್ವತಂತ್ರ ಉಸ್ತುವಾರಿ) ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ